ಶೀಘ್ರದಲ್ಲೇ ಟ್ವಿಟರ್‌ನಲ್ಲಿ ಯೂಟ್ಯೂಬ್‌, ಇನ್ಸ್ಟಾದಂತೆ ಹಲವು ಸೇವೆ ಲಭ್ಯ

Date:

ಎಲಾನ್ ಮಸ್ಕ್ ಅವರ ಸ್ವಾಧೀನದ ನಂತರ ಸಾಮಾಜಿಕ ಮಾಧ್ಯಮ ಟ್ವಿಟರ್ ಆದಾಯವನ್ನು ಗಳಿಸಲು ಹೆಣಗಾಡುತ್ತಿದೆ. ಈ ಕಾರಣದಿಂದಲೇ ಉದ್ಯೋಗಿಗಳ ಕಡಿತ, ಬ್ಲೂಟಿಕ್‌ ಶುಲ್ಕದಂತಹ ಹಲವು ಮಾರ್ಗಗಳನ್ನು ಕಂಡುಕೊಂಡಿತ್ತು. ಆದರೂ ನಷ್ಟ ಸರಿದೂಗಿರಲಿಲ್ಲ. ಈಗ ಹೊಸದಾಗಿ ನೇಮಕವಾಗಿರುವ ನೂತನ ಸಿಇಒ ಲಿಂಡಾ ಯಾಕರಿನೊ ಅವರು ಟ್ವಿಟರ್‌ ಆದಾಯವನ್ನು ದ್ವಿಗುಣಗಳಿಸುವ ಸಲುವಾಗಿ ಹಲವು ಯೋಜನೆಗಳನ್ನು ರೂಪಿಸುತ್ತಿದ್ದಾರೆ.  

ಮಸ್ಕ್‌ ಮತ್ತು ಸಿಇಒ ಲಿಂಡಾ ಯಾಕರಿನೊ ಅವರು ಇತ್ತೀಚಿಗೆ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿದ ಭಾಷಣಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಸಾಮಾಜಿಕ ಮಾಧ್ಯಮ ಕಂಪನಿ ಟ್ವಿಟರ್ ಈಗ ಕಂಪನಿಯ ಆರ್ಥಿಕ ವ್ಯವಹಾರವನ್ನು ಹೆಚ್ಚಿಸಲು ಡಿಜಿಟಲ್ ಜಾಹೀರಾತಿನ ಜೊತೆಗೆ ಯೂಟ್ಯೂಬ್‌ ಹಾಗೂ ಇನ್ಸ್ಟಾ ರೀತಿಯಲ್ಲಿ ಮನರಂಜನಾ ಕಿರು ವಿಡಿಯೋಗಳು, ವಿಡಿಯೋ ರಚನೆಗೆ ಪಾವತಿ ವ್ಯವಸ್ಥೆ ರೂಪಿಸಲಿದೆ. ಅಲ್ಲದೆ ಸ್ಮಾರ್ಟ್‌ ಟಿವಿಗಳಲ್ಲಿ ಆ್ಯಪ್‌ ಮತ್ತು ವಾಣಿಜ್ಯ ಪಾಲುದಾರಿಕೆಗಳ ಮೇಲೆ ಕೇಂದ್ರೀಕರಿಸಲು ಸಂಸ್ಥೆ ಯೋಜಿಸುತ್ತಿದೆ.

ಸಮಾವೇಶದಲ್ಲಿ ಮಾತನಾಡಿರುವ ಟ್ವಿಟರ್‌ ಸಿಇಒ, ಚೀನಾದ ವಿಚಾಟ್ ರೀತಿಯ “ಸೂಪರ್ ಅಪ್ಲಿಕೇಶನ್”ಗಳ ವೇದಿಕೆಯನ್ನು ಸೃಷ್ಟಿಸುವುದು ಸಂಸ್ಥೆಯ ಪ್ರಮುಖ ಯೋಜನೆಯಾಗಿದೆ. ಇದರ ಜೊತೆಯಲ್ಲಿ ಹಣ ವರ್ಗಾವಣೆ ಆ್ಯಪ್‌ಗಳನ್ನು ರಚಿಸುವ ಸಲುವಾಗಿ ಟ್ವಿಟರ್ ಸಂಸ್ಥೆಯು ಅಮೆರಿಕದ ಎಲ್ಲ 50 ರಾಜ್ಯಗಳಲ್ಲಿ “ಹಣ ವರ್ಗಾಯಿಸುವ ಪರವಾನಗಿ”ಗಾಗಿ ಅರ್ಜಿ ಸಲ್ಲಿಸುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೊಬೈಲ್‌ ಕೊಡದೆ ಕಟ್ಟುನಿಟ್ಟು ಮಾಡಿದ್ದಕ್ಕೆ ತಾಯಿಯನ್ನೇ ಕೊಲ್ಲಲು ಹೊರಟ ಮಗಳು!

ಕಂಪನಿಯ ಹೇಳಿಕೆಯ ಪ್ರಕಾರ, ಟ್ವಿಟರ್‌ನ ವರ್ಟಿಕಲ್ ವಿಡಿಯೋ ಆಯ್ಕೆಯಲ್ಲಿ ಬಳಕೆದಾರರು ಶೇ.10 ಕ್ಕಿಂತ ಹೆಚ್ಚು ಸಮಯವನ್ನು ಕಳೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಮಸ್ಕ್ ಅವರು ಈಗಾಗಲೇ ದೀರ್ಘ ಅವಧಿಯ ವಿಡಿಯೋ ರಚನೆಯ ಆಯ್ಕೆಗಳನ್ನು ಅಳವಡಿಸಲು ಮತ್ತು ಆಯ್ದ ವಿಡಿಯೋ ರಚನೆಕಾರರಿಗೆ ವ್ಯೂವ್ಸ್ ಆಯ್ಕೆಯ ಮೇಲೆ ಪಾವತಿಸುವ ವ್ಯವಸ್ಥೆಯನ್ನು ಶುರು ಮಾಡಲಿದ್ದಾರೆ ಎಂದು ಸುದ್ದಿ ಮಾಧ್ಯಮಗಳು ವರದಿ ಮಾಡಿವೆ.

ಟ್ವಿಟರ್‌ನಲ್ಲಿ ಮತ್ತೆ ಜಾಹೀರಾತು ಮಾರಾಟವನ್ನು ಆಧುನೀಕರಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಈ ವರ್ಷ ಆರೋಗ್ಯ, ಗ್ರಾಹಕ ಸರಕುಗಳು ಮತ್ತು ಹಣಕಾಸು ಸೇವೆಗಳು ಒಳಗೊಂಡ ಜಾಹೀರಾತುಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ವಾರ್ನರ್ ಬ್ರದರ್ಸ್, ಮೊಂಡೆಲೆಜ್, ಮೆಕ್‌ಡೊನಾಲ್ಡ್‌ ಮತ್ತು ವಾಲ್ಮಾರ್ಟ್‌ನಂತಹ ಬ್ರಾಂಡ್‌ಗಳು ಟ್ವಿಟರ್‌ನಲ್ಲಿ ಜಾಹೀರಾತನ್ನು ಪುನರಾರಂಭಿಸಿವೆ. ಜಾಹೀರಾತುದಾರರಿಗೆ ಮತ್ತಷ್ಟು ಅವಕಾಶ ನೀಡುವ ಸಲುವಾಗಿ ಕೆಲವು ನಿಯಮಗಳನ್ನು ಸಡಿಲಗೊಳಿಸಲಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...