ಕುಡಿಯುವ ನೀರು ಕೊಡದೆ ಯಾವ ಬ್ರ್ಯಾಂಡ್ ಬೆಂಗಳೂರು ಮಾಡ್ತೀರಾ; ಮೋಹನ್ ದಾಸರಿ ಪ್ರಶ್ನೆ

Date:

ಟ್ಯಾಂಕರ್ ಮಾಫಿಯಾದಲ್ಲಿ ಕಾರ್ಪೊರೇಟರ್‌ಗಳು, ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂ ಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಹೇಳಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕಾವೇರಿ ನೀರಿಗೆ ಪರ್ಯಾಯವಾಗಿ ಬಿಡಬ್ಲ್ಯುಎಸ್‌ಎಸ್‌ಬಿ ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್‌ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ” ಎಂದರು.

“ಕಾವೇರಿ ನೀರು ಬೆಂಗಳೂರಿನ ಎಲ್ಲ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಅನಧಿಕೃತ ಟ್ಯಾಂಕರ್ ಮಾಫಿಯಾದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಟ್ಯಾಂಕರ್ ನೀರು ಸರಬರಾಜು ಅನಧಿಕೃತ, ಇದಕ್ಕೆ ಕಾನೂನಿನಲ್ಲಿ ಅನುಮತಿಯೇ ಇಲ್ಲ. ಆದರೂ ಬೆಂಗಳೂರಿನಲ್ಲಿ ನೀರು ಸರಬರಾಜು ಮಾಫಿಯಾ ತೀವ್ರವಾಗಿದೆ ಎಂದರು. ಬೇಸಿಗೆ ಆರಂಭವಾಗುವ ಮುನ್ನವೇ ₹600 ಇರಬೇಕಿದ್ದ ಟ್ಯಾಂಕರ್ ನೀರಿನ ಬೆಲೆ ₹3000 ದವರೆಗೆ ಮುಟ್ಟಿದೆ” ಎಂದರು.

“ಡಿ.ಕೆ. ಶಿವಕುಮಾರ್ ಅವರೇ ಕುಡಿಯುವ ನೀರು ಅತ್ಯಗತ್ಯ ಎಷ್ಟಿದೆ ಎಂದು ಗೊತ್ತಿದೆ. ಕುಡಿಯುವ ನೀರಿದ್ದರೆ ಅಲ್ಲವೇ ಬ್ರ್ಯಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

“ನೀವೇ ಒಂದು ಮೊಬೈಲ್ ಆಪ್ ಸಿದ್ದಮಾಡಿ ಟ್ಯಾಂಕರ್ ಬುಕ್ ಮಾಡಲು ಅವಕಾಶ ಕೊಡಿ. ಸಹಾಯವಾಣಿ ಸಂಖ್ಯೆಯನ್ನು ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ದೊಡ್ಡ ಜಗಳವೇ ನಡೆದರೂ ಅಚ್ಚರಿ ಇಲ್ಲ” ಎಂದರು.

ಎಎಪಿಯ ಬೆಂಗಳೂರು ನಗರಾಧ್ಯಕ್ಷರಾದ ಡಾ. ಸತೀಶ್ ಮಾತನಾಡಿ, “ಜಲಮಂಡಳಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 110 ಹಳ್ಳಿಗಳಿಗೆ 131 ಕೋಟಿ ರೂ.ಗಳನ್ನು ಕೊಳವೆಬಾವಿ ಕೊರೆಸಲು ಅನುದಾನ ಕೊಡುತ್ತಿರುವುದು ಸಾಕಾಗುವುದಿಲ್ಲ. ಬೆಂಗಳೂರಿನಲ್ಲಿ ಕೇವಲ 150 ಸ್ಥಳಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸುಳ್ಳು. ಒಂದು ವಿಧಾನಸಭೆ ಕ್ಷೇತ್ರದಲ್ಲಿ 50 ಕಡೆಗಳಲ್ಲಿ ನೀರಿನ ಸಮಸ್ಯೆ ಇದೆ” ಎಂದು ಹೇಳಿದರು.

ಎಎಪಿಯ ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಮಹಿಳಾ ಮುಖಂಡ ಸತ್ಯವತಿ ಮಾಧ್ಯಮ ಗೋಷ್ಠಿಯಲ್ಲಿ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...