ಮಹಿಳೆಯ ವಿವಸ್ತ್ರ ಪ್ರಕರಣ | ಸಂತ್ರಸ್ತೆಯನ್ನು ಭೇಟಿ ಮಾಡಲು ಹೈಕೋರ್ಟ್‌ ನಿರ್ಬಂಧ

Date:

ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯ ಮೇಲೆ ನಡೆದ ಅನಾಗರೀಕ ಘಟನೆಯ ಕುರಿತು ದಿನಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿ ಮತ್ತು ಲೇಖನಗಳ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ವಿದ್ಯುನ್ಮಾನ ಮಾಧ್ಯಮಗಳಲ್ಲಿ ಸಂತ್ರಸ್ಥರನ್ನು ಬಳಸಿಕೊಂಡು ಸುದ್ದಿ ಪ್ರಸಾರ ಮಾಡಿರುವುದಕ್ಕೆ ಸುಮೋಟೋ ಪ್ರಕರಣ ದಾಖಲಿಸಿಕೊಂಡಿದೆ.

ಈಗಾಗಲೇ ಸಂತ್ರಸ್ಥೆಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಸಂತ್ರಸ್ತೆಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ನಿಯೋಗ ಭೇಟಿಯಾಗುವ ಸುದ್ದಿ ಟೈಮ್ಸ್ ನೌ ಟಿವಿ ವಾಹಿನಿಯಲ್ಲಿ ಬಿತ್ತರಗೊಂಡಿರುವ ಕುರಿತು ನ್ಯಾಯಾಲಯದ ಗಮನಕ್ಕೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಉಚ್ಚ ನ್ಯಾಯಾಲವು ತೀವ್ರ ವಿಷಾದ ವ್ಯಕ್ತಪಡಿಸಿದೆ.

“ಈ ಪ್ರಕರಣದಲ್ಲಿ ನೊಂದ ಸಂತ್ರಸ್ತೆಯ ದೈಹಿಕ / ಮಾನಸಿಕ ಪರಿಸ್ಥಿತಿಯನ್ನು ಅವಲೋಕಿಸಿ ಸ್ಥಳೀಯ ವೈದ್ಯಾಧಿಕಾರಿಗಳ ಅಥವಾ ಅವರಿಗೆ ಚಿಕಿತ್ಸೆ ನೀಡುವ ವೈದ್ಯರ ಪೂರ್ವಾನುಮತಿ ಇಲ್ಲದೇ ಯಾವುದೇ ವ್ಯಕ್ತಿ, ಗುಂಪು, ಸಂಘ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ಭೇಟಿಯಾಗುವಂತಿಲ್ಲ. ಮುಂದುವರೆದು ಸಂತ್ರಸ್ತೆಯ ಕುಟುಂಬಸ್ಥರು, ಶಾಸನಬದ್ಧ ಅಧಿಕಾರಿಗಳು ಹಾಗೂ ತನಿಖಾಧಿಕಾರಿಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ” ಎಂದು ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಆದೇಶ ಹೊರಡಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...