ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಮನೆ ಹಾಗೂ ಕಟ್ಟಡಗಳ ಮಾಲೀಕರು ಆಸ್ತಿ ತೆರಿಗೆ ಕಟ್ಟದೇ ಬಾಕಿ ಉಳಿಸಿಕೊಂಡವರಿಗೆ ಪಾಲಿಕೆ ಎಚ್ಚರಿಕೆ ನೀಡಿದ್ದು, ಆಸ್ತಿ ತೆರಿಗೆ ಕಟ್ಟದಿರುವ ಕಟ್ಟಡಗಳನ್ನು ಸೀಜ್ ಮಾಡುವ ಕಾರ್ಯವನ್ನು ಪಾಲಿಕೆ ಅಧಿಕಾರಿಗಳು ಪ್ರಾರಂಭಿಸಿದ್ದಾರೆ.
ಪಾಲಿಕೆ ಇದೀಗ ಕಾರ್ಯಾಚರಣೆ ಆರಂಭಿಸಿದ್ದು, ಆಸ್ತಿ ತೆರಿಗೆ ಕಟ್ಟದ ಕಟ್ಟಡಗಳಿಗೆ ಬೀಗ ಜಡಿದು ಸೀಜ್ ಮಾಡುತ್ತಿದ್ದಾರೆ. ವರ್ತೂರು, ವೈಟ್ಫೀಲ್ಡ್ ಸೇರಿದಂತೆ ನಗರದ ಹಲವೆಡೆ ಗುರುವಾರ ಸಂಜೆಯಿಂದ ಬಿಬಿಎಂಪಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, ಹಲವು ಕಟ್ಟಡಗಳನ್ನು ಸೀಜ್ ಮಾಡಿದ್ದಾರೆ.
ಆಸ್ತಿ ತೆರಿಗೆ ಕಟ್ಟದ ಕಟ್ಟಡ ಮಾಲೀಕರಿಗೆ ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ತೆರಿಗೆ ಬಾಕಿ ಉಳಿಸಿಕೊಂಡವರ ವಿರುದ್ಧ ಕಾರ್ಯಾಚರಣೆ ನಡೆಸಲು ಬಿಬಿಎಂಪಿ ನವೆಂಬರ್‌ನಲ್ಲೇ ತಿಳಿಸಿತ್ತು. ಹಾಗೆಯೇ, ಅಧಿಕ ಮೊತ್ತ ಬಾಕಿ ಉಳಿಸಿಕೊಂಡ ಕಟ್ಟಡ ಮಾಲೀಕರ ಕಾರು ಮತ್ತು ಬೈಕ್ ಜಪ್ತಿ ಮಾಡಲು ಪಾಲಿಕೆ ಅಧಿಕಾರಿಗಳು ಆರಂಭಿಸಿದ್ದರು. ಈ ಬಗ್ಗೆ ಮೊದಲು ಮಾಲೀಕರಿಗೆ ಮೊದಲು ನೋಟಿಸ್ ನೀಡಲಾಗುತ್ತದೆ ಎಂದು ಹೇಳಿದ್ದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ
ಸದ್ಯ, ಮುನೀಶ್ ಮೌದ್ಗಿಲ್ ಅವರು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರಾಗಿದ್ದಾರೆ. ತೆರಿಗೆ ವಂಚಕರಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಕ್ರಮಗಳನ್ನು ಕೈಗೊಳ್ಳಲು ಆರಂಭಿಸಿದೆ.




