ವಿಶ್ವಾದ್ಯಂತ ಬಳಕೆದಾರರಿಗೆ ಕೈಕೊಟ್ಟ ಎಲಾನ್ ಮಸ್ಕ್ ಒಡೆತನದ ಟ್ವಿಟ್ಟರ್(ಎಕ್ಸ್‌)!

Date:

ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದಲ್ಲಿರುವ ಮೈಕ್ರೋಬ್ಲಾಗಿಂಗ್ ಸೈಟ್ ಎಕ್ಸ್ (ಹಿಂದಿನ ಟ್ವಿಟರ್) ಗುರುವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ತಾಂತ್ರಿಕ ಕಾರಣದಿಂದಾಗಿ ವಿಶ್ವದಾದ್ಯಂತ ಬಳಕೆದಾರರರಿಗೆ ಕೈಕೊಟ್ಟ ಪ್ರಸಂಗ ನಡೆದಿದೆ.

‘ಎಕ್ಸ್‌’ನ ವೆಬ್‌ಸೈಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಎರಡೂ ಕಡೆಗಳಲ್ಲೂ ಸಾಮಾನ್ಯ ಟ್ವೀಟ್‌ಗಳ ಬದಲಿಗೆ ‘ನಿಮ್ಮ ಟೈಮ್‌ಲೈನ್‌ಗೆ ಸ್ವಾಗತ(Welcome to your timeline)’ ಎಂದು ತೋರಿಸುತ್ತಿತ್ತು. ಈ ನಡುವೆ ಹಲವು ಬಳಕೆದಾರರು ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿ, ಟ್ವಿಟ್ಟರ್ ಕೈ ಕೊಟ್ಟಿದೆ. ಪರಿಶೀಲನೆ ನಡೆಸಲು ಇಲ್ಲಿ ಬಂದಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಕ್ಸ್‌ ಪ್ಲಾಟ್‌ಫಾರ್ಮ್ ಅನ್ನು ಬಳಸಲು ಸಾಧ್ಯವಾಗದಿರುವ ಬಗ್ಗೆ 70,000 ಕ್ಕೂ ಹೆಚ್ಚು ವರದಿಗಳು ಬಂದಿದೆ. ಈ ಸಮಸ್ಯೆಗೆ ಕಾರಣವೇನು ಎಂಬುದರ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ‘ಡೌನ್‌ಡೆಕ್ಟರ್’ ವರದಿ ಮಾಡಿದೆ.

ಸ್ಥಗಿತದ ನಂತರ, ಹಲವಾರು ಟ್ವಿಟ್ಟರ್ ಬಳಕೆದಾರರು ತಮ್ಮ ಕಳವಳಗಳನ್ನು ಹಂಚಿಕೊಳ್ಳಲು ಫೇಸ್‌ಬುಕ್‌ ಮತ್ತು ಇತರ ಸೋಷಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ಬಳಸಿಕೊಂಡಿದ್ದಾರೆ.

ಎಕ್ಸ್ ಈ ರೀತಿಯ ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿರುವುದು ಇದೇ ಮೊದಲಲ್ಲ. ಎಲಾನ್ ಮಸ್ಕ್ ಒಡೆತನಕ್ಕೆ ಬಂದ ಬಳಿಕ, ಈ ವರ್ಷದ ಮಾರ್ಚ್ ಮತ್ತು ಜುಲೈನಲ್ಲೂ ಕೂಡ ಇದೇ ರೀತಿಯ ಸಮಸ್ಯೆಯನ್ನು ಎದುರಿಸಿತ್ತು.

ಕೊನೆಗೂ ಸರಿಗೊಂಡ ಟ್ವಿಟ್ಟರ್

ವಿಶ್ವಾದ್ಯಂತ  ಬಳಕೆದಾರರ ದೂರಿನ ನಡುವೆಯೇ ಸುಮಾರು ಅರ್ಧಗಂಟೆಗಳ ಬಳಿಕ ಕೊನೆಗೂ ಟ್ವಿಟ್ಟರ್ ಸರಿಯಾಗಿದೆ. ಟ್ವಿಟ್ಟರ್ ಸರಿಯಾದ ಬಳಿಕ #Twitterdown ಎಂಬ ಹ್ಯಾಷ್‌ಟ್ಯಾಗ್ ಟ್ರೆಂಡಿಂಗ್ ಆಗುತ್ತಿದೆ. ಅಲ್ಲದೇ, ಹಲವಾರು ಮೀಮ್ಸ್‌ಗಳು ಕೂಡ ಹರಿದಾಡುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಟ್ಸ್ಯಾಪ್ ಎನ್‌ಕ್ರಿಪ್ಶನ್ ಎಂಬ ಭ್ರಮೆ; ಗೌಪ್ಯತೆಯ ಸೋಗಿನಲ್ಲಿ 85 ಕೋಟಿ ಭಾರತೀಯರ ಡೇಟಾ ಮಾರಾಟ?

ಭಾರತವು ವಾಟ್ಸ್ಯಾಪ್ ಗೆ ವಿಶ್ವದಲ್ಲೇ ಅತಿದೊಡ್ಡ ಮಾರುಕಟ್ಟೆಯಾಗಿದ್ದು, ಇಲ್ಲಿ ಸುಮಾರು 50...

ವಾಟ್ಸಾಪ್‌ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್‌’ ಸುರಕ್ಷತೆ ಕೇವಲ ನಾಟಕವೇ? ಮೆಟಾ ವಿರುದ್ಧ ಗಂಭೀರ ಆರೋಪ

ವಿಶ್ವದಾದ್ಯಂತ ಕೋಟ್ಯಂತರ ಜನರು ನಂಬಿ ಬಳಸುತ್ತಿರುವ ವಾಟ್ಸಾಪ್‌ನ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಷನ್’ ಸುರಕ್ಷತಾ...

ಆಂಧ್ರಪ್ರದೇಶ | 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧಕ್ಕೆ ಸರ್ಕಾರ ಚಿಂತನೆ​

ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಆಂಧ್ರಪ್ರದೇಶ ಸರ್ಕಾರ ಮಹತ್ವದ...

ಇನ್‌ಸ್ಟಾಗ್ರಾಮ್ ಬಳಕೆದಾರರಿಗೆ ಮಹಾ ಆಘಾತ: ಡಾರ್ಕ್ ವೆಬ್‌ನಲ್ಲಿ 1.75 ಕೋಟಿ ಜನರ ಖಾಸಗಿ ಮಾಹಿತಿ ಬಹಿರಂಗ?

ಜಗತ್ತಿನಾದ್ಯಂತ ಕೋಟ್ಯಂತರ ಬಳಕೆದಾರರನ್ನು ಹೊಂದಿರುವ, ಮೆಟಾ ಒಡೆತನದ ಪ್ರಮುಖ ಸಾಮಾಜಿಕ ಜಾಲತಾಣ...