ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ: ಆರೋಗ್ಯ ಸಿಬ್ಬಂದಿಗೆ ಸಿಎಂ ಕಿವಿ ಮಾತು

Date:

ವೈದ್ಯಕೀಯೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜೀವ ಉಳಿಸುವ ಸಾರ್ಥಕ ವೃತ್ತಿ
ಇಂದು 1000 ಜನರಿಗೆ ನೇಮಕಾತಿ ಆದೇಶಗಳನ್ನು ಪಡೆದು ಆರೋಗ್ಯ ಇಲಾಖೆಗೆ ಸೇರ್ಪಡೆಯಾಗಿರುವುದು ಸಂತೋಷದ ವಿಷಯ. ಇದು ಕೇವಲ ವೃತ್ತಿಯಲ್ಲ, ಜೀವ ಉಳಿಸುವ ಹಾಗೂ ರೋಗ ತಡೆಯುವ ಸಾರ್ಥಕ ಕಾರ್ಯವನ್ನೊಳಗೊಂಡಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ
ನಮ್ಮ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೆ ಬಂದ ನಂತರ ಖಾಲಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುತ್ತಿದೆ. ನೇಮಕಾತಿಯಲ್ಲಿದ್ದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ಶಿಕ್ಷಣ, ಆರೋಗ್ಯ, ಪೊಲೀಸ್ ವ್ಯವಸ್ಥೆ ಅತ್ಯಂತ ಅವಶ್ಯಕವಾಗಿದ್ದು, ಇಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಆದ್ಯತೆ ನೀಡುತ್ತದೆ. 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.

ಭ್ರಷ್ಟಾಚಾರ ತಡೆಯಲು ಕೌನ್ಸೆಲಿಂಗ್ ಪ್ರಕ್ರಿಯೆ
ಈ ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಟಾಚಾರ ತಡೆಯಲು ಸಾಧ್ಯವಾಗುತ್ತಿದೆ. 5700 ಹುದ್ದೆಗಳನ್ನು ವೈದ್ಯರನ್ನು ಸೇರಿದಂತೆ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಟಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್‌ಗಳ ಹಾವಳಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರ್ಕಾರಿ ನೌಕರರು ಇದಕ್ಕೆ ಬಲಿಯಾಗಬಾರದು ಎಂದರು.

ರೋಗತಡೆಗಟ್ಟುವಿಕೆಗೆ ಹೆಚ್ಚಿನ ಆದ್ಯತೆ ನೀಡಬೇಕು
ವೈದ್ಯಕೀಯೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಇಲಾಖೆಯ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ. ರೋಗಿಗಳಿಗೆ ಚಿಕಿತ್ಸೆಯ ಸಂದರ್ಭದಲ್ಲಿ ಬೇಕಾಗುವ ರಕ್ತವನ್ನು ಪಡೆಯಲು ಯಾವುದೇ ಜಾತಿಧರ್ಮಗಳನ್ನು ಪರಿಗಣಿಸುವುದಿಲ್ಲ. ಆದರೆ ಜನರು ಗುಣಮುಖರಾದ ತಕ್ಷಣ ಪುನ: ಜಾತಿಧರ್ಮಗಳ ಸುಳಿಯಲ್ಲಿ ಬೀಳುತ್ತಾರೆ. ರೋಗ ತಡೆಗಟ್ಟುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಈ ದಿಸೆಯಲ್ಲಿ ಆರೋಗ್ಯ ಇಲಾಖೆ ಕಾರ್ಯತತ್ಪರರಾಗಬೇಕು. ರಾಜ್ಯದ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಸರ್ಕಾರ ಕಾರ್ಯಗತಗೊಳಿಸಲಾಗುತ್ತಿದೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...