ಸೈಬರ್ ವಂಚನೆ | ಟ್ರಾಫಿಕ್‌ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಬೆಂಗಳೂರು ಟೆಕ್ಕಿಗೆ 2.65 ಲಕ್ಷ ರೂ. ಮೋಸ

Date:

ಸೈಬರ್‌ ವಂಚಕರು ಯಾವ್ಯಾವ ರೀತಿಯಲ್ಲಿ ವಂಚಿಸುತ್ತಾರೆ ಎಂಬುದಕ್ಕೆ ಮತ್ತೊಂದು ಪ್ರಕರಣ ದಾಖಲಾಗಿದೆ. ಟ್ರಾಫಿಕ್‌ ದಂಡ ಕಟ್ಟಿಸಿಕೊಳ್ಳುವ ನೆಪದಲ್ಲಿ ಬೆಂಗಳೂರಿನ ಟೆಕ್ಕಿಯೊಬ್ಬರಿಗೆ 2.65 ಲಕ್ಷ ರೂ. ಲಪಟಾಯಿಸಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸರು ಇತ್ತೀಚಿಗೆ ಶೇ. 50 ರಷ್ಟು ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ.

ವಂಚಕರ ಸಂದೇಶಗಳನ್ನು ನಂಬಿದ ಹಲವರು ಸಂದೇಶಗಳಲ್ಲಿರುವ ಲಿಂಕನ್ನು ತೆರದ ತಕ್ಷಣ ಅಕೌಂಟ್‌ನಲ್ಲಿದ್ದ ಹಣ ಮಾಯವಾಗುತ್ತದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಇದೇ ರೀತಿಯ ಎಪಿಕೆ ಫೈಲ್‌ ಕಳುಹಿಸಿದ ಸೈಬರ್ ವಂಚಕರು ಓಪನ್ ಮಾಡಿ ನಿಮ್ಮ ವಾಹನದ ಫೈನ್ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಎಂದು ಸಂದೇಶ ಕಳುಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿ ಸಮುದಾಯಗಳಿಗೆ ಅನ್ಯಾಯ – ಜಾತಿಗಣತಿಯ ಮೇಲೂ ಕರಿನೆರಳು: ರಾಹುಲ್‌ ಗಾಂಧಿ ಗಮನಿಸುವರೇ?

ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್‌ನ ತೆರದ ತಕ್ಷಣ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ವರ್ಗಾಯಿಸಿಕೊಂಡಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ಎಂಬುವವರು ದೂರು ನೀಡಿದ್ದಾರೆ.

ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಬಹುದು.

ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ. ಸಾರ್ವಜನಿಕರು ಎಪಿಕೆ ಫೈಲ್‌ಗಳನ್ನು ತೆರೆಯದೆ ಅಧಿಕೃತ ವೆಬ್‌ಸೈಟ್‌ ಹಾಗೂ ಆಪ್‌ ಮೂಲಕ ದಂಡ ಪಾವತಿಸುವಂತೆ ನಗರ ಪೊಲೀಸರು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನ ಕೈಗೊಳ್ಳಲು ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ

ಮಾರ್ಚ್‌ 27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರವಾಗಿ ತೀರ್ಮಾನ...

ಎಸ್‌ಐಆರ್ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಕರ್ನಾಟಕ ದಿಕ್ಸೂಚಿಯಾಗಬೇಕು: ಪ್ರೊ. ಯೋಗೇಂದ್ರ ಯಾದವ್

ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್‌ಐಆರ್‍‌ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ...

ಶಾಲಾ ಶಿಕ್ಷಣದಲ್ಲಿ ಕಡ್ಡಾಯವಾಗಿ ‘ಹಿಂದಿ’ ತೆಗೆಯಬೇಕು: ಹಿಂದಿ ವಿರೋಧಿ ಕರ್ನಾಟಕ

ಕರ್ನಾಟಕದಲ್ಲಿ ಶೈಕ್ಷಣಿಕವಾಗಿ ಪ್ರತಿ ವರ್ಷ ನಡೆಯುವ ಎಸ್ ಎಸ್ ಎಲ್ ಸಿ...

ಬೇಲಿಯೇ ಎದ್ದು ಹೊಲ ಮೇಯ್ದಂತೆ ಮಾಡಿದ ಮಾಹಿತಿ ಆಯೋಗ; ಕಾಯ್ದೆಯ ವಾರ್ಷಿಕ ವರದಿ ನೀಡಲು ‘ಗೌಪ್ಯತೆ’ಯ ನೆಪ

ಮಾಹಿತಿ ಹಕ್ಕು ಕಾಯ್ದೆ-2005ರಡಿ ಸಾರ್ವಜನಿಕ ಪ್ರಾಧಿಕಾರಗಳು ಪಾರದರ್ಶಕವಾಗಿ ಕೆಲಸ ಮಾಡುತ್ತಿವೆಯೇ ಎಂಬುದನ್ನು...