ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆಸ್ಕಾಂ ಅಧಿಕಾರಿಗಳಿಗೆ ಬೆದರಿಕೆ : ದೂರು ದಾಖಲು

Date:

ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಇತರೆ ಅಧಿಕಾರಿಗಳಿಗೆ ಬೆದರಿಕೆ ಕರೆ ಮಾಡಿ ಕಿರುಕುಳ ನೀಡಿದ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರಿಗೆ ಮೇ 1ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಈ ವೇಳೆ, ತನ್ನನ್ನು ತಾನು ಲೋಕಾಯುಕ್ತ ಪೊಲೀಸ್ ಎಂದು ಹೇಳಿಕೊಡಿದ್ದಾನೆ. ಅಲ್ಲದೇ, ಬೆಸ್ಕಾಂ ಕಚೇರಿಯಲ್ಲಿರುವ ಎಲ್ಲರ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಹೀಗೆ, ದುಷ್ಕರ್ಮಿ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಅವರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್, ತಾಂತ್ರಿಕ ಸಹಾಯಕ ಎಸ್.ವಿ.ನವನೀತ್ ಕೃಷ್ಣನ್ ಹಾಗೂ ಬೇರೆ ಬೇರೆ ಅಧಿಕಾರಿಗಳಿಗೆ ದುಷ್ಕರ್ಮಿ ಕರೆ ಮಾಡಿ ಮಾತಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಗ್ಗೆ ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಕಚೇರಿಯನ್ನು ಸಂಪರ್ಕ ಮಾಡಿದಾಗ ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಲು ಸೂಚಿಸಿದ್ದಾರೆ. ಅದರಂತೆ, ಬೆಸ್ಕಾಂ ಅಧಿಕಾರಿಗಳು ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಟ್ರೂ ಕಾಲರ್ನಲ್ಲಿ ಲೋಕಾಯುಕ್ತ ಡಿವೈಎಸ್ಪಿ ಎಂಬ ಹೆಸರಿನಲ್ಲಿ ಕರೆ ಬರುತ್ತಿತ್ತು ಎಂದು ಬೆಸ್ಕಾಂ ಸಿಬ್ಬಂದಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಳೆ ಅನಾಹುತ; ₹1.18 ಕೋಟಿ ನಷ್ಟ ಅನುಭವಿಸಿದ ಬೆಸ್ಕಾಂ

“ಲೋಕಾಯುಕ್ತ ಪೊಲೀಸರ ಹೆಸರು ಹೇಳಿಕೊಂಡು ವಿನಾಕಾರಣ ಅಪರಿಚಿತರು ಬೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ ಎಂದು ಬೆಸ್ಕಾಂ ಅಧಿಕಾರಿ ಮೃತ್ಯುಂಜಯ ಅವರು ಬೆದರಿಕೆ ಕರೆಗಳ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ” ಎಂದು ಪೊಲೀಸರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...