ಬಿಟ್ ಕಾಯಿನ್ ಪ್ರಕರಣ | ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Date:

ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ ಫೆ.13ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಇನ್ಸ್​ಪೆಕ್ಟರ್ ಪ್ರಶಾಂತ್ ಬಾಬು, ಸೈಬರ್ ಎಕ್ಸ್​ಪರ್ಟ್ ಸಂತೋಷ್ ಬಂಧಿತರು. ಬಿಟ್‌ ಕಾಯಿನ್ ಪ್ರಕರಣ ಸಂಬಂಧ ಇಬ್ಬರನ್ನು ಎಸ್‌ಐಟಿ ಬಂಧನ ಮಾಡಿತ್ತು. ಎಸ್​ಐಟಿ ಆರು ದಿನಗಳ ಕಾಲ ಆರೋಪಿಗಳನ್ನು ವಶಕ್ಕೆ ಪಡೆದಿತ್ತು. ಇದೀಗ, ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾಗಿದೆ. ಈ ಹಿನ್ನೆಲೆ, ಎಸಿಎಂಎಂ 1ನೇ ಕೋರ್ಟ್​ಗೆ ಆರೋಪಿಗಳನ್ನು ಹಾಜರು ಪಡಿಸಲಾಗಿತ್ತು.

6 ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಇನ್ಸ್‌ಪೆಕ್ಟರ್‌ ಪ್ರಶಾಂತ್ ಬಾಬು ಮತ್ತು ಟೆಕ್ನಿಕಲ್ ಎಕ್ಸ್‌ಪರ್ಟ್‌ ಸಂತೋಷ್ 14 ದಿನ ನ್ಯಾಯಾಂಗ ಬಂಧನಕ್ಕೆ ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದಲ್ಲಿ ಇನ್ನಷ್ಟು ವಿಚಾರಣೆ ಬಾಕಿ ಇದೆ. ಹಾಗಾಗಿ, ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ಎಸ್‌ಐಟಿ ಪರ ವಕೀಲರು ಮನವಿ ಮಾಡಿದರು. ಇದಕ್ಕೆ ಆರೋಪಿ ಸಂತೋಷ್ ಪರ ವಕೀಲ ಸುಧನ್ವ ಆಕ್ಷೇಪಣೆ ವ್ಯಕ್ತಪಡಿಸಿದರು. 6 ದಿನಗಳ ಕಸ್ಟಡಿಯಲ್ಲಿ ತನಿಖೆಗೆ ಪೂರಕ ಮಾಹಿತಿ ಕಲೆ ಹಾಕುವ ಪ್ರಯತ್ನ ಮಾಡಿಲ್ಲ ಎಂದು ವಾದ ಮಂಡಿಸಿದರು.

ಈ ಸುದ್ದಿ ಓದಿದ್ದೀರಾ? ಜಯದೇವ ಹೃದ್ರೋಗ ಆಸ್ಪತ್ರೆಯ ಪ್ರಭಾರ ನಿರ್ದೇಶಕರಾಗಿ ಡಾ. ರವೀಂದ್ರನಾಥ್ ನೇಮಕ

ವಾದ–ಪ್ರತಿವಾದ ಆಲಿಸಿದ 1ನೇ ಎಸಿಎಂಎಂ ನ್ಯಾಯಾಲಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ‌ ಕಳುಹಿಸಿ ಆದೇಶ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...