ಡಿಸೆಂಬರ್‌ 20, 21, 22 ರಂದು ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

Date:

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯದಲ್ಲಿ ಡಿಸೆಂಬರ್‌ 20, 21, 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಕನ್ನಡ ಸಾಹಿತ್ಯ ಪರಿಷತ್ತು, ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಮಾಹಿತಿ ನೀಡಿದರು.

“ಈ ಹಿಂದೆ ಜೂನ್‌ ತಿಂಗಳಲ್ಲಿ ಸಮ್ಮೇಳನ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿತ್ತು. ಇದೀಗ ಡಿಸೆಂಬರ್‌ ತಿಂಗಳಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದ, ಹೊರರಾಜ್ಯ ಹಾಗೂ ವಿದೇಶದ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಸಾಹಿತ್ಯ ಸಮ್ಮೇಳನ ಅಧ್ಯಕ್ಷರ ಆಯ್ಕೆಯಾದ ಕೂಡಲೇ ಮಾಹಿತಿ ನೀಡಲಾಗುವುದು. ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತಿನವರು ಸಾಹಿತಿಗಳ ಪಟ್ಟಿ ಒದಗಿಸಿದ ನಂತರ ಸರ್ಕಾರದೊಂದಿಗೆ ಚರ್ಚಿಸಿ ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ” ಎಂದರು.

“ಮಂಡ್ಯದಲ್ಲಿ 48 ನೇ ಸಾಹಿತ್ಯ ಸಮ್ಮೇಳನ 1974 ರಲ್ಲಿ ಜಯದೇವಿ ತಾಯಿ ಲಿಗಾಡೆ ಅವರ ಅಧ್ಯಕ್ಷತೆಯಲ್ಲಿ, 63 ನೇ ಸಾಹಿತ್ಯ ಸಮ್ಮೇಳನ 1994 ರಲ್ಲಿ ಡಾ. ಚದುರಂಗ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು. ಇದೀಗ ಮೂರನೇ ಬಾರಿ ಸಮ್ಮೇಳನ ಆಯೋಜಿಸಲಾಗುತ್ತಿದೆ. ಎಲ್ಲರೂ ಸೇರಿ ಸಮ್ಮೇಳನವನ್ನು ಯಶಸ್ವಿಯಾಗಿ ಅಯೋಜಿಸೋಣ. ಆ ವಿಶ್ವಾಸ ನನಗಿದೆ” ಎಂದು ತಿಳಿಸಿದರು.

“ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಭೆಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಮಂಡ್ಯ ಜಿಲ್ಲೆಯ ಶಾಸಕರು, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಸೀರ್‌ ಅಹ್ಮದ್‌, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಷಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಜಯ್‌ ನಾಗಭೂಷಣ್‌ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...