ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು: ಸಿಎಂ ಸಿದ್ದರಾಮಯ್ಯ

Date:

ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಾತಿ-ಜನಿವಾರಕ್ಕೆ ಜೋತುಬಿದ್ದ ‘ಜಾತ್ಯತೀತ’ ಸರ್ಕಾರ

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

ಜಾತಿ ವ್ಯವಸ್ಥೆಗೆ ಚಾಲನೆ ಇಲ್ಲ. ಆರ್ಥಿಕ ಶಕ್ತಿ ಬಂದಾಗ, ಸಾಮಾಜಿಕ ಶಕ್ತಿ ಬಂದಾಗ ಚಲನೆ ಸಿಗುತ್ತದೆ. ಸಂಸ್ಕೃತ ಕಲಿಯುವ ಶೂದ್ರರ ಕಿವಿಗೆ ಕಾದ ಸೀಸವನ್ನು ಸುರಿಯುತ್ತಿದ್ದರು. ಸಂವಿಧಾನದ ಕಾರಣದಿಂದ ಇಂಥಾ ಸ್ಥಿತಿ ಹೋಗಿ ನಮಗೆಲ್ಲಾ ಶಿಕ್ಷಣ ಸಿಕ್ಕಿದೆ ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...