ಬೆಂಗಳೂರಿನಲ್ಲಿ ದಾಖಲೆಯಿಲ್ಲದ ₹10 ಕೋಟಿ ಹಣ ಪತ್ತೆ

Date:

ಲೋಕಸಭಾ ಚುನಾವಣೆ ಇನ್ನೇನು ಕೆಲವೇ ದಿನಗಳಲ್ಲಿ ನಡೆಯಲಿದೆ. ದೇಶದಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಹಿನ್ನೆಲೆ, ಪೊಲೀಸರು ಚುನಾವಣಾ ಅಕ್ರಮಗಳನ್ನು ತಡೆಯಲು ಚೆಕ್​ಪೋಸ್ಟ್​​ಗಳನ್ನು ಹಾಕಿ ತಪಾಸಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿ ನಿಲ್ಲಿಸಿದ್ದ ಐಷಾರಾಮಿ ಕಾರ್‌ಗಳಲ್ಲಿ ದಾಖಲೆಯಿಲ್ಲದ ಕೋಟಿ ಕೋಟಿ ಹಣ ಪತ್ತೆಯಾಗಿದೆ.

ಜಯನಗರದ 4ನೇ ಬ್ಲಾಕ್‌ನಲ್ಲಿ ಮಯ್ಯಾಸ್ ಹೋಟೆಲ್ ಎದುರು ನಿಲ್ಲಿಸಿದ್ದ ಕೆಂಪು ಬಣ್ಣದ ಐಷಾರಾಮಿ ಕಾರು ಹಾಗೂ ಬಿಳಿ ಬಣ್ಣದ ಮತ್ತೊಂದು ‍ಐಷಾರಾಮಿ ಕಾರಿನಲ್ಲಿರುವ ಚೀಲವೊಂದರಲ್ಲಿ ₹10ಗೂ ಅಧಿಕ ಹಣ ಪತ್ತೆಯಾಗಿದೆ. ಸದ್ಯ ಹಣ ಮತ್ತು ಕಾರ್‌ ಅನ್ನು ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಎರಡು ಐಷಾರಾಮಿ ಕಾರುಗಳಲ್ಲಿ ಇರಿಸಿದ್ದ ಚೀಲಗಳಲ್ಲಿ ದಾಖಲೆ ಇಲ್ಲದ ಹಣ ತುಂಬಿಸಿ ಸಾಗಿಸಲಾಗುತ್ತಿತ್ತು. ಚೆಕ್‌ಪೋಸ್ಟ್‌ನಲ್ಲಿ  ನೋಂದಣಿಯಾಗ ಹೊಚ್ಚ ಹೊಸ ಕಾರುಗಳನ್ನು ಪರಿಶೀಲನೆ ನಡೆಸಿದಾಗ ಭಾರೀ ಮೊತ್ತದ ಹಣ ಪತ್ತೆಯಾಗಿದೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಕಾರಿನಲ್ಲಿ ದಾಖಲೆಯಿಲ್ಲದ ಕೋಟಿ ಕೋಟಿ ಹಣ ಪತ್ತೆಯಾಗಿರುವುದು ಸಾಕಷ್ಟು ಅನುಮಾನಕ್ಕೆ ಎಡೆಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಶಂಕಿತರು ಹತ್ತು ದಿನ ಎನ್‌ಐಎ ವಶಕ್ಕೆ

ಸ್ಥಳಕ್ಕೆ ಜಯನಗರ ಪೊಲೀಸರು ಭೇಟಿ ನೀಡಿದ್ದು, ಹಣದ ಚೀಲ ಇರುವ ಕಾರನ್ನು ಪರೀಶೀಲನೆ ನಡೆಸುತ್ತಿದ್ದಾರೆ. ಈ ವೇಳೆ ಅಧಿಕಾರಿಗಳು ಇನ್ನೊಂದು ಕಾರಿನ ಗ್ಲಾಸ್ ಒಡೆದು ಹಣ ಇರುವ ಬ್ಯಾಗ್‍ನ್ನು ಹೊರಗೆ ತೆಗೆದು ಕಾರಿನ ಒಳಗಡೆ ಇದ್ದ ದಾಖಲಾತಿಗಳನ್ನ ವಶಕ್ಕೆ ಪಡೆದಿದ್ದಾರೆ. ಕಾರಿನ ಒಳಗಡೆ ಒಂದು ಮೊಬೈಲ್ ಪತ್ತೆಯಾಗಿದೆ. ಇದೀಗ ಎರಡು ಕೌಂಟಿಂಗ್ ಮಷಿನ್‍ಗಳನ್ನು ತರಿಸಿಕೊಂಡು ಅಧಿಕಾರಿಗಳು ಹಣ ಎಣಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಧಿಕಾರಿಗಳು ಬರುತ್ತಿದ್ದಂತೆ ಕಾರಿನಲ್ಲಿದ್ದ ಐವರು, ಚೀಲದಲ್ಲಿರುವುದು ಮಾವಿನ ಹಣ್ಣು ಇದೆ ಎಂದಿದ್ದಾರೆ. ಬಳಿಕ ಅಧಿಕಾರಿಗಳು ಪರಿಶೀಲನೆಗೆ ಮುಂದಾದಾಗ ಒಂದು ಕಾರಿನಲ್ಲಿದ್ದ ಐವರು ಪರಾರಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳಗ್ಗೆ 9 ಗಂಟೆಯಿಂದ ಫೋಲೋ, ಬೆಂಜ್ ಮತ್ತು ಫಾರ್ಚೂನರ್ ಕಾರುಗಳು ಬಂದು ನಿಂತಿದ್ದವು. ಫೋಲೋ ಕಾರಿನಿಂದ ಬೈಕ್‍ಗೆ ಹಣ ತುಂಬಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೂಡಲೇ ಫಾರ್ಚೂನರ್ ಕಾರಿನಲ್ಲಿ ಐವರು ಪರಾರಿಯಾಗಿದ್ದಾರೆ. ಸದ್ಯ ಎರಡು ಕಾರು ಮಾತ್ರ ಉಳಿದಿವೆ. ಒಂದು ಬೈಕ್ ಹಾಗೂ ಎರಡು ಕಾರುಗಳಲ್ಲಿ ಮೂರು ಬ್ಯಾಗ್‍ನಲ್ಲಿ ಹಣ ಸಿಕ್ಕಿದೆ ಎಂದು ಎಂಸಿಸಿ ನೋಡಲ್ ಆಫೀಸರ್ ಮನೀಷ್ ಮೌದ್ಗಿಲ್ ಮಾಹಿತಿ ನೀಡಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಾಗರಾಜ್ ಮತ್ತು ಮಾಜಿ ಕಾರ್ಪೋರೇಟರ್ ನಾಗರಾಜ್ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...