ಬಿಜೆಪಿ 60 ದಾಟದು, ಕಾಂಗ್ರೆಸ್‌ ಕನಿಷ್ಠ 130 ಸ್ಥಾನ ಗೆಲ್ಲಲಿದೆ: ವೀರಪ್ಪ ಮೊಯ್ಲಿ

Date:

  • ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲು ಸಂಪೂರ್ಣ ಮುಚ್ಚಲಿದೆ ಎಂದ ವೀರಪ್ಪ ಮೊಯ್ಲಿ
  • ಜೆಡಿಎಸ್‌ನ ʼಅವಕಾಶವಾದದ ರಾಜಕೀಯʼವನ್ನು ಜನ ತಿರಸ್ಕರಿಸುತ್ತಾರೆ ಎನ್ನುವ ಭರವಸೆ

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್‌ ಕನಿಷ್ಠ 130 ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ನೀಡಿದ ಸಂದರ್ಶನದಲ್ಲಿ ಅವರು ಮಾತನಾಡಿ, “ಈ ವಿಧಾನಸಭಾ ಚುನಾವಣೆಯ ಫಲಿತಾಂಶ ಬಿಜೆಪಿಯ ದಕ್ಷಿಣ ಭಾರತದ ಹೆಬ್ಬಾಗಿಲನ್ನು ಸಂಪೂರ್ಣವಾಗಿ ಮುಚ್ಚಲಿದೆ” ಎಂದು ಭವಿಷ್ಯ ನುಡಿದಿದ್ದಾರೆ.

“224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 130ಕ್ಕಿಂತ ಹೆಚ್ಚಿನ ಸ್ಥಾನ ಗಳಿಸಲಿದೆ. ಬಿಜೆಪಿ 60 ಸ್ಥಾನಗಳನ್ನು ದಾಟುವುದಿಲ್ಲ” ಎಂದು ವೀರಪ್ಪ ಮೊಯ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಂಗ್ರೆಸ್ ಪರವಾಗಿ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ಸಂಪೂರ್ಣ ಹದಗೆಟ್ಟಿದೆ. ಬಿಜೆಪಿಯಲ್ಲಿ ಯಾವುದೇ ಒಗ್ಗಟ್ಟು ಇಲ್ಲ ಮತ್ತು ಅವರಲ್ಲಿ ಹಲವರು ಟಿಕೆಟ್ ನಿರಾಕರಿಸಿದ ನಂತರ ಪಕ್ಷ ತೊರೆದು ಕಾಂಗ್ರೆಸ್ ಅಥವಾ ಇತರ ಪಕ್ಷಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿಯವರೇ, ನಿಮ್ಮ ಯಾವುದೇ ಕುತಂತ್ರಕ್ಕೂ ನಾನು ಅಂಜಲಾರೆ: ರಾಹುಲ್ ಗಾಂಧಿ

“ಕೇಂದ್ರದಲ್ಲಿ ಸರಕಾರ ರಚನೆಯಲ್ಲಿ ಕರ್ನಾಟಕ ಯಾವಾಗಲೂ ನಿರ್ಣಾಯಕ ಪಾತ್ರ ವಹಿಸುತ್ತದೆ. ಮುಂಬರುವ ವಿಧಾನಸಭಾ ಚುನಾವಣೆಯ ಗೆಲುವು 2024ರ ಕಾಂಗ್ರೆಸ್ ನೇತೃತ್ವದ ಸರ್ಕಾರ ರಚನೆಗೆ ದಾರಿ ಮಾಡಿಕೊಡಲಿದೆ” ಎಂದು ತಿಳಿಸಿದ್ದಾರೆ.

ಜೆಡಿಎಸ್ ಬಿಜೆಪಿಯೊಂದಿಗೆ ಕೈಜೋಡಿಸುತ್ತಿದೆ ಎನ್ನುವ ಮಾತುಗಳು ಕೇಳಿಬಂದಿವೆ ಎಂದು ಪ್ರಶ್ನಿಸಿದಾಗ, “ದೇವೇಗೌಡರ ನೇತೃತ್ವದ ಸಂಘಟನೆಯ ‘ಅವಕಾಶವಾದದ ರಾಜಕೀಯ’ವನ್ನು ಜನರು ತಿರಸ್ಕರಿಸುತ್ತಾರೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...