ಇಂದಿನಿಂದ ಒಂದು ವರ್ಷಗಳ ಕಾಲ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್

Date:

ಆಡುಗೋಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ಲಕ್ಕಸಂದ್ರ ಮೇಟ್ರೋ ನಿಲ್ದಾಣ ಕಾಮಗಾರಿ ಹಿನ್ನಲೆ, ಮೈಕೋ ಬಂಡೆ ಸಿಗ್ನಲ್‌ನಿಂದ ಅನೇಪಾಳ್ಯ ಜಂಕ್ಷನ್‌ವರೆಗಿನ ರಸ್ತೆಯಲ್ಲಿ ಏಪ್ರಿಲ್ 5ರಿಂದ ಒಂದು ವರ್ಷಗಳ ಕಾಲ ವಾಹನ ಸಂಚಾರ ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸ್ ತಿಳಿಸಿದೆ.

ಬನ್ನೇರುಘಟ್ಟ ರಸ್ತೆಯ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಏಪ್ರಿಲ್ 5 ರಿಂದ ಒಂದು ವರ್ಷದವರೆಗೆ ಮುಚ್ಚಲಾಗುತ್ತಿದೆ. ಹಾಗಾಗಿ, ತಾತ್ಕಾಲಿಕ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.

ಸಂಚಾರ ಮಾರ್ಗ ಬದಲಾವಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೈರಿ ಸರ್ಕಲ್ ಕಡೆಯಿಂದ ಆನೆಪಾಳ್ಯ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಮೈಕೋಬಂಡೆ ಸಿಗ್ನಲ್‌ನಲ್ಲಿ ಬಲ ತಿರುವು ಪಡೆದು ನ್ಯೂ ಮೈಕೋ ಲಿಂಕ್ ರಸ್ತೆ ಮೂಲಕ ಆಡುಗೋಡಿ ಸಿಗ್ನಲ್ ತಲುಪಿ, ಎಡ ತಿರುವು ಪಡೆದು ಆನೇಪಾಳ್ಯ ಜಂಕ್ಷನ್ ಕಡೆಗೆ ತೆರಳುವುದು.

ಆನೆಪಾಳ್ಯ ಜಂಕ್ಷನ್‌ನಿಂದ ಡೈರಿ ಸರ್ಕಲ್ ಕಡೆಗೆ ಚಲಿಸುವ ವಾಹನಗಳು ಮೊದಲಿನಂತೆಯೇ, ಆನೆಪಾಳ್ಯ ಜಂಕ್ಷನ್ ಕಡೆಯಿಂದ ಡೈರಿ ಸರ್ಕಲ್ ಕಡೆಗೆ ಸಾಗಬಹುದು.

ಡೈರಿ ಸರ್ಕಲ್ ಕಡೆಯಿಂದ, ಮೈಕೋ ಬಂಡೆ ಸಿಗ್ನಲ್ ಕಡೆಯಿಂದ ವಿಲ್ಸನ್ ಗಾರ್ಡನ್, ಶಾಂತಿನಗರ ಕಡೆಗೆ ಸಂಚರಿಸುವ ವಾಹನಗಳು ಮೈಕೋಬಂಡೆ ಸಿಗ್ನಲ್ ದಾಟಿ ಮುಂದೆ ಹೋಗಿ ವಿಲ್ಸನ್‌ ಗಾರ್ಡನ್ 7ನೇ ಮುಖ್ಯ ರಸ್ತೆ( ಚಿನ್ನಯ್ಯನ ಪಾಳ್ಯ ಕ್ರಾಸ್)ಯಲ್ಲಿ ಎಡ ತಿರುವು ಪಡೆದು ವಿಲ್ಸನ್ ಗಾರ್ಡನ್ ಶಾಂತಿನಗರ ಕಡೆಗೆ ಸಂಚರಿಸಬಹುದು.

ಲಕ್ಕಸಂದ್ರ ಮೆಟ್ರೋ ನಿಲ್ದಾಣವು 21.26 ಕಿ.ಮೀ ಪಿಂಕ್ ಲೈನ್‌ನ ಭಾಗವಾಗಿದ್ದು, ಮುಂದಿನ ವರ್ಷ ತೆರೆಯಲಿದೆ.

ಈ ಸುದ್ದಿ ಓದಿದ್ದೀರಾ?  ತೇಜಸ್ವಿ ಸೂರ್ಯ ನಾಮಪತ್ರ ಸಮಾವೇಶದ ವೇಳೆ ‘ದ್ವೇಷ ಪಂಚರ್ ಮಾಡಿ’ ಬ್ಯಾನರ್ ಪ್ರದರ್ಶಿಸಿದ ಸಾಮಾಜಿಕ ಕಾರ್ಯಕರ್ತರು

ವಾರಂತ್ಯ ರಜೆ ದಿನ ಸಂಚಾರ ದಟ್ಟಣೆ

ವಾರಾಂತ್ಯ ರಜೆ, ಸರ್ಕಾರಿ ರಜೆ ಹಾಗೂ ಹಬ್ಬ ಇರುವುದರಿಂದ ಸಾರ್ವಜನಿಕರು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಹೋಗುವ ಕಾರಣ ಏ.5 ಮತ್ತು 6ರಂದು ಓ ಎಂ ರೋಡ್, ಟಿ.ಸಿ ಪಾಳ್ಯ, ಭಟ್ಟರಹಳ್ಳಿ ಜಂಕ್ಷನ್ ಸುತ್ತಮುತ್ತ ಸಂಚಾರದಟ್ಟಣೆ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...