ಪಿಂಚಣಿದಾರರ ಮನೆ ಬಾಗಿಲಿನಲ್ಲಿ ಡಿಜಿಟಲ್ ಲೈಫ್ ಪ್ರಮಾಣಪತ್ರ ಸಲ್ಲಿಸಲು ವ್ಯವಸ್ಥೆ

Date:

ಪಿಂಚಣಿದಾರರು ವೈಯಕ್ತಿಕವಾಗಿ ಜೀವನ ಪ್ರಮಾಣಪತ್ರವನ್ನು ಸಲ್ಲಿಸುವ ಸಮಯದಲ್ಲಿ ಎದುರಿಸುತ್ತಿರುವ ತೊಂದರೆಗಳನ್ನು ತಪ್ಪಿಸುವ ಸಲುವಾಗಿ ಕರ್ನಾಟಕ ರಾಜ್ಯ ಸರ್ಕಾರ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ (ಡಿಎಲ್‍ಸಿ) ಸೇವೆಗಳನ್ನು ಸುಲಭವಾಗಿ ಒದಗಿಸಲು ಮುಂದಾಗಿದೆ.

ಭಾರತೀಯ ಅಂಚೆ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್’ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಸಲ್ಲಿಸಲು ವ್ಯವಸ್ಥೆ ಮಾಡಿದ್ದು, ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಎಂಒಯುಗೆ ಸಹಿ ಹಾಕಿದೆ.

ಪಿಂಚಣಿದಾರರು ತಮ್ಮ ಡಿಜಿಟಲ್ ಲೈಫ್ ಪ್ರಮಾಣಪತ್ರವನ್ನು ಕೆಲವೇ ನಿಮಿಷಗಳಲ್ಲಿ ಪೋಸ್ಟ್ ಮ್ಯಾನ್ ಮೂಲಕ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ಪಿಪಿಒ ಸಂಖ್ಯೆ ಮತ್ತು ಪಿಂಚಣಿದಾರರ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ತಮ್ಮ ಬಯೋಮೆಟ್ರಿಕ್ (ಬೆರಳಚ್ಚು) ವೆರಿಫೈ ಮಾಡಿ ಸಲ್ಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು ತಮ್ಮ ಹತ್ತಿರದ ಅಂಚೆ ಕಚೇರಿಯಲ್ಲಿ ಅಥವಾ ಪೋಸ್ಟ್‌ ಮ್ಯಾನ್ ಮೂಲಕ ಕೇವಲ ₹70 (ಜಿಎಸ್‍ಟಿ ಸೇರಿದಂತೆ) ಶುಲ್ಕ ನೀಡಿ ಈ ಸೌಲಭ್ಯವನ್ನು ಪಡೆದು ತಮ್ಮ ಡಿಜಿಟಲ್ ಲೈಫ್ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.

ತಿಳಿವಳಿಕೆ ಪತ್ರದ (ಎಂಒಯು) ಅಡಿಯಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನವೆಂಬರ್ 1 ರಿಂದ 30 ರವರೆಗಿನ ಮಸ್ಟರಿಂಗ್ ಅವಧಿಯಲ್ಲಿ 5.4 ಲಕ್ಷಕ್ಕೂ ಅಧಿಕ ಕರ್ನಾಟಕ ಸರ್ಕಾರದ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ಡಿಜಿಟಲ್ ಲೈಫ್ ಸರ್ಟಿಫಿಕೇಟ್ ಸೇವೆಗಳನ್ನು ಒದಗಿಸುತ್ತದೆ.

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಅನ್ನು 2018ರ ಸೆಪ್ಟೆಂಬರ್ 1ರಂದು ರಾಷ್ಟ್ರವ್ಯಾಪಿ ಪ್ರಾರಂಭಿಸಲಾಯಿತು. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್‍ನ ಸೇವೆಗಳು ಈಗಾಗಲೇ ಸೇರ್ಪಡೆಗೊಂಡಿರುವ 8 ಕೋಟಿಗೂ ಹೆಚ್ಚು ಗ್ರಾಹಕರಿಗೆ ಹಾಗೂ ಇನ್ನಿತರರಿಗೆ ದೇಶಾದ್ಯಂತ 1,36,000 ಅಂಚೆ ಕಚೇರಿಗಳ ಮೂಲಕ ಲಭ್ಯವಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಯುವತಿ ಮೇಲೆ ಅತ್ಯಾಚಾರ – ಜಾತಿ ನಿಂದನೆ; ಆರೋಪಿ ಬಂಧನ

ಕರ್ನಾಟಕದಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ 31 ಶಾಖೆಗಳನ್ನು ಹೊಂದಿದ್ದು, ಅದರ ಜೊತೆಗೆ 9,500ಕ್ಕೂ ಹೆಚ್ಚು ಪೋಸ್ಟ್‌ ಮ್ಯಾನ್‍ಗಳು ಅವರ ದೈನಂದಿನ ಡೆಲಿವರಿ ಬೀಟ್‍ನಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ನೀಡಲು ಸ್ಮಾರ್ಟ್ ಪೋನ್ ಮತ್ತು ಬಯೋಮೆಟ್ರಿಕ್ ಸಾಧನಗಳನ್ನು ಹೊಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...