ಹಿಂದೂ ರಾಷ್ಟ್ರ ಮಾಡುತ್ತೇವೆ, ತಾಕತ್ತಿದ್ದರೆ ಕಾಂಗ್ರೆಸ್ ತಡೀಲಿ:‌ ಪ್ರಮೋದ್ ಮುತಾಲಿಕ್ ಸವಾಲು

Date:

“ನಾವು ಹಿಂದೂ ರಾಷ್ಟ್ರ ಮಾಡಿಯೇ ತೀರುತ್ತೇವೆ. ಕಾಂಗ್ರೆಸ್‌ಗೆ ತಾಕತ್ತಿದ್ದರೆ ತಡೀಲಿ ನೋಡೋಣ” ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸವಾಲೆಸೆದಿದ್ದಾರೆ.

ಬಂಧಿತ ಶ್ರೀಕಾಂತ್ ಪೂಜಾರಿ ನಿವಾಸಕ್ಕೆ ಪ್ರಮೋದ್ ಮುತಾಲಿಕ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಮಾಧಾನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, “ಸರ್ಕಾರ ಏನು ಮಾಡುತ್ತದೋ ನಾವು ನೋಡಿಯೇ ತೀರುತ್ತೇವೆ. 2024ರಲ್ಲಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದ ನಂತರ ಭಾರತ ಹಿಂದೂ ರಾಷ್ಟ್ರ ಆಗುತ್ತದೆ. ಪಾಕಿಸ್ತಾನ ಮುಸ್ಲಿಮರ ದೇಶ ಆಗುವುದಾದರೆ, ಭಾರತ ಹಿಂದೂ ರಾಷ್ಟ್ರ ಯಾಕಾಗಬಾರದು” ಎಂದರು.

“ರಾಮಜನ್ಮಭೂಮಿ ಹೋರಾಟದಲ್ಲಿ ಶ್ರೀಕಾಂತ್ ಪೂಜಾರಿ ಭಾಗಿಯಾಗಿದ್ದರು. ಆದರೆ ಅವರ ಕುರಿತು ಇಲ್ಲಸಲದ ಆರೋಪ ಮಾಡುತ್ತಿದ್ದಾರೆ. ಶ್ರೀಕಾಂತ್‌ ವಿರುದ್ಧ ದೊಂಬಿ-ಗಲಭೆ ಪ್ರಕರಣ ದಾಖಲಾಗಿದ್ದವು ಎಂದು ಹೇಳುತ್ತಿದ್ದಾರೆ. ಅದೆಲ್ಲ ಸುಳ್ಳು. ರಾಮಭಕ್ತ ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿಕೊಂಡು ಈ ರೀತಿಯಾಗಿ ಬಂಧನ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಬ್ಬಯ್ಯನೋ ಅಬ್ದುಲ್ಲಾನೋ ಗೊತ್ತಿಲ್ಲ

“ಶ್ರೀಕಾಂತ ದುಡಿಯುವವನು. ಬಿಡುಗಡೆ ಆಗುತ್ತೋ ಇಲ್ಲವೋ ಎಂದು ಕುಟುಂಬದವರು ಆತಂಕದಲ್ಲಿದ್ದಾರೆ. ಕಾಂಗ್ರೆಸ್ ಆತನನ್ನು ಅಮಾನವೀಯವಾಗಿ ಬಂಧನ ಮಾಡಿದ್ದನ್ನು ಶ್ರೀರಾಮ ಸೇನೆ ಖಂಡಿಸುತ್ತದೆ. ಸಿಎಂ, ಗೃಹಮಂತ್ರಿ ಸೇರಿ ಹಲವು ಸ್ಥಳೀಯ ನಾಯಕರು ದಾರಿ ತಪ್ಪಿಸುತ್ತಿದ್ದಾರೆ. ಅಬ್ಬಯ್ಯನೋ ಅಬ್ದುಲ್ಲನೋ ಗೊತ್ತಿಲ್ಲ. ಅವರು ದಾರಿ ತಪ್ಪಿಸುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕಾಂಗ್ರೆಸ್ ವ್ಯವಸ್ಥಿತವಾಗಿ ಸುಳ್ಳು ಕೇಸು ಹಾಕಿ ಭ್ರಷ್ಟಾಚಾರ ಮಾಡುತ್ತಿದೆ. ಬೇರೆಯವರು ದುಡ್ಡು ಕೊಟ್ಟಿದ್ದಾರೆ, ಅದಕ್ಕೆ ಬಂಧನ ಮಾಡಿಲ್ಲ, ಇವರಿಗೆ ದುಡ್ಡು ಕೊಡಲು ಆಗಿಲ್ಲ ಅದಕ್ಕೆ ಬಂಧನ ಮಾಡಿದ್ದಾರೆ. ದೊಂಬಿ ಪ್ರಕರಣ ಅಂತ ತಿಳಿಸಿದ್ದಾರೆ. 13 ಜನ ಎಲ್ಲರೂ ಒಂದೊಂದು ದಿಕ್ಕಿನಲ್ಲಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ?‌ ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

“ಯಾವ ಆಧಾರದ ಮೇಲೆ ದೊಂಬಿ ಕೇಸ್ ಅಂತಾರೆ. ಇಡೀ ದೇಶ ರಾಮಮಯ ಆಗಿದೆ. ಅದಕ್ಕೆ ಕಾಂಗ್ರೆಸ್‌ನವರಿಗೆ ಹೊಟ್ಟೆಯುರಿ. ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಶುರುವಾಗಿದೆ. ಅವರ ಮೇಲೆ ರೌಡಿ ಶೀಟರ್ ಇಲ್ಲ ಮುಖ್ಯಮಂತ್ರಿಗಳೇ, ಆತ ಅಪರಾಧಿ ಅಲ್ಲ ಆರೋಪಿ. ಕೋರ್ಟ್ ಯಾವುದೇ ಕೇಸಿನಲ್ಲೂ ಅಪರಾಧಿ ಅಂದಿಲ್ಲ. ನಿಮ್ಮ ಟಾರ್ಗೆಟ್ ಹಿಂದುತ್ವ, ರಾಮ ಭಕ್ತರ ಮೇಲೆ” ಎಂದು ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಹರಿಪ್ರಸಾದ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುತಾಲಿಕ್, “ಗೋಧ್ರಾ ಮಾದರಿಯಲ್ಲಿ ದಾಂಧಲೆ ಆಗುತ್ತದೆ ಎಂದು ಹೇಳುತ್ತಿದ್ದಾರೆ. ಅವರ ವಿಚಾರ ಏನು? ಗೋಧ್ರಾ ಘಟನೆಗೆ ಕಾರಣ ಮುಸ್ಲಿಮರು. ಕಾಂಗ್ರೆಸ್‌ನವರೇ ಮುಸ್ಲಿಮರಿಗೆ ಕುಮ್ಮಕ್ಕು ಕೊಡ್ತಿದ್ದಾರಾ? ಅಥವಾ ನೀವೇನಾದ್ರೂ ಗಲಭೆ ಎಬ್ಬಿಸಲು ಯೋಜನೆ ಹಾಕಿಕೊಂಡಿದ್ದೀರಾ” ಎಂದು ಪ್ರಶ್ನಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...