ದಲಿತ ಮಹಿಳೆಯರ ಬಗ್ಗೆ ಯತ್ನಾಳ ಹೇಳಿಕೆ | ಬಿಜೆಪಿ ನಾಯಕರು ಮೌನವಾಗಿರುವುದೇಕೆ? : ಪ್ರಿಯಾಂಕ್‌ ಖರ್ಗೆ

Date:

ಹಿಂದೂ ಧರ್ಮದಲ್ಲಿ ಅಸಮಾನತೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದಾಗ ಬಾಯಿ ಬಡಿದುಕೊಂಡಿದ್ದ ಬಿಜೆಪಿ ನಾಯಕರು ಬಸನಗೌಡ ಪಾಟೀಲ್ ಯತ್ನಾಳರ ಮಾತಿಗೆ ಮೌನವಾಗಿರುವುದೇಕೆ? ಬಿಜೆಪಿ ನಾಯಕರ ಕಣ್ಣು, ಕಿವಿ, ಬಾಯಿಗಳಿಗೆ ಬೀಗ ಹಾಕಿಕೊಂಡಿರುವುದೇಕೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

ಶಾಸಕ ಯತ್ನಾಳ್‌ ಅವರು ʼಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲʼ ಎಂದಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ. ಆರ್‌ಎಸ್‌ಎಸ್ ನ ಅಂತರಂಗದ ಧೋರಣೆʼ ಎಂದು ಸಚಿವರು ತಮ್ಮ ʼಎಕ್ಸ್‌ʼ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ʼದಲಿತರಿಗೆ ಪುಷ್ಪಾರ್ಚನೆಗೆ ಅಧಿಕಾರವಿಲ್ಲ, ದಲಿತರಿಗೆ ನೀರು ಕುಡಿಯುವ ಅಧಿಕಾರವಿಲ್ಲ, ದಲಿತರಿಗೆ ಆಡಳಿತದ ಅಧಿಕಾರವಿಲ್ಲ, ದಲಿತರಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲ, ದಲಿತರಿಗೆ ವ್ಯವಹಾರ ನಡೆಸುವ ಅಧಿಕಾರವಿಲ್ಲ, ದಲಿಗರಿಗೆ ಬದುಕುವ ಅಧಿಕಾರವೂ ಇಲ್ಲ. ಇದು ಮನುವಾದಿಗಳ ಅಂತರಂಗ, ಬಹಿರಂಗ ಎಲ್ಲವೂʼ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದಲಿತರು ಹಿಂದೂ ಧರ್ಮದ ವ್ಯಾಪ್ತಿಯೊಳಗಿಲ್ಲವೇ? ಇದೇ ಧೋರಣೆಯಿಂದಲೇ ರಾಷ್ಟ್ರಪತಿ ದ್ರೌಪದಿ ಮುರ್ಮುರವರನ್ನು ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ಹೊರಗಿಟ್ಟಿದ್ದಲ್ಲವೇ? ಇದೇ ಧೋರಣೆಯಿಂದಲೇ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ದೇವಾಲಯದ ಪ್ರವೇಶಕ್ಕೆ ನಿರಾಕರಿಸಿದ್ದಲ್ಲವೇ? ಈ ಶೋಷಣೆಯ ಧೋರಣೆಗಾಗಿಯೇ ಅಲ್ಲವೇ ಬಾಬಾ ಸಾಹೇಬರು ಹಿಂದುವಾಗಿ ಹುಟ್ಟಿದ್ದೇನೆ, ಆದರೆ ಹಿಂದುವಾಗಿ ಸಾಯುವುದಿಲ್ಲ ಎಂದಿದ್ದು?ʼ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಲಬುರಗಿಯಲ್ಲಿ ಮಳೆಹಾನಿ | ಜಂಟಿ ಸಮೀಕ್ಷೆ ನಡೆಸಿ ಬೆಳೆಪರಿಹಾರದ ಬಗ್ಗೆ ತೀರ್ಮಾನ; ಸಿಎಂ

ʼಬಾಬಾ ಸಾಹೇಬರ ಸಂವಿಧಾನದ ಕಾಲಘಟ್ಟದಲ್ಲೇ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲೇ ದಲಿತರ ಬಗ್ಗೆ ಈ ಪರಿ ತಿರಸ್ಕಾರವಿರುವಾಗ ಹಿಂದಿನ ವ್ಯವಸ್ಥೆ ದಲಿತರೆಡೆಗೆ ಇನ್ನೆಷ್ಟರ ಮಟ್ಟಿಗೆ ಕ್ರೂರವಾಗಿದ್ದಿರಬಹುದು. ಸಾಮಾಜಿಕ ವ್ಯವಸ್ಥೆಯಲ್ಲಿ ಧಾರ್ಮಿಕ ಬಣ್ಣ ಲೇಪಿಸಿ ಒಂದು ವರ್ಗದ ಮನುಷ್ಯರನ್ನು ನಿಷ್ಕೃಷ್ಟವಾಗಿ ಕಾಣುತ್ತಿರುವಾಗ ಹಿಂದೂ ಧರ್ಮದಲ್ಲಿ ಯಾವ ಶ್ರೇಷ್ಠತೆಯನ್ನು ಹುಡುಕುತ್ತೀರಿ? ದಲಿತರನ್ನು ಹೊರಗಿಟ್ಟು ಅದ್ಯಾವ ಬಾಯಿಯಲ್ಲಿ ನಾವೆಲ್ಲ ಹಿಂದೂ ನಾವೆಲ್ಲ ಒಂದು ಎನ್ನುತ್ತಾರೆ?ʼ ಎಂದು ಕೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...