ಕೇಂದ್ರ ಬಜೆಟ್‌ನಲ್ಲಿ ಅಂಗನವಾಡಿ ನೌಕರರನ್ನು ನಿರ್ಲಕ್ಷ್ಯ: ಕಲ್ಪನಾ ಖಂಡನೆ

Date:

ಕೋಲಾರ : ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಕಲ್ಪನಾ ಖಂಡಿಸಿದ್ದಾರೆ

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಅಂಗನವಾಡಿ ಕಾರ್ಯಕರ್ತೆಯರ ಸಂಕಷ್ಟ ಮತ್ತು ಹಕ್ಕುಗಳ ಬಗ್ಗೆ ಮೌನ ವಹಿಸಿದ್ದಾರೆ, ಐಸಿಡಿಎಸ್, ಶಾಲಾ ಮಧ್ಯಾಹ್ನದ ಊಟ ಯೋಜನೆ ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್‌ ನಂತಹ ಮೂಲಭೂತ ಸೇವಾ ಯೋಜನೆಗಳಲ್ಲಿನ ಮೂಲಸೌಕರ್ಯ ಮತ್ತು ಸೇವೆಗಳ ಗುಣಮಟ್ಟದ ಬಗ್ಗೆ ಬಜೆಟ್ ನಲ್ಲಿ ಅನುದಾನ ಹಂಚಿಕೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರದಲ್ಲಿ ಹೆಲಿಕಾಪ್ಟರ್ ಮೂಲಕ ಚಿನ್ನ ನಿಕ್ಷೇಪ ಹುಡುಕಾಟ

ಆಶಾ ಕಾರ್ಯಕರ್ತೆಯರಿಗೆ ತಿಂಗಳಿಗೆ ಕೇವಲ 1200 ರೂ. ಮತ್ತು ಮಿಡ್ ಡೇ ಮೀಲ್ ಕಾರ್ಯಕರ್ತರಿಗೆ 2018 ರಿಂದ ತಿಂಗಳಿಗೆ 600 ರೂ. ಪಾವತಿಸಲಾಗುತ್ತದೆ. ಯೋಜನಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ, ಪಿಂಚಣಿ ಇಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ನೀಡುವ 2022 ರ ಸುಪ್ರೀಂ ಕೋರ್ಟ್ ಆದೇಶವನ್ನು ಸಹ ಸರ್ಕಾರ ಜಾರಿಗೆ ತಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...