ಆನ್‌ಲೈನ್‌ನಲ್ಲಿ ರಾಮಮಂದಿರದ ಹೆಸರಿನಲ್ಲಿ ನಕಲಿ ಪ್ರಸಾದ ಮಾರಾಟ; ಅಮೆಝಾನ್‌ಗೆ ನೋಟಿಸ್

Date:

‘ಶ್ರೀರಾಮ ಮಂದಿರ ಅಯೋಧ್ಯ ಪ್ರಸಾದ’ ಹೆಸರಿನಲ್ಲಿ ಸಿಹಿತಿಂಡಿಗಳನ್ನು ತನ್ನ ವೇದಿಕೆಯಲ್ಲಿ ಮಾರಾಟ ಮಾಡಿದ ಸಂಬಂಧ ಇ-ಕಾಮರ್ಸ್ ದೈತ್ಯ ಅಮೆಝಾನ್ ಕಂಪನಿಯ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ(ಸಿಸಿಪಿಎ) ನೋಟಿಸ್ ಜಾರಿ ಮಾಡಿದೆ.

ರಾಮಪ್ರಸಾದ ಹೆಸರಿನಲ್ಲಿ ನಕಲಿ ಉತ್ಪನ್ನಗಳನ್ನು ಮಾರಾಟ ಮಾಡುವ ಮೂಲಕ ಅಮೆಝಾನ್ ಆನ್‌ಲೈನ್ ಗ್ರಾಹಕರನ್ನು ದಾರಿ ತಪ್ಪಿಸುತ್ತಿದೆ ಎಂದು ಆರೋಪಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿತ್ತು.

ದೂರಿಗೆ ಪ್ರತಿಕ್ರಿಯಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ (ಸಿಸಿಪಿಎ) ಅಮೆಝಾನ್ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ವಾರದೊಳಗೆ ವಿವರಣೆ ನೀಡುವಂತೆ ಗಡುವು ನೀಡಲಾಗಿದೆ. ಇಲ್ಲವಾದಲ್ಲಿ ಕಂಪನಿ ವಿರುದ್ಧ ಗ್ರಾಹಕ ಸಂರಕ್ಷಣಾ ಕಾಯ್ದೆ-2019ರ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದ ಮುಖ್ಯ ಆಯುಕ್ತ ರೋಹಿತ್ ಕುಮಾರ್ ಸಿಂಗ್ ನೇತೃತ್ವದ ಕೇಂದ್ರಿಯ ಗ್ರಾಹಕ ರಕ್ಷಣಾ ಪ್ರಾಧಿಕಾರ (CCPA) ನೋಟಿಸ್‌ ಜಾರಿ ಮಾಡಿದ್ದು, “ಸಿಸಿಪಿಎ ನೀಡಿದ ನೋಟಿಸ್ ನಲ್ಲಿ ಏಳು ದಿನಗಳ ಒಳಗೆ ಪ್ರತಿಕ್ರಿಯೆ ಸಲ್ಲಿಸಬೇಕು. ಒಂದು ವೇಳೆ ನೋಟಿಸ್‌ಗೆ ಉತ್ತರ ನೀಡಲು ವಿಫಲವಾದಲ್ಲಿ ಗ್ರಾಹಕರ ಸಂರಕ್ಷಣಾ ಕಾಯಿದೆ- 2019ರ ನಿಬಂಧನೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದೆ.

ಇದನ್ನು ಓದಿದ್ದೀರಾ? ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆಯನ್ನು ‘ಅಶುದ್ಧ’ವೆಂದು ವಾಪಸ್‌ ಕೊಟ್ಟ ಸವರ್ಣೀಯರು

ದೇಸಿ ಹಸುವಿನ ಹಾಲಿನ ಪೇಡ, ಘೀ ಬಂಡಿ ಲಡ್ಡು, ರಘುಪತಿ ಘೀ ಲಡ್ಡು, ಖೋಯಾ ಖೋಬಿ ಲಡ್ಡು ಸೇರಿದಂತೆ ಹಲವು ಸಿಹಿ ತಿಂಡಿಗಳನ್ನು ಹೈಲೈಟ್ ಮಾಡಿ ಅಮೆಝಾನ್ ಮಾರಾಟ ಮಾಡುತ್ತಿತ್ತು ಎಂದು ಆರೋಪಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...