ಬೀದರ್‌ | ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಿ : ಶಶಿಕಾಂತ ಶೆಂಬೆಳ್ಳಿ

Date:

ಸರ್ಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಗುಣಮಟ್ಟ ಶಿಕ್ಷಣಕ್ಕೆ ಒತ್ತು ನೀಡಿದರೆ ಪೋಷಕರು ತಂತಾನೇ ಮಕ್ಕಳನ್ನು ಸೇರಿಸಲು ಉತ್ಸಾಹ ತೋರುತ್ತಾರೆ ಎಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.

ಅವಿರತ ಆರ್ಗನೈಶೇನ್ ವತಿಯಿಂದ ಬೀದರ್‌ ತಾಲ್ಲೂಕಿನ ಬೆಳ್ಳೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈಚೆಗೆ ಹಮ್ಮಿಕೊಂಡ ಉಚಿತ ನೋಟ್‌ ಬುಕ್‌ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಂಗ್ಲ ಹಾಗೂ ಕನ್ನಡ ಮಾಧ್ಯಮದ ಖಾಸಗಿ ಶಾಲೆಗಳ ಹಾವಳಿಯಿಂದ ಅನೇಕ ಕಡೆ ಸರ್ಕಾರಿ ಶಾಲೆಗಳು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿ ನಲುಗುತ್ತಿವೆ. ಮಕ್ಕಳನ್ನು ಬಹುಮುಖಿ ಪ್ರತಿಭಾವಂತರನ್ನಾಗಿ ಮಾಡುವ ಜೊತೆಗೆ ಶಾಲೆಯಲ್ಲಿ ಕಲಿಕೆಯ ವಾತಾವರಣ ನಿರ್ಮಿಸಲು ಶಿಕ್ಷಕರು ಗುಣಮಟ್ಟ ಶಿಕ್ಷಣ, ನೈತಿಕ ಮೌಲ್ಯ ಬೋಧನೆಗೆ ಮುಂದಾಗಬೇಕುʼ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿಂತಕ ದಿಲೀಪ ಚಂದಾ ಮಾತನಾಡಿ, ʼಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುವ ಮಕ್ಕಳ ಕಲಿಕೆಗೆ ಅಗತ್ಯವಿರುವ ನೋಟ್‌ ಬುಕ್‌ ಸೇರಿದಂತೆ ಇತರ ಸಾಮಾಗ್ರಿ ಕಾರ್ಯ ಅವಿರತ ತಂಡದಿಂದ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅವಿರತ ಆರ್ಗನೈಶೇನ್‌ ತಂಡದಿಂದ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಲ್ಲಿ ವಿಭಿನ್ನ ಕಾರ್ಯಕ್ರಮ ಆಯೋಜಿಸುವ ಯೋಜನೆಯಿದೆʼ ಎಂದು ಹೇಳಿದರು.

WhatsApp Image 2025 06 21 at 11.22.44 AM 1
ಸರ್ಕಾರಿ ಕನ್ನಡ ಹಾಗೂ ಉರ್ದು ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ‌ ʼಅವಿರತʼ ತಂಡದಿಂದ ನೋಟ್ ಬುಕ್‌ ವಿತರಿಸಲಾಯಿತು.

ಪತ್ರಕರ್ತ ಬಾಲಾಜಿ ಕುಂಬಾರ ಮಾತನಾಡಿ, ʼಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಉಳಿಸುವುದು ಇಂದಿನ ಸವಾಲಿನ ಕೆಲಸವಾಗಿದೆ. ಶಿಕ್ಷಕ ಇಚ್ಛಾಶಕ್ತಿ, ಪೋಷಕರ ಪ್ರೋತ್ಸಾಹದಿಂದ ಸರ್ಕಾರಿ ಶಾಲೆಗಳ ಅಭಿವೃದ್ಧಿ ಸಾಧ್ಯ. ಸರ್ಕಾರೇತರ ಸಂಘ-ಸಂಸ್ಥೆಗಳು, ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳ ಸಹಾಯಧನದಿಂದ ಮಕ್ಕಳ ಕಲಿಕೆಗೆ ಪೂರಕವಾದ ವಾತಾವರಣ ನಿರ್ಮಿಸಬಹುದು. ಮಕ್ಕಳನ್ನು ಮೌಲ್ಯ ಶಿಕ್ಷಣ, ಪಠೇತ್ಯರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಳ್ಳುವಂತೆ ಪ್ರೇರಣೆ ನೀಡಬೇಕುʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ ಕೋಟೆಯಲ್ಲಿ ವಿಶ್ವ ಯೋಗ ದಿನಾಚರಣೆ ; ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾಗಿ

ಎಸ್‌ಡಿಎಂಸಿ ಅಧ್ಯಕ್ಷ ಶಾಮಸನ್‌ ಅಧ್ಯಕ್ಷತೆ ವಹಿಸಿದ್ದರು. ಅವಿರತ ತಂಡದ ಸದಸ್ಯ ಪ್ರವೀಣಕುಮಾರ್‌ ರತ್ನಾಕರ್, ಸಂಪನ್ಮೂಲ ಶಿಕ್ಷಕರಾದ ಸುಲೋಚನಾ, ರಘುಶಂಖ ಭಾತಂಭ್ರಾ, ಶಿಕ್ಷಕರಾದ ಮನೋಹರ ಕಾಶಿ, ವಿಠ್ಠಲ ವರ್ಮಾ ಮತ್ತಿತರರು ಹಾಜರಿದ್ದರು. ಶಾಲೆಯ ಮುಖ್ಯ ಶಿಕ್ಷಕ ನಾಗಶೆಟ್ಡಿ ಗಾದಗೆ ಸ್ವಾಗತಿಸಿದರು. ಶಿಕ್ಷಕಿ ಸುಜಾತಾ ಎಸ್‌, ರುದ್ರಾ ನಿರೂಪಿಸಿ, ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...