ರಾಜ್ಯದಲ್ಲಿ 10ಕ್ಕೇರಿದ ಕಾಲರಾ ಪ್ರಕರಣಗಳ ಸಂಖ್ಯೆ : ಬೆಂಗಳೂರಿನಲ್ಲಿಯೇ 6 ಪ್ರಕರಣಗಳು!

Date:

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾಲರಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿಯೇ 6 ಕಾಲರಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಪ್ರಸಕ್ತ ವರ್ಷದಲ್ಲಿ ಕಾಲರಾ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 3, ಬೆಂಗಳೂರು ನಗರ ಜಿಲ್ಲೆ 6 ಹಾಗೂ ರಾಮನಗರ ಜಿಲ್ಲೆಯಲ್ಲಿ 1 ಕಾಲರಾ ಪ್ರಕರಣ ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕೃತ ಮಾಹಿತಿ ನೀಡಿದೆ.

ಇನ್ನು ಕಳೆದ 4 ವರ್ಷಗಳ ಕಾಲರಾ ಪ್ರಕರಣಗಳ ಅಂಕಿ ಅಂಶಗಳನ್ನು ನೋಡಿದರೆ, ಪ್ರತಿವರ್ಷ ಕ್ರಮವಾಗಿ 30, 40, 48 ಪ್ರಕರಣಗಳು ದಾಖಲಾಗಿದೆ. ಆದರೆ, ಈ ಬಾರಿ ಈಗಾಗಲೇ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ 6 ರಿಂದ 7 ಪ್ರಕರಣಗಳು ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಪ್ರಿಲ್ 4ರವರೆಗೆ ಒಟ್ಟು 6 (ಬಿಬಿಎಂಪಿ-3, ಬೆಂಗಳೂರು ನಗರ-2, ರಾಮನಗರ-01) ಕಾಲರಾ ಪ್ರಕರಣಗಳು ದೃಢಪಟ್ಟಿದ್ದವು ಎಂದು ಶುಕ್ರವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ಡಿ. ರಂದೀಪ್ ಮಾಹಿತಿ ನೀಡಿದ್ದರು. ಇದರ ಬೆನ್ನಲ್ಲೇ ಬೆಂಗಳೂರು ಮೆಡಿಕಲ್‌ ಕಾಲೇಜು ಹಾಸ್ಟೆಲ್‌ನ 47 ವಿದ್ಯಾರ್ಥಿನಿಯರು ಶುಕ್ರವಾರ ಅತಿಸಾರ ಹಾಗೂ ನಿರ್ಜಲೀಕರಣದಿಂದ ಅಸ್ವಸ್ಥಗೊಂಡು ವಿಕ್ಟೋರಿಯಾ ಆಸ್ಪತ್ರೆ ಸೇರಿದ್ದರು. ಈ ಪೈಕಿ ಇಬ್ಬರಿಗೆ ಕಾಲರಾ ಇರುವುದು ಪತ್ತೆಯಾಗಿತ್ತು. ಮತ್ತೊಬ್ಬ ವಿದ್ಯಾರ್ಥಿನಿಯ ವರದಿ ಬರಬೇಕಿದೆ. ಏಪ್ರಿಲ್‌ ತಿಂಗಳಲ್ಲಿ 4 ಪ್ರಕರಣಗಳು ಬೆಂಗಳೂರಿನಲ್ಲಿ ಪತ್ತೆಯಾಗಿರುವುದರಿಂದ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 10ಕ್ಕೇರಿದೆ.

ಈ ಸುದ್ದಿ ಓದಿದ್ದೀರಾ? ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದೂರು ದಾಖಲು

ಬೆಂಗಳೂರಿನ ಬೊಮ್ಮನಹಳ್ಳಿ ವ್ಯಾಪ್ತಿಯಲ್ಲಿ ಕಾರು ಚಾಲಕನಿಗೆ ಕಾಲರಾ ಪಾಸಿಟಿವ್ ದೃಢಪಟ್ಟಿದೆ. ಇನ್ನೊಂದರಡೆ ಬಿಎಂಸಿ ಹಾಸ್ಟೆಲ್ ವಿದ್ಯಾರ್ಥಿನಿಯರಲ್ಲಿ ಕಾಲರಾ ಪತ್ತೆ ಹಿನ್ನೆಲೆ ವಿದ್ಯಾರ್ಥಿನಿಯರಲ್ಲಿ ಆತಂಕ ಹೆಚ್ಚಿದೆ. ಹಾಸ್ಟೆಲ್‌ ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆ ಬೆನ್ನಲ್ಲೇ ಮೆಡಿಕಲ್ ವಿದ್ಯಾರ್ಥಿನಿಯರು ಹಾಸ್ಟೆಲ್ ಖಾಲಿ ಮಾಡುತ್ತಿದ್ದಾರೆ. ಸೋಂಕು ಕಡಿಮೆಯಾಗುವವರೆಗೂ ತಮ್ಮ ತಮ್ಮ ಊರುಗಳಿಗೆ ಹೊರಟಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿನಿಯರು ಕೆಲ ದಿನಗಳ ಕಾಲ ಹಾಸ್ಟೆಲ್ ಬಿಟ್ಟು ಬೇರೆ ಕಡೆ ಶಿಫ್ಟ್ ಆಗುತ್ತಿದ್ದಾರೆ.

ಕಾಲರಾ ತಡೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ

1) ಕೈ ಶುದ್ಧವಾಗಿರಬೇಕು
2) ಕೈ ಸ್ವಚ್ಛಗೊಳಿಸಿ ಆಹಾರ ಸೇವಿಸಬೇಕು
3) ಶುದ್ಧ ಕುಡಿಯುವ ನೀರು ಬಳಸಬೇಕು
4) ಕುದಿಸಿ ಆರಿಸಿದ ನೀರನ್ನು ಕುಡಿಯಿರಿ. ಸೋಸಿದ ನೀರು ಬಳಸಿ.
5) ಚರಂಡಿ ನೀರು ಮತ್ತು ಕುಡಿಯುವ ನೀರಿನ ಪೈಪ್ ಒಟ್ಟಾಗದಂತೆ ನೋಡಿಕೊಳ್ಳಬೇಕು
6) ಹೊರಗೆ, ಬೀದಿ ಬದಿ ಆಹಾರ ಸೇವಿಸುವುದರಿಂದ ದೂರ ಉಳಿಯಿರಿ
7) ರೆಸ್ಟೋರೆಂಟ್‌ಗಳಲ್ಲಿ ಬಿಸಿ ನೀರು ಕೇಳಿ ಪಡೆಯಿರಿ.
8) ಬೀದಿ ಆಹಾರ ಸೇವಿಸುವ ಮುನ್ನ ಅಲ್ಲಿನ ಸ್ವಚ್ಛತೆ ಪರಿಶೀಲಿಸಿ.
9) ಭೇದಿ, ಹೊಟ್ಟೆನೋವು, ಜ್ವರ ಮುಂತಾದ ಲಕ್ಷಣಗಳು ಕಂಡುಬಂದರೆ ತಡಮಾಡದೆ ವೈದ್ಯರನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...