ರಾಜ್ಯಪಾಲರ ಪಲಾಯನ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಎಚ್ ಕೆ ಪಾಟೀಲ್ ಕಿಡಿ

Date:

ರಾಜ್ಯ ವಿಧಾನಮಂಡಲದ ಇತಿಹಾಸದಲ್ಲೇ ಹಿಂದೆಂದೂ ಕಾಣದಂತಹ ಅಸಾಂವಿಧಾನಿಕ ಹಾಗೂ ಕಸಿವಿಸಿ ಉಂಟುಮಾಡುವ ವಿದ್ಯಮಾನವೊಂದಕ್ಕೆ ಗುರುವಾರ ವಿಧಾನಸಭೆ ಸಾಕ್ಷಿಯಾಯಿತು. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಬೇಕಾದ ರಾಜ್ಯಪಾಲರೇ, ಜಂಟಿ ಅಧಿವೇಶನವನ್ನುದ್ದೇಶಿಸಿ ಮಾತನಾಡದೆ ಸದನದಿಂದ ಹೊರನಡೆದಿದ್ದು, ರಾಜ್ಯ ಸರ್ಕಾರದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

​ಈ ಕುರಿತು ರಾಜ್ಯಪಾಲರ ನಡೆಯನ್ನು ತೀವ್ರವಾಗಿ ಖಂಡಿಸಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್, “ಇಂದು ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಒಂದು ಕಪ್ಪು ದಿನ. ಸಂವಿಧಾನದ ರಕ್ಷಕರಾಗಬೇಕಿದ್ದ ರಾಜ್ಯಪಾಲರೇ ತಮ್ಮ ಸಾಂವಿಧಾನಿಕ ಕರ್ತವ್ಯವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ,” ಎಂದು ಕಿಡಿಕಾರಿದ್ದಾರೆ.

ರಾಜ್ಯಪಾಲರ ಈ ಅನಿರೀಕ್ಷಿತ ಮತ್ತು ಅಸಹಜ ನಡೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಪಾಲರ ವಿರುದ್ಧ ಹರಿಹಾಯ್ದರು. “ಜಂಟಿ ಅಧಿವೇಶನವನ್ನುದ್ದೇಶಿಸಿ ಪೂರ್ಣವಾಗಿ ಭಾಷಣ ಮಾಡುವುದು ರಾಜ್ಯಪಾಲರ ಹೊಣೆಗಾರಿಕೆ ಮತ್ತು ಬಾಧ್ಯತೆಯಾಗಿತ್ತು. ಆದರೆ, ಅವರು ಸದನಕ್ಕೆ ಮತ್ತು ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ಈ ಮೂಲಕ ಅವರು ಸಂವಿಧಾನಕ್ಕೆ ಅವಮಾನ ಎಸಗಿದ್ದಾರೆ,” ಎಂದು ಗಂಭೀರ ಆರೋಪ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ರಾಜ್ಯಪಾಲರು ತಮ್ಮ ಭಾಷಣ ಓದಿರುವುದು ಸಂವಿಧಾನದ ಉಲ್ಲಂಘನೆ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರ ಈ ನಿರ್ಲಕ್ಷ್ಯದ ಧೋರಣೆಯನ್ನು ಸರ್ಕಾರ ಲಘುವಾಗಿ ಪರಿಗಣಿಸಿಲ್ಲ ಎಂದಿರುವ ಎಚ್.ಕೆ. ಪಾಟೀಲ್, “ರಾಜ್ಯಪಾಲರ ಈ ನಡೆಯ ವಿರುದ್ಧ ನಾವು ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುತ್ತೇವೆ,” ಎಂದು ಎಚ್ಚರಿಸಿದ್ದಾರೆ. ಸಂಪುಟವು ಒಪ್ಪಿ ಕಳುಹಿಸಿದ ಭಾಷಣವನ್ನು ಓದದೇ ಇರುವುದು ಅಥವಾ ಅರ್ಧಕ್ಕೆ ಮೊಟಕುಗೊಳಿಸಿ ಹೋಗುವುದು ಚುನಾಯಿತ ಸರ್ಕಾರಕ್ಕೆ ಮಾಡಿದ ಅವಮಾನ ಎಂದು ಅವರು ಹೇಳಿದ್ದಾರೆ.

ಸಂಪ್ರದಾಯದಂತೆ, ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಸರ್ಕಾರದ ನೀತಿ ನಿರೂಪಣೆಗಳನ್ನು ಒಳಗೊಂಡ ಭಾಷಣವನ್ನು ರಾಜ್ಯಪಾಲರು ಓದಬೇಕಿತ್ತು. ಇದು ಕೇವಲ ಔಪಚಾರಿಕತೆಯಲ್ಲದೆ, ಸಂವಿಧಾನದ ವಿಧಿ 176ರ ಅಡಿಯಲ್ಲಿನ ಕಡ್ಡಾಯ ಪ್ರಕ್ರಿಯೆಯಾಗಿದೆ. ಆದರೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ಮರೆತು ಸದನದಿಂದ ಹೊರನಡೆದಿರುವುದು ಅವರ ಹುದ್ದೆಯ ಘನತೆಗೆ ತಕ್ಕುದಲ್ಲ ಎಂಬ ಮಾತುಗಳು ಎಲ್ಲಡೆ ಕೇಳಿಬರುತ್ತಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...