ಜೀವ ಬೆದರಿಕೆ | ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ದಾಖಲಿಸಿದ ನಟ ಪ್ರಥಮ್

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಅಭಿಮಾನಿಗಳಿಂದ ನಿರಂತರ ಜೀವ ಬೆದರಿಕೆ ಕರೆಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್ ಜ್ಞಾನ ಭಾರತಿ ನಗರ ಪೊಲೀಸರಿಗೆ ಬುಧವಾರ ದೂರು ನೀಡಿದ್ದಾರೆ.

ಪೊಲೀಸರಿಗೆ ದೂರು ನೀಡಿರುವ ಬಗ್ಗೆ ಪ್ರಥಮ್ ಅವರು ತಮ್ಮ ಎಕ್ಸ್ ಖಾತೆಯ ಮೂಲಕ ಖಚಿತಪಡಿಸಿ ನಟ ದರ್ಶನ್ ಅಭಿಮಾನಿಗಳಿಗೆ ಬುದ್ದಿಮಾತು ಹೇಳಿದ್ದಾರೆ.

“ಜೀವನ ದೊಡ್ಡದು, ಯಾರಿಗೋಸ್ಕರವೋ ಹಾಳು ಮಾಡಿಕೊಳ್ಳಬೇಡಿ. ನಾನು ಶಾಂತಿಯಿಂದಲೇ ಇದ್ದೆ. ಆದರೆ, ನೀವು ಅತಿಯಾಗಿ ನಮ್ಮ”ಕರ್ನಾಟಕದ ಅಳಿಯ” ಸಿನಿಮಾ ತಂಡದ ಕಚೇರಿ ನಂಬರ್‌ಗೆ ಕರೆ ಮಾಡಿ ಬೆದರಿಕೆ ಹಾಕುತಿದ್ದೀರಾ! ಇನ್ಮೇಲೆ ನನಗೆ ಬರುವ ಕರೆ, ಮೆಸೇಜ್ ಮತ್ತು ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆಗಳು ಸೇರಿದಂತೆ ಎಲ್ಲವನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು ಅಂಧಾಭಿಮಾನಿಗಳೇ ಅದನ್ನು ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ” ಎಂದು ಪ್ರಥಮ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಥಮ್ ಮೇಲೇಕೆ ಸಿಟ್ಟು?

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಮ್ಮ ಬಾಸ್ ದರ್ಶನ್ ಅವರದ್ದು ಏನು ತಪ್ಪಿಲ್ಲ ಎಂದು ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಪ್ರಥಮ್, “ಅನ್ನಪೂರ್ಣೇಶ್ವರಿ ನಗರ ಠಾಣೆ ನಮ್ಮ ಮನೆಯಿಂದ ಹತ್ತಿರದಲ್ಲಿದೆ. ಅಲ್ಲಿನ ಇನ್ಸ್‌ಪೆಕ್ಟರ್ ಅಥವಾ ಎಸಿಪಿಗೆ ಹೇಳಿ ಒಂದು ವಾರದ ಮಟ್ಟಿಗೆ ಪೊಲೀಸ್ ಕಾನ್‌ಸ್ಟೆಬಲ್ ಆಗಲು ನನಗೆ ಅನುಮತಿ ಕೊಡಿಸಿ, ನನಗೆ ಸಂಬಳ ಕೊಡಬೇಕಾಗಿಲ್ಲ, ಒಂದು ದೊಣ್ಣೆ ಸಿಕ್ಕಿದರೆ ಸಾಕು. ಸ್ಟೇಷನ್ ಮುಂದೆ ನಿಂತಿರುವವರಿಗೆಲ್ಲರಿಗೂ ನಾಯಿಗೆ ಹೊಡೆದಂಗೆ ಹೊಡೆಯುತ್ತೇನೆ” ಎಂದಿದ್ದರು.

ಪ್ರಥಮ್ ಅವರ ಮಾತುಗಳಿಂದ ರೊಚ್ಚಿಗೆದ್ದಿರುವ ದರ್ಶನ್ ಅಭಿಮಾನಿಗಳು ಇದೀಗ ಪ್ರಥಮ್ ಅವರಿಗೆ ಜೀವ ಬೆದರಿಕೆ ಹಾಕುತ್ತಿದ್ದು, ತಕ್ಷಣ ಜ್ಞಾನ ಭಾರತಿ ನಗರ ಪೊಲೀಸ್‌ ಠಾಣೆಗೆ ತೆರಳಿ ದರ್ಶನ್ ಅಭಿಮಾನಿಗಳ ವಿರುದ್ಧ ಪ್ರಥಮ್ ದೂರು ದಾಖಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...