ಕನ್ನಡ ಅನುವಾದದಲ್ಲಿ ಗಂಭೀರ ತಪ್ಪು: ಸಿಎಂ ಸಿದ್ದರಾಮಯ್ಯ ಬಳಿ ಕ್ಷಮೆಯಾಚಿಸಿದ ಫೇಸ್‌ಬುಕ್‌

Date:

‘ಮೆಟಾ’ ವೇದಿಕೆಗಳಲ್ಲಿ ಕನ್ನಡ ಸ್ವಯಂ ಅನುವಾದದ ವೇಳೆ ಭಾರೀ ಲೋಪ ಹಾಗೂ ನೈಜ ಅರ್ಥವೇ ನಾಶವಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ, ಫೇಸ್‌ಬುಕ್‌ ಮಾತೃ ಸಂಸ್ಥೆ ಮೆಟಾ ಕ್ಷಮೆಯಾಚಿಸಿದೆ. ಅನುವಾದದಲ್ಲಿ ಕೆಲಕಾಲ ದೋಷ ಕಂಡುಬರಲು ಕಾರಣವಾಗಿದ್ದ ಅಂಶಗಳನ್ನು ನಾವು ಸರಿಪಡಿಸಿದ್ದೇವೆ. ಇಂಥ ಘಟನೆ ನಡೆದಿದ್ದಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ ಎಂದು ಮೆಟಾ ಹೇಳಿದೆ.

ಮೆಟಾ ಪ್ಲಾಟ್‌ಫಾರ್ಮ್‌ಗಳಲ್ಲಿ ಅನುವಾದ ದೋಷದ ಬಗ್ಗೆ ಸಿಎಂ ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿ, ಕನ್ನಡದ ವಿಷಯಗಳ ದೋಷಪೂರಿತ ಅನುವಾದವು ಸತ್ಯಾಂಶಗಳನ್ನೇ ನಾಶಪಡುತ್ತಿದೆ. ಈ ವೇದಿಕೆಯ ಬಳಕೆದಾರರನ್ನು ತಪ್ಪುಗ್ರಹಿಕೆಗೆ ಕಾರಣವಾಗುತ್ತಿದೆ. ಇದು ಅತ್ಯಂತ ಅಪಾಯಕಾರಿಯಾಗಲಿದೆ ಎಂದು ಅಸಮಾಧಾನ ಹೊರಹಾಕಿದ್ದರು.

ಇದನ್ನು ಓದಿದ್ದೀರಾ? ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್; ಟೂರ್ನಿಯ ವೇಳಾಪಟ್ಟಿ ಬಿಡುಗಡೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡ ಅನುದಾದದಲ್ಲಿ ಆಗುತ್ತಿರುವ ಲೋಪ ತಕ್ಷಣವೇ ಸರಿಪಡಿಸುವಂತೆ ಒತ್ತಾಯಿಸಿ ನನ್ನ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಮೆಟಾಗೆ ಔಪಚಾರಿಕವಾಗಿ ಪತ್ರ ಬರೆದಿದ್ದಾರೆ ಎಂದು ತಿಳಿಸಿದ್ದರು. ಇತ್ತೀಚೆಗೆ ನಿಧನರಾದ ಹಿರಿಯ ನಟಿ ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪನಮನ ಸಲ್ಲಿಸಿ ಅಂತಿಮ ದರ್ಶನ ಪಡೆದ ವಿಚಾರವು ‘ಮೆಟಾ’ದಲ್ಲಿ ಇಂಗ್ಲಿಷ್‌ನಿಂದ ಕನ್ನಡಕ್ಕೆ ಆದ ಸ್ವಯಂ ಅನುವಾದ ಬಹಳ ಕೆಟ್ಟದಾಗಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದರು. ಅನುವಾದದ ಸಮಸ್ಯೆಯನ್ನು ಸರಿಪಡಿಸಿರುವುದಾಗಿ ಮೆಟಾ ತಿಳಿಸಿದೆ.

ಫೇಸ್‌ಬುಕ್ ನಲ್ಲಿ ಕಂಡುಬಂದ ಪೋಸ್ಟ್ ನಲ್ಲಿ ‘ಸಿಎಂ ಕಚೇರಿಗೆ ಇಂಗ್ಲಿಷ್ ಅಧ್ಯಾಪಕರ ಅಗತ್ಯವಿದೆ’ ಎಂದಿತ್ತು. ಇದರೊಂದಿಗೆ ಲಗತ್ತಿಸಲಾದ ಸಿಎಂ ಖಾತೆಯ ಪೋಸ್ಟ್ ಸ್ಕ್ರೀನ್ ಶಾಟ್ ನಲ್ಲಿ “ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ನಿಧನರಾದರು. ಬಹುಭಾಷಾ ತಾರೆ, ಹಿರಿಯ ನಟಿ ಬಿ. ಸರೋಜಾದೇವಿ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು”ಎಂದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...