ಮಹಾನ್ ನಾಯಕರಿಂದ ಸರ್ಕಾರ ಉರುಳಿಸಲು ಸಾವಿರ ಕೋಟಿ ಮೀಸಲು: ಯತ್ನಾಳ್‌ ಆರೋಪ

Date:

ಮಹಾನ್ ನಾಯಕರೊಬ್ಬರು ಮುಖ್ಯಮಂತ್ರಿ ಆಗಬೇಕು ಎಂಬ ಮಹದಾಸೆಯಿಂದ ರಾಜ್ಯ ಸರ್ಕಾರವನ್ನು ಉರುಳಿಸಲು ಸಾವಿರ ಕೋಟಿ ತೆಗೆದಿಟ್ಟಿದ್ದಾರೆ. ಶಾಸಕರ ಖರೀದಿ, ಆಪರೇಷನ್‌ಗೆ ಬಿಜೆಪಿಗೆ ವರಿಷ್ಠರು ಅವಕಾಶ ನೀಡುವುದಿಲ್ಲ, ನಾವೂ ಒಪ್ಪುವುದಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಆರೋಪ ಮಾಡಿದರು.

‘ರಾಜ್ಯ ಸರ್ಕಾರ ತಾನಾಗಿಯೇ ಪತನವಾಗುವ ಕಾಲ ಸನ್ನಿಹಿತವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಉರುಳಿಸಲು ಬಿಜೆಪಿ ಪ್ರಯತ್ನ ಮಾಡುವುದಿಲ್ಲ. ಸರ್ಕಾರ ಬೀಳಿಸಲು ಕೆಲವರ ಬಳಿ ಹಣ ಇರಬಹುದು. ಏಕೆಂದರೆ ಅವರ ಬಳಿ ಭ್ರಷ್ಟಾಚಾರ ಮಾಡಿದ ಸಾಕಷ್ಟು ಸಂಪತ್ತು ಇದೆ. ಆದರೆ, ಇದಕ್ಕೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ನೀಡುವುದಿಲ್ಲ’ ಎಂದು ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಹೆಸರು ಉಲ್ಲೇಖಿಸದೇ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

‘ಹಣ ಮೀಸಲು ಇಟ್ಟುಕೊಂಡವರು ಯಾರೂ ಎಂಬುದನ್ನು ನೀವೇ (ಪತ್ರಕರ್ತರು) ಅಂದಾಜು ಮಾಡಬೇಕು. ಅವರ ಹೆಸರನ್ನು ನಾನು ಹೇಳುವುದಿಲ್ಲ. ಈ ಹಿಂದೆ ಅವರ ಮನೆಯಲ್ಲಿ ನೋಟು ಎಣಿಕೆ ಯಂತ್ರ ಪತ್ತೆಯಾಗಿತ್ತು. ಡಿಸೆಂಬರ್ ವೇಳೆಗೆ ರಾಜ್ಯದಲ್ಲಿ ದೊಡ್ಡ ಕ್ರಾಂತಿ ನಡೆಯುವುದಾಗಿ ಹೇಳುತ್ತಿದ್ದಾರೆ. ರಾಜ್ಯ ಸರ್ಕಾರ ವಿಸರ್ಜನೆಯಾಗುವವರೆಗೆ ನಾವು ಕಾಯುತ್ತೇವೆ. ಮುಂದೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಪಕ್ಷ ಉಳಿಸಲು ಪ್ರಯತ್ನ ಮಾಡುತ್ತಿರುವ ನಾವು ಭಿನ್ನಮತಿಯರಲ್ಲ. ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಮುಂದಿನ ಡಿಸೆಂಬರ್‌ವರೆಗೂ ಕಾದು ನೋಡುತ್ತೇವೆ. ಆ ಬಳಿಕ ಪಕ್ಷದ ತೀರ್ಮಾನ ನೋಡಿಕೊಂಡು ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಬಸನಗೌಡ ಪಾಟೀಲ ಯತ್ನಾಳ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.

ಮುಂದೆ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಧಾನಸೌಧದಲ್ಲೇ ಅತ್ಯಾಚಾರ? ಇದು ಕೇವಲ ತನಿಖೆಯಿಂದ ಬಗೆಹರಿಯುವ ಸಂಗತಿಯಲ್ಲ

‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆಗೆ ನಾವು ಪಟ್ಟು ಹಿಡಿದಿಲ್ಲ. ಪಕ್ಷದ ವೇದಿಕೆಯಲ್ಲಿ ಕೆಲ ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ಪಡೆದಿದೆ. ವಿಜಯೇಂದ್ರ ಕುರಿತು ಬಹಿರಂಗವಾಗಿ ಮಾತನಾಡದಂತೆ ಪಕ್ಷ ಸೂಚನೆ ನೀಡಿದೆ. ಹೀಗಾಗಿ ಏನನ್ನೂ ನಾನು ಮಾತನಾಡುವುದಿಲ್ಲ’ ಎಂದು ಹೇಳಿದರು.

ಬಿ ವೈ ವಿಜಯೇಂದ್ರ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಪಣತೊಟ್ಟಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ಭಿನ್ನರ ಬಣದ ಗೋಪ್ಯ ಸಭೆ ಇಲ್ಲಿನ ಜಿಎಂ ಐಟಿ ಆವರಣದ ಅತಿಥಿ ಗೃಹದಲ್ಲಿ ಭಾನುವಾರ ನಡೆಯಿತು.

ಮಾಜಿ ಸಂಸದರಾದ ಜಿ. ಎಂ. ಸಿದ್ದೇಶ್ವರ, ಪ್ರತಾಪ್ ಸಿಂಹ, ಹರಿಹರ ಶಾಸಕ ಬಿ.ಪಿ. ಹರೀಶ್ ಸೇರಿ ಅನೇಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಮೇಶ ಜಾರಕಿಹೊಳಿ ಗೈರಾಗಿದ್ದರು.

‘ಬೆಳಗಾವಿ ಬಳಿಕ ನಾವು ಎಲ್ಲಿಯೂ ಸಭೆ ಮಾಡಿಲ್ಲ. ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಸಂಘ ಪರಿವಾರದ ಕಾರ್ಯಕರ್ತರ ವಿರುದ್ಧ ಹಲವು ಪ್ರಕರಣ ದಾಖಲಿಸಲಾಗಿದೆ. ಇದು ಹೀಗೆ ಮುಂದುವರಿದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಲು ದಾವಣಗೆರೆಗೆ ಬಂದಿದ್ದೇವೆ’ ಎಂದು ಬಸನಗೌಡ ಪಾಟೀಲ ಯತ್ನಾಳ್‌ ಪ್ರತಿಕ್ರಿಯೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...