ಛತ್ತೀಸ್‌ಗಢ, ಮಿಝೋರಾಂನಲ್ಲಿ ಇಂದು ಮತದಾನ: ಮಧ್ಯಾಹ್ನದವರೆಗೆ ಶೇ.20ಕ್ಕೂ ಹೆಚ್ಚು ಮತ ಚಲಾವಣೆ

Date:

2024ರ ಜನವರಿಯಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಅವಧಿ ಮುಕ್ತಾಯಗೊಳ್ಳಲಿರುವ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದಂತೆ ಛತ್ತೀಸ್‌ಗಢ ಮತ್ತು ಮಿಝೋರಾಂ ರಾಜ್ಯಗಳಲ್ಲ ಇಂದು ಮತದಾನ ಆರಂಭವಾಗಿದ್ದು,  ಮಧ್ಯಾಹ್ನ 11ರವರೆಗೆ ಶೇ.26ರಷ್ಟು ಮತ ಚಲಾವಣೆಯಾಗಿರುವುದಾಗಿ ವರದಿಯಾಗಿದೆ.

ಲೋಕಸಭಾ ಚುನಾವಣೆಗೂ ಮುನ್ನ ನಡೆಯುತ್ತಿರುವ ಈ ಚುನಾವಣೆಯನ್ನು ‘ಸೆಮಿಫೈನಲ್’ ಎಂದೇ ಪರಿಗಣಿಸಲಾಗಿದ್ದು, ತಮ್ಮ ಮುಂದಿನ ಸರ್ಕಾರವನ್ನು ಆಯ್ಕೆ ಮಾಡಲು ಜನ ಯಾರಿಗೆ ಅಧಿಕಾರ ನೀಡಲಿದ್ದಾರೆ ಎಂದು ಕಾದು ನೋಡಬೇಕಿದೆ.

ಭಾರತದ ಈಶಾನ್ಯ ರಾಜ್ಯವಾಗಿರುವ ಮಿಝೋರಾಂನಲ್ಲಿ 40 ವಿಧಾನಸಭಾ ಕ್ಷೇತ್ರಗಳಿದ್ದು, ಚುನಾವಣಾ ಆಯೋಗವು ಒಂದೇ ಹಂತದಲ್ಲಿ ಇಲ್ಲಿ ಮತದಾನ ನಡೆಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 174 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮಿಝೋ ನ್ಯಾಷನಲ್ ಫ್ರಂಟ್ (ಎಂಎನ್‌ಎಫ್‌), ಕಾಂಗ್ರೆಸ್ ಮತ್ತು ಝೋರಾಮ್ ಪೀಪಲ್ಸ್ ಮೂವ್ಮೆಂಟ್ (ಝೆಡ್ ಪಿ ಎಂ) ಎಲ್ಲ 40 ಕ್ಷೇತ್ರಗಳಿಂದಲೂ ಸ್ಪರ್ಧಿಸುತ್ತಿವೆ. ಬಿಜೆಪಿ, ಎಎಪಿ ಮತ್ತು ಸ್ವತಂತ್ರ ಅಭ್ಯರ್ಥಿಗಳು ಕ್ರಮವಾಗಿ 23, 4 ಮತ್ತು 27 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದಾರೆ.

ಕ್ರಿಶ್ಚಿಯನ್ ಪ್ರಾಬಲ್ಯವಿರುವ ಮಿಝೋರಾಂನಲ್ಲಿ ಎಂಎನ್‌ಎಫ್ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದು, ಪಕ್ಷದ ಅಧ್ಯಕ್ಷ ಝೊರಾಮ್‌ತಂಗ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಮಿಝೋರಾಂನಲ್ಲಿ ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಈಶಾನ್ಯ ರಾಜ್ಯಾದ್ಯಂತ 1,276 ಮತಗಟ್ಟೆಗಳಲ್ಲಿ 8,00,000 ಕ್ಕೂ ಹೆಚ್ಚು ಅರ್ಹ ಮತದಾರರು ಇಂದು ಮತ ಚಲಾಯಿಸುವ ನಿರೀಕ್ಷೆಯಿದೆ.

ಛತ್ತೀಸ್‌ಗಢದಲ್ಲಿ ಇಂದು ಮೊದಲ ಹಂತದ ಮತದಾನ
ಛತ್ತೀಸ್‌ಗಢದಲ್ಲಿ ಎರಡು ಹಂತಗಳಲ್ಲಿ ಮತದಾನ ನಿಗದಿಯಾಗಿದ್ದು, ಇಂದು ಮೊದಲ ಹಂತದ ಮತದಾನ ನಡೆಯುತ್ತಿದೆ. ನವೆಂಬರ್ 17ರಂದು ಎರಡನೇ ಹಂತದ ಮತದಾನ ನಡೆಯಲಿದೆ.

images 12

ಒಟ್ಟು 90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್‌ಗಢದಲ್ಲಿ ಮೊದಲ ಹಂತದ ಮತದಾನದಲ್ಲಿ 20 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ. 11 ಗಂಟೆಯವರೆಗಿನ ಮತದಾನದಲ್ಲಿ ಶೇ.22.97 ಮತ ಚಲಾವಣೆಯಾಗಿರುವುದಾಗಿ ವರದಿಯಾಗಿದೆ.

ಪೊಲೀಸ್ ಮತ್ತು ಅರೆಸೇನಾ ಪಡೆಗಳ ಬಿಗಿ ಭದ್ರತೆಯ ನಡುವೆ ಚುನಾವಣೆ ನಡೆಯುತ್ತಿದ್ದರೂ, ಸುಕ್ಮಾ ಜಿಲ್ಲೆಯಲ್ಲಿ ನಕ್ಸಲೀಯರು ನಡೆಸಿದ ಐಇಡಿ ಸ್ಫೋಟದಲ್ಲಿ ಸಿಆರ್‌ಪಿಎಫ್ ಕಮಾಂಡೋ ಒಬ್ಬರು ಗಾಯಗೊಂಡಿರುವುದಾಗಿ ವರದಿಯಾಗಿದೆ. ಮತದಾನದ ವೇಳೆಗಿನ ಭದ್ರತೆಯನ್ನು ಪರಿಶೀಲಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ.

ಮೊದಲ ಹಂತದ 20 ಕ್ಷೇತ್ರಗಳ ಪೈಕಿ 10 ಕ್ಷೇತ್ರಗಳಿಗೆ ಬೆಳಗ್ಗೆ 7 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮತದಾನ ನಡೆಯಲಿದೆ. ಉಳಿದ 10 ಕ್ಷೇತ್ರಗಳಿಗೆ ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 19,93,937 ಪುರುಷ ಮತದಾರರು, 20,84,675 ಮಹಿಳಾ ಮತದಾರರು ಮತ್ತು 69 ತೃತೀಯ ಲಿಂಗಿ ಮತದಾರರು 20 ಸ್ಥಾನಗಳಲ್ಲಿ ತಮ್ಮ ಹಕ್ಕು ಚಲಾಯಿಸುವ ಅರ್ಹತೆ ಪಡೆದಿದ್ದಾರೆ. ಈ ಹಂತದಲ್ಲಿ ಒಟ್ಟು 40,78,681 ಮತದಾರರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...