ಸುನಿತಾ ವಿಲಿಯಮ್ಸ್‌ ಭೂಮಿಗೆ ಮರಳುವುದು ಮತ್ತಷ್ಟು ತಡ

Date:

ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ ಸಿಲುಕಿಕೊಂಡಿರುವ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ವಾಪಾಸು ಭೂಮಿಗೆ ಕರೆತರುವ ಉದ್ದೇಶದಿಂದ ಸ್ಪೇಸ್ಎಕ್ಸ್ ಸಹಯೋಗದಲ್ಲಿ ನಾಸಾ ಆರಂಭಿಸಲು ಉದ್ದೇಶಿಸಿದ್ದ 10 ಮಂದಿ ತಂತ್ರಜ್ಞರನ್ನು ಒಳಗೊಂಡ ಮಿಷನ್ ಮತ್ತಷ್ಟು ವಿಳಂಬವಾಗಲಿದೆ ಎಂದು ನಾಸಾ ತಿಳಿಸಿದೆ.

9 ತಿಂಗಳಿನಿಂದ ಭೂಕಕ್ಷೆಯಲ್ಲಿರುವ ವಿಲ್ಮೋರ್ ಮತ್ತು ವಿಲಿಯಮ್ಸ್ ಅವರನ್ನು ಭೂಮಿಗೆ ಕರೆ ತರುವ ಮುನ್ನ ಐಎಸ್ಎಸ್‌ಗೆ ಬದಲಿ ಸಿಬ್ಬಂದಿ ತಲುಪಬೇಕಾಗುತ್ತದೆ ಎಂದು ನಾಸಾ ಹೇಳಿದೆ. ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಫಾಲ್ಕನ್ ರಾಕೆಟ್ ಉಡಾಯಿಸುವ ನಾಲ್ಕು ಗಂಟೆಗೆ ಮುನ್ನ ಪ್ರಮುಖ ಹೈಡ್ರಾಲಿಕ್ ಸಿಸ್ಟಮ್ ಸಮಸ್ಯೆಯನ್ನು ಎಂಜಿನಿಯರ್‌ಗಳು ಪತ್ತೆ ಮಾಡಿದ್ದಾರೆ. ಕ್ಷಣಗಣನೆ ವೇಳೆ ಹೈಡ್ರಾಲಿಕ್ಸ್ ಸಮಸ್ಯೆ ಬೆಳಕಿಗೆ ಬಂದಿದೆ. ಮೇಲಕ್ಕೆ ಚಿಮ್ಮುವ ಮುನ್ನ ರಾಕೆಟ್ ಬೆಂಬಲ ವ್ಯವಸ್ಥೆಯನ್ನು ಖಾತರಿಪಡಿಸಲು ಇದು ಅಗತ್ಯವಾಗಿತ್ತು.

“ನೆಲಮಟ್ಟದಲ್ಲಿ ಹೈಡ್ರಾಲಿಕ್ ಸಿಸ್ಟಂ ಸಮಸ್ಯೆ ಇರುವುದು ಗೊತ್ತಾಗಿದೆ” ಎಂದು ನಾಸಾ ಉಡಾವಣಾ ವೀಕ್ಷಕ ವಿವರಣೆಕಾರ ಡೆರೊಲ್ ನೀಲ್ ಹೇಳಿದ್ದಾರೆ. ಉಳಿದಂತೆ ರಾಕೆಟ್ ಮತ್ತು ಬಾಹ್ಯಾಕಾಶ ನೌಕೆಗೆ ಸಂಬಂಧಿಸಿದಂತೆ ಎಲ್ಲವೂ ಸರಿಯಾಗಿದೆ ಎಂದು ಹೇಳಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಸುತ್ತಮುತ್ತ ‘ದಿಬ್ಬಣದ ಕುದುರೆಗಳು’ ಇವೆ ಎಂಬ ದೂರೂ ಇದೆಯಲ್ಲ?

ನಾಲ್ವರು ಬಾಹ್ಯಾಕಾಶಯಾನಿಗಳು ಈಗಾಗಲೇ ಕ್ಯಾಪ್ಸೂಲ್‌ನಲ್ಲಿ ಸುರಕ್ಷಿತವಾಗಿ ಅಂತಿಮ ಒಪ್ಪಿಗೆಗೆ ಕಾಯುತ್ತಿದ್ದಾರೆ. ಕ್ಷಣಗಣನೆಗೆ ಒಂದು ಗಂಟೆ ಬಾಕಿ ಇರುವಾಗ ಬಾಹ್ಯಾಕಾಶನೌಕೆ ಆಗಮಿಸಿದೆ. ದಿನದ ಮಟ್ಟಿಗೆ ಉಡಾವಣೆಯನ್ನು ಸ್ಪೇಸ್‌ ಎಕ್ಸ್‌ ಸ್ಥಗಿತಗೊಳಿಸಿದೆ. ತಕ್ಷಣಕ್ಕೆ ಉಡಾವಣೆಯ ಹೊಸ ದಿನಾಂಕವನ್ನು ಪ್ರಕಟಿಸಿಲ್ಲವಾದರೂ, ಗುರುವಾರ ರಾತ್ರಿ ವೇಳೆಗೆ ಮತ್ತೊಂದು ಪ್ರಯತ್ನ ನಡೆಯಲಿ ಎಂಬ ಸುಳಿವನ್ನು ನೀಡಿದೆ.

ಅಮೆರಿಕ, ಜಪಾನ್ ಮತ್ತು ರಷ್ಯಾ ಸದಸ್ಯರನ್ನು ಒಳಗೊಂಡ ಬಹುರಾಷ್ಟ್ರೀಯ ಸಿಬ್ಬಂದಿ ಬಾಹ್ಯಾಕಾಶ ಕೇಂದ್ರ ತಲುಪಿದ ಬಳಿಕ, ಜೂನ್‌ನಲ್ಲಿ ಆಗಮಿಸಿದ ಬಾಹ್ಯಾಕಾಶಯಾನಿಗಳಿಂದ ಹೊಣೆಗಾರಿಕೆ ವಹಿಸಿಕೊಳ್ಳುವರು. ಬೋಯಿಂಗ್‌ನ ಹೊಸ ಸ್ಟಾರ್‌ಲೈನರ್ ಕ್ಯಾಪ್ಸೂಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಬ್ಬರು ಪೈಲಟ್‌ಗಳು ಐಎಸ್ಎಸ್‌ನಲ್ಲಿ ಹೆಚ್ಚು ಕಾಲ ಉಳಿದುಕೊಳ್ಳುವುದು ಅನಿವಾರ್ಯವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...