ಸಕಾಲಕ್ಕೆ ಸಿಗದ ವೇತನ; ಎಲೆಕ್ಟ್ರಿಕ್ ಬಸ್‌ ಚಾಲಕರ ಪ್ರತಿಭಟನೆ

Date:

ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಎಲೆಕ್ಟ್ರಿಕ್​ ಬಸ್​ ಚಾಲಕರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಗುತ್ತಿಗೆ ಕೆಲಸ ಮಾಡುತ್ತಿರುವ ಚಾಲಕರು ಬೆಂಗಳೂರಿನ ಶಾಂತಿನಗರ ಡಿಪೋ 3ರ ಮುಂದೆ ಮಂಗಳವಾರ ಧರಣಿ ನಡೆಸಿದ್ದು, ವೇತನಕ್ಕಾಗಿ ಆಗ್ರಹಿಸಿದ್ದಾರೆ.

ಬಿಎಂಟಿಸಿ ಎಲೆಕ್ಟ್ರಿಕ್​ ಬಸ್​ಗಳು ಸರಿಯಾಗಿ ಸೇವೆ ನೀಡುತ್ತಿಲ್ಲ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಇದೀಗ ಚಾಲಕರು ತಮಗೆ ವೇತನ ನೀಡುತ್ತಿಲ್ಲ ಎಂದು ಆರೋಪಿಸುತ್ತಿದ್ದಾರೆ.

“ಮೊದಲಿಗೆ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳುವಾಗ ಟಾಟಾ ಕಂಪನಿಯಲ್ಲಿ ಕೆಲಸ ಎಂದು ಹೇಳಿದ್ದರು. ಇದೀಗ, ಆರ್ಯ ಕಂಪನಿಯಲ್ಲಿ ಕೆಲಸ ನೀಡಿದ್ದಾರೆ. ಅಲ್ಲದೇ, ತಿಂಗಳಿಗೆ ₹26 ಸಾವಿರ ವೇತನ ನೀಡುತ್ತೇವೆ ಎಂದಿದ್ದರು. ಆದರೀಗ, ಕೇವಲ ₹18 ಸಾವಿರ ನೀಡುತ್ತಿದ್ದಾರೆ. ಬರುವ ವೇತನದಲ್ಲಿ ಕಡಿತ ಮಾಡುತ್ತಿರುವ ಹಣ ಪಿಎಫ್‌ ಖಾತೆಗೂ ಜಮೆ ಆಗುತ್ತಿಲ್ಲ. ವಸತಿ ಸೌಲಭ್ಯ ನೀಡುತ್ತೇವೆ ಎಂದಿದ್ದರು. ಇದೀಗ ಅದೂ ಇಲ್ಲ” ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮಗೆ ಸರಿಯಾಗಿ ತಿಂಗಳಿಗೆ ವೇತನ ಆಗುತ್ತಿಲ್ಲ. ಜತೆಗೆ ನಾವು ಡ್ಯೂಟಿ ಮತ್ತು ಓಟಿ ಸೇರಿ (8ಗಂಟೆ ಡ್ಯೂಟಿ ಮತ್ತು 8ಗಂಟೆ ಓಟಿ) ಅಂದರೆ ತಿಂಗಳಲ್ಲಿ 40-42 ಸಾವಿರ ರೂ. ವರೆಗೆ ದುಡಿದ್ದೇವೆ. ಆದರೆ, ನಮಗೆ ಸುಮಾರು 42 ಸಾವಿರ ರೂಪಾಯಿ ಕೊಡುವ ಬದಲಿಗೆ ಕೇವಲ 18-20 ಸಾವಿರ ರೂಪಾಯಿ ಮಾತ್ರ ಕೊಟ್ಟಿದ್ದಾರೆ. ಈ ಪುರುಷಾರ್ಥಕ್ಕೆ ನಾವು ಡ್ಯೂಟಿ ಏಕೆ ಮಾಡಬೇಕು” ಎಂದು ಪ್ರತಿಭಟನೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ಲೈಂಗಿಕ ಹಗರಣ | ಸಂತ್ರಸ್ತೆಯರಿಗೆ ರಕ್ಷಣೆ ನ್ಯಾಯ ಹಾಗೂ ಅಪರಾಧಿಗಳಿಗೆ ಶಿಕ್ಷೆ ನೀಡಬೇಕೆಂದು ಆಗ್ರಹ ಸಮಾವೇಶ

“ಸುಮಾರು 180 ಮಂದಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡು ನಿತ್ಯ ಕೆಲಸ ಮಾಡುತ್ತಿದ್ದೇವೆ. ನಮ್ಮನ್ನು ನೇಮಕ ಮಾಡಿಕೊಳ್ಳುವಾಗ ತಿಂಗಳಿಗೆ 22 ಸಾವಿರ ರೂಪಾಯಿ ವೇತನ ಮತ್ತು ಇತರ ಭತ್ಯೆಗಳನ್ನು ಕೊಡಲಾಗುವುದು ಎಂದು ಹೇಳಿದ್ದರು. ಜತೆಗೆ ಓಟಿ ಮಾಡಿದರೆ ನೀವು ಡಬಲ್‌ ವೇತನ ಪಡೆಯಬಹುದು ಎಂದಿದ್ದರು. ಆದರೆ, ವೇತನವನ್ನೇ ಸರಿಯಾಗಿ ಕೊಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿಯಲ್ಲಿ ಒಟ್ಟು 6842 ಬಸ್​​ಗಳಿವೆ. ಅದರಲ್ಲಿ ಸಾಮಾನ್ಯ 5642 ಬಸ್​​ಗಳಿದ್ದರೆ, 600 ಎಸಿ ಬಸ್​​ಗಳಿವೆ. 600 ಕ್ಕೂ ಹೆಚ್ಚು ಎಲೆಕ್ಟ್ರಿಕ್ ಬಸ್​​ಗಳಿವೆ. ಡಿಪೋ-3 ಒಂದರಲ್ಲೇ 113 ಎಲೆಕ್ಟ್ರಿಕ್​ ಬಸ್​ಗಳು ಸಂಚರಿಸುತ್ತೇವೆ. ಇಲ್ಲಿ ಚಾಲಕರು ಮೂರು ಶಿಫ್ಟ್​​​ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...