ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿಯಾಗಿರುವ ಘಟನೆ ಬೆಳಗಾವಿಯ ಕುವೆಂಪು ನಗರದಲ್ಲಿ ನಡೆದಿದೆ.
ಬೆಳಗಾವಿ ನಗರ ಬಸ್ ನಿಲ್ದಾಣದಿಂದ ಸಹ್ಯಾದ್ರಿ ನಗರಕ್ಕೆ ಹೊರಟಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದೆ. ಬಸ್‌ನಲ್ಲಿ ಸಿಲುಕಿದ್ದ ನಿರ್ವಾಹಕ, ಪ್ರಯಾಣಿಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.




