ರಾಯಚೂರು | ತನಿಖೆ ವೇಳೆ ಪೊಲೀಸರ ಮೇಲೆ ಹಲ್ಲೆ; ಆರೋಪಿಗಳು ಪರಾರಿ

Date:

ಕಳ್ಳತನ ಪ್ರಕರಣದಲ್ಲಿ ತನಿಖೆ ನಡೆಸುವಾಗ ಶಂಕಿತರು ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ನಡೆದಿದೆ. ತನಿಖೆ ನಡೆಸುದ್ದಿ ಬಳಗಾನೂರು ಠಾಣೆಯ ಪೊಲೀಸ್ ಸಿಬ್ಬಂದಿ ಮೇಲೆ ಸೋಮವಾರ ಸಂಜೆ ಹಲ್ಲೆ ನಡೆದಿದೆ.

ಠಾಣೆಯ ಸಿಬ್ಬಂದಿ ಮಂಜುನಾಥ ಹಾಗೂ ಗೋಪಾಲ ಎಂಬವರಿಗೆ ಗಾಯಗಳಾಗಿವೆ. ಅವರಿಗೆ ಮಸ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಳಗಾನೂರು ಠಾಣೆ ವ್ಯಾಪ್ತಿಯಲ್ಲಿ ಸುಂಕನೂರು ಗ್ರಾಮದಲ್ಲಿ ಇತ್ತೀಚೆಗೆ ಕಳ್ಳತನ ನಡೆದಿತ್ತು. ಪ್ರಕರಣ ದಾಖಲಿಕೊಂಡಿದ್ದ ಪೊಲೀಸರು ತನಿಖೆ ನಡೆಸುತ್ತಿದ್ದರು. ಈ ವೇಳೆ, ಗುಡದೂರು ಬಳಿ ಇಬ್ಬರು ಅನುಮಾನಸ್ಪದ ರೀತಿಯಲ್ಲಿ ಬೈಕ್‌ನಲ್ಲಿ ಓಡಾಡುತ್ತಿದ್ದುದ್ದನ್ನು ಪೊಲೀಸರು ಗಮನಿಸಿದ್ದಾರೆ. ಅವರನ್ನು ತಡೆದು ವಿಚಾರಿಸಲು ಹೋಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ, ಆ ಇಬ್ಬರೂ ಪೊಲೀಸರನ್ನು ತಳ್ಳಿ, ಪರಾರಿಯಾಗಲು ಯತ್ನಿಸಿದ್ದಾರೆ. ಪೊಲೀಸರು ಅವರ ಬೆನ್ನತ್ತಿದ್ದು, ಮಸ್ಕಿಯ ವಾಲ್ಮೀಕಿ ಸರ್ಕಲ್‌ನಲ್ಲಿ ಸಿಕ್ಕಿಕೊಂಡಿದ್ದಾರೆ. ಅಲ್ಲಿ, ಆರೋಪಿಗಳು ಪೊಲೀಸರ ಮೇಲೆ ಕಲ್ಲು, ಬಡಿಗೆಯಿಂದ ದಾಳಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

“ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ. ಬಳಗಾನೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ” ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಖಿಲ್ ಬಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...