ಸುಳ್ಳು ಮಾಹಿತಿ ಪತ್ತೆಗೆ ‘ಪ್ರಮಾಣೀಕರಣ ಸಂಸ್ಥೆ’ ರಚನೆಗೆ ಗೂಗಲ್‌, ಮೆಟಾ ಕೇಂದ್ರಕ್ಕೆ ಪ್ರಸ್ತಾಪ

Date:

  • ಸುಳ್ಳು ಮಾಹಿತಿ ಪತ್ತೆಗೆ ಮಾಹಿತಿ ತಂತ್ರಜ್ಞಾನ ಕಾಯಿದೆಗೆ ತಿದ್ದುಪಡಿ ಸೂಚನೆ
  • ಫೆಬ್ರವರಿಯಲ್ಲಿ ಸಭೆ ನಡೆಸಿದ್ದ ಐಟಿ, ಸಾಮಾಜಿಕ ಮಾಧ್ಯಮ ಪ್ರತಿನಿಧಿಗಳು

ತಮ್ಮಲ್ಲಿ ಹಂಚಿಕೆಯಾಗುವ ಸಂಶಯಾಸ್ಪದ ಮಾಹಿತಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಿ ಸುಳ್ಳು ಮಾಹಿತಿ ಪತ್ತೆಗೆ ಪ್ರಮಾಣೀಕರಣ ಸಂಸ್ಥೆ ರಚನೆ ಸಂಬಂಧ ಮೆಟಾ ಮತ್ತು ಗೂಗಲ್‌ ಸೇರಿದಂತೆ ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಯ ಕಂಪನಿಗಳು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಆಗುವ ಸುಳ್ಳು ಮಾಹಿತಿ ಪತ್ತೆ ಹಚ್ಚಲು ಈ ಸಂಸ್ಥೆ ಕಾರ್ಯನಿರ್ವಹಿಸುತ್ತದೆ. ಪ್ರಮುಖ ಸಾಮಾಜಿಕ ಮಾಧ್ಯಮ ಕಂಪನಿಗಳು ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಐಟಿ ಸಚಿವಾಲಯಕ್ಕೆ ಐದು ಪುಟಗಳ ಪ್ರಸ್ತಾವನೆ ಸಲ್ಲಿಸಿವೆ.

ಇದು ಸುಳ್ಳು ಮಾಹಿತಿ ಪತ್ತೆ ಮಾಡಲು ವಿಶ್ವಾಸಾರ್ಹ ಸಂಸ್ಥೆಯಾಗಿ ಕಾರ್ಯನಿರ್ವಹಿಸಲಿದೆ ಎಂದು ಸರ್ಕಾರ ಹೇಳಿಕೊಂಡಿದೆ. 2021ರ ಮಾಹಿತಿ ತಂತ್ರಜ್ಞಾನ ನಿಯಮಗಳು ಕಾಯಿದೆಗೆ ಐಟಿ ಸಚಿವಾಲಯ ಗುರುವಾರ ಹೊಸ ತಿದ್ದುಪಡಿಗಳನ್ನು ಸೂಚಿಸಿದೆ. ಇದರಂತೆ ಸರ್ಕಾರಕ್ಕೆ ಸಂಬಂಧಿಸಿದ ಸುಳ್ಳು ಮಾಹಿತಿ ಮೇಲೆ ಕಾರ್ಯನಿರ್ವಹಿಸಲು ಸತ್ಯ ಪರಿಶೀಲನೆಯ ಸಂಸ್ಥೆ ಸ್ಥಾಪಿಸುತ್ತದೆ. ಸದ್ಯ ಪ್ರೆಸ್ ಇನ್‌ಫಾರ್ಮೇಶನ್ ಬ್ಯೂರೋಗೆ (ಪಿಐಬಿ) ಸರ್ಕಾರ ತೆಗೆದುಕೊಂಡಿರುವ ಈ ನಿರ್ಧಾರವನ್ನು ಕಾರ್ಯರೂಪಕ್ಕೆ ತರುವ ಈ ಹೊಣೆಗಾರಿಕೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ ಮಾಹಿತಿಯ ಸತ್ಯಾಸತ್ಯತೆಯ ಪರಿಶೀಲನೆಗೆ ಸ್ವಯಂ ನಿಯಂತ್ರಣ ಪ್ರಮಾಣೀಕರಣ ಸಂಸ್ಥೆ ರಚನೆ ಸಂಬಂಧ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಪ್ರಸ್ತಾವನೆ ಸಲ್ಲಿಸಿವೆ” ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವದ ಮಾತು, ಸರ್ವಾಧಿಕಾರದ ನಡೆ ; ಕೇಂದ್ರದ ಬಗ್ಗೆ ಖರ್ಗೆ ಆಕ್ರೋಶ

ಕಳೆದ ಫೆಬ್ರವರಿಯಲ್ಲಿ ಐಟಿ ಸಚಿವಾಲಯದ ಅಧಿಕಾರಿಗಳು ಮತ್ತು ಪ್ರಮುಖ ಸಾಮಾಜಿಕ ಮಾಧ್ಯಮ ಕಂಪನಿಗಳ ಪ್ರತಿನಿಧಿಗಳ ನಡುವೆ ಸಭೆ ನಡೆದಿತ್ತು. ಈ ವೇಳೆ ಪ್ರಮಾಣೀಕರಣ ಸಂಸ್ಥೆ ರಚನೆ ಕುರಿತು ಚರ್ಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.

ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಈಗಾಗಲೇ ಹಲವಾರು ಸತ್ಯ ಪರೀಕ್ಷಕ ಸಂಸ್ಥೆಗಳನ್ನು ಅವಲಂಬಿಸಿವೆ.

ಮೆಟಾ ಸಂಸ್ಥೆಯು ಇಂಟರ್ನ್ಯಾಷನಲ್ ಫ್ಯಾಕ್ಟ್ ಚೆಕಿಂಗ್ ನೆಟ್‌ವರ್ಕ್ (ಐಎಫ್‌ಸಿಎನ್) ಜತೆ ಕಾರ್ಯನಿರ್ವಹಿಸುತ್ತಿದೆ. ಇದನ್ನು 2015 ರಲ್ಲಿ ಅಮೆರಿಕ ಮೂಲದ ಪಾಯ್ನ್‌ಟರ್‌ ಸಂಸ್ಥೆಯಲ್ಲಿ ಸ್ಥಾಪಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...