ಬೆಂಗಳೂರು | ಡಿಜಿಟಲ್ ಅರೆಸ್ಟ್ ಮೂಲಕ ವೃದ್ಧ ದಂಪತಿಗೆ 4.79 ಕೋಟಿ ರೂ. ವಂಚನೆ

Date:

ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ಸುಮಾರು 4.79 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿರುವುದಾಗಿ ತಿಳಿಸಿದ್ದಾರೆ.

ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡ ಪೊಲೀಸರು, ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಎಂಬವರನ್ನು ಬಂಧಿಸಿರುವುದಾಗಿ ಹೇಳಿದ್ದಾರೆ.

ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್‍ನ ಪ್ರತಿನಿಧಿಗಳ ಸೋಗಿನಲ್ಲಿ ಮಾರ್ಚ್ ತಿಂಗಳಿನಲ್ಲಿ ಮಂಜುನಾಥ್ ಅವರಿಗೆ ಕರೆ ಮಾಡಿದ್ದ ಆರೋಪಿಗಳು, ‘ಕ್ರೆಡಿಟ್ ಕಾರ್ಡ್ ಲಿಮಿಟ್ಸ್ ಓವರ್ ಡ್ಯೂ ಆಗಿದೆ’ ಎಂದು ವಿವರಗಳನ್ನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಪ್ಲಾಸ್ಟಿಕ್: ಮನ್ಸೂರ್ ಮಾತುಗಳನ್ನು ಸರ್ಕಾರ-ಜನ ಆಲಿಸುವರೇ?

ಬಳಿಕ ನಿಮ್ಮ ಖಾತೆಯ ಮೂಲಕ ಅಕ್ರಮವಾಗಿ ಹಣ ವರ್ಗಾವಣೆಯಾಗಿದೆ, ಆದ್ದರಿಂದ ಇ.ಡಿ., ಸಿಬಿಐನಲ್ಲಿ ಪ್ರಕರಣ ದಾಖಲಾಗಿದೆ ಎಂದಿದ್ದರು. ನಂತರ ನಕಲಿ ವಾರೆಂಟ್‍ನ ಫೋಟೋ ಕಳಿಸಿ ‘ನಿಮ್ಮನ್ನು ಬಂಧಿಸುತ್ತಿದ್ದು, ತಿಹಾರ್ ಜೈಲಿನಲ್ಲಿರಿಸಲಿದ್ದೇವೆ’ ಎಂದು ಬೆದರಿಸಿದ್ದರು. ಸುಮಾರು ಮೂರು ತಿಂಗಳ ಕಾಲ ಬೆದರಿಸುತ್ತ ವಿವಿಧ ಹಂತಗಳಲ್ಲಿ 4.79 ಕೋಟಿ ರೂಪಾಯಿ ಸುಲಿಗೆ ಮಾಡಿದ್ದ ಆರೋಪಿಗಳು, ಆಸ್ತಿ ಪತ್ರಗಳ ಕಾಪಿಗಳನ್ನೂ ಪಡೆದುಕೊಂಡಿದ್ದರು. ವಂಚಕರ ಕಿರುಕುಳ ಹೆಚ್ಚಾದಾಗ ಅದನ್ನು ತಾಳಲಾರದ ದಂಪತಿ ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ವೃದ್ಧ ದಂಪತಿಯ ಖಾತೆಯಿಂದ ಹಣ ವರ್ಗಾವಣೆ ಮಾಡಿಕೊಂಡಿದ್ದ ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ವಂಚಿಸಿದ ಹಣವನ್ನು ಆರೋಪಿಗಳು ಶ್ರೀಲಂಕಾದಲ್ಲಿ ಕ್ಯಾಸಿನೋ ಆಡಲು ಬಳಸಿರುವುದು ಸಹ ಗೊತ್ತಾಗಿದೆ. ಸದ್ಯ ಆರೋಪಿತರ ವಿಚಾರಣೆ ನಡೆಸಲಾಗುತ್ತಿದ್ದು, ವಂಚಿಸಿದ ಹಣವನ್ನು ಜಪ್ತಿ ಮಾಡಲಾಗುತ್ತಿದೆ ಎಂದು ಬೆಂಗಳೂರು ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ: 56,000 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆ ರದ್ದತಿಗೆ ಸರ್ಕಾರ ಒಪ್ಪಿಗೆ

ಇತ್ತೀಚೆಗೆ 56,432 ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಹೊರಡಿಸಿದ್ದ ಆದೇಶವನ್ನು ಹಿಂಪಡೆಯಲು...

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...