ತಾಪಮಾನ ಹೆಚ್ಚಳ | ಕಪ್ಪು ಕೋಟಿನಿಂದ ತಾತ್ಕಾಲಿಕ ಮುಕ್ತಿ ಪಡೆದ ರಾಜ್ಯದ ವಕೀಲರು

Date:

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಈ ಸಮಯದಲ್ಲಿ ಕಪ್ಪು ಬಣ್ಣದ ಬಟ್ಟೆ ಧರಿಸುವುದರಿಂದ ಮತ್ತಷ್ಟು ಆರೋಗ್ಯದಲ್ಲಿ ಸಮಸ್ಯೆ ಹೆಚ್ಚಳವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ವಕೀಲರ ಸಂಘದ ಮನವಿ ಆಧರಿಸಿದ ಕರ್ನಾಟಕ ಹೈಕೋರ್ಟ್‌ ಏ.18ರಿಂದ ಮೇ 31ರವರೆಗೆ ರಾಜ್ಯಾದ್ಯಂತ ಜಿಲ್ಲಾ, ವಿಚಾರಣಾ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಹಾಜರಾಗುವ ವಕೀಲರಿಗೆ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಿದೆ.

ಈ ಬಗ್ಗೆ ರಿಜಿಸ್ಟ್ರಾರ್ ಕೆ.ಎಸ್.ಭರತ್ ಕುಮಾರ್ ಮಂಗಳವಾರ ಸುತ್ತೋಲೆಯಲ್ಲಿ ಹೊರಡಿಸಿದ್ದಾರೆ. “ಬೇಸಿಗೆ ಸಮಯದಲ್ಲಿ ವಕೀಲರು ಕಪ್ಪು ಕೋಟು ಬದಲಿಗೆ ಸಾದಾ ಬಿಳಿ ಬಣ್ಣದ ಶರ್ಟ್ ಅಥವಾ ಸಲ್ವಾರ್-ಕಮೀಜ್ ಅಥವಾ ಯಾವುದೇ ಶಾಂತ ಬಣ್ಣದ ಬಟ್ಟೆಗಳನ್ನು ಧರಿಸಬಹುದು” ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚುತ್ತಿದ್ದು, ತಾಪಮಾನವೂ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಹೀಗಾಗಿ, ಇಂತಹ ಸಂದರ್ಭದಲ್ಲಿ ಕಪ್ಪು ಕೋಟು ಧರಿಸಿ ಬರುವುದರಿಂದ ಮತ್ತಷ್ಟು ಸಮಸ್ಯೆಯಾಗುತ್ತದೆ ಎಂದು ಏಪ್ರಿಲ್ 5 ರಂದು ಬೆಂಗಳೂರಿನ ವಕೀಲರ ಸಂಘದ ಅಧ್ಯಕ್ಷರು ಕಪ್ಪು ಕೋಟಿನಿಂದ ವಿನಾಯಿತಿ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ: ಈ ಮಾರ್ಗದಲ್ಲಿ ಸಂಚಾರ ಬಂದ್

ತಾತ್ಕಾಲಿಕವಾಗಿ ಕಪ್ಪು ಕೋಟು ಧರಿಸುವುದರಿಂದ ವಿನಾಯಿತಿ ನೀಡಬೇಕು ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಮನವಿಯನ್ನು ಆಧರಿಸಿ ಹೈಕೋರ್ಟ್‌ ವಿನಾಯಿತಿ ನೀಡಿದೆ.

ಕರ್ನಾಟಕ, ಒಡಿಶಾ, ಪಶ್ಚಿಮ ಬಂಗಾಳ, ಕೊಂಕಣ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೆಲವು ಭಾಗಗಳಲ್ಲಿ ಮುಂದಿನ ಐದು ದಿನಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...