ಬೀದರ್‌ | ಇಂಗ್ಲಿಷ್‌ ಪ್ರಾಧ್ಯಾಪಕ ವಿರೇಂದ್ರ ಸಿಂಪಿ ಬರೆದದ್ದೆಲ್ಲವೂ ಕನ್ನಡದಲ್ಲೇ : ಶಿವಕುಮಾರ ನಾಗವಾರ

Date:

ʼಹಿರಿಯ ಸಾಹಿತಿ ವಿರೇಂದ್ರ ಸಿಂಪಿ ಅವರು ಇಂಗ್ಲಿಷ್ ಪ್ರಾಧ್ಯಾಪಕರಾದರೂ ಬರೆದದ್ದೆಲ್ಲಾ ಕನ್ನಡದಲ್ಲೆ. ಪ್ರಬಂಧಕಾರ, ಅಂಕಣಕಾರರೆಂದೇ ಪ್ರಸಿದ್ಧಿಯಾದ ಅವರು ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃಷಿ ಮಾಡಿದ್ದಾರೆʼ ಎಂದು ಕಥೆಗಾರ ಶಿವಕುಮಾರ ನಾಗವಾರ ಹೇಳಿದರು.

ಔರಾದ್‌ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಬನಮ್ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಿರಿಯ ಸಾಹಿತಿ ವೀರೇಂದ್ರ ಸಿಂಪಿ ಅವರ ಬದುಕು-ಬರಹ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ʼವಿರೇಂದ್ರ ಸಿಂಪಿ ಅವರು ಬದುಕಿನ್ನುದ್ದಕ್ಕೂ ಅನೇಕ ಕಷ್ಟ, ನೋವುಗಳನ್ನು ಉಂಡವರು. ಕನ್ನಡ ಅಂದರೆ ಅವರಿಗೆ ಪಂಚ ಪ್ರಾಣವಾಗಿತ್ತು. ಸಾಹಿತ್ಯ ಹುಟ್ಟಿಕೊಳ್ಳುವುದು ಆಸಕ್ತಿ, ಅಭಿರುಚಿಯಿಂದ ಮಾತ್ರ. ವಿದ್ಯಾರ್ಥಿಗಳು ಪಠ್ಯ ಜೊತೆಗೆ ಸಾಹಿತ್ಯ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕುʼ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಪಿಯು ಕಾಲೇಜು ಪ್ರಾಚಾರ್ಯ ಓಂಪ್ರಕಾಶ್ ದಡ್ಡೆ ಅವರು ಮಾತನಾಡಿ, ʼ ಉತ್ತಮ ಓದುಗ ಮಾತ್ರ ಉತ್ತಮ ಬರಗಾರನಾಗಲು ಸಾಧ್ಯ. ನಮ್ಮ ಉಜ್ವಲ ಭವಿಷ್ಯ ನಿರ್ಮಾಣಕ್ಕೆ ಎಲ್ಲರೊಂದಿಗೆ ಮಿತ್ರತ್ವ ಹೊಂದಿರಬೇಕು. ಕನ್ನಡ ನಾಡು-ನುಡಿ, ಸಂಸ್ಕೃತಿ ಉಳಿಸಿ ಬೆಳೆಸುವ ದಿಸೆಯಲ್ಲಿ ತೊಡಗಿಸಿಕೊಳ್ಳಬೇಕುʼ ಎಂದು ಕರೆ ನೀಡಿದರು.

ನಿವೃತ್ತ ಪ್ರಾಚಾರ್ಯೆ ಡಾ.ಜಯದೇವಿ ತೇಲಿ ಅವರು ವಿಶೇಷ ಉಪನ್ಯಾಸ ನೀಡಿ, ʼವಿರೇಂದ್ರ ಸಿಂಪಿ ಅವರು ಮುಖ್ಯವಾಗಿ ಕಥೆ, ಕವನ, ಕಾದಂಬರಿ, ಪ್ರವಾಸ ಕಥನ, ಮುಂತಾದ ಪ್ರಕಾರಗಳನ್ನು ಬರೆದಿದ್ದಾರೆ. ಬೀದರ ಜಿಲ್ಲೆಯ ಉತ್ತಮ ಸಾಹಿತಿಗಳ ಸಾಲಿನಲ್ಲಿ ವಿರೇಂದ್ರ ಸಿಂಪಿ ಒಬ್ಬರಾಗಿದ್ದರು. ಇಂಗ್ಲಿಷ್ ಪ್ರಾಧ್ಯಾಪಕರಾದರೂ ಅದರ ವ್ಯಾಮೋಹ ತೊರೆದು ಕನ್ನಡ ಅಭಿಮಾನ ತೋರಿದರುʼ ಎಂದು ನುಡಿದರು.

ಅಧ್ಯಕ್ಷತೆ ವಹಿಸಿದ್ದ ಡಾ.ಮಕ್ತುಂಬಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ʼಮನುಷ್ಯತ್ವವೇ ಮಹಾ ನವಮಿ ಎಂಬ ಶೀರ್ಷಿಕೆಯಡಿ ಶಬನಮ್ ಸಂಸ್ಥೆಯು ಅನೇಕ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಂದಿನ ವಿದ್ಯಾರ್ಥಿಗಳು ಮೊಬೈಲ್‌ ಬಿಟ್ಟು ಹೆಚ್ಚು ಸಾಹಿತ್ಯದ ಕಡೆ ಒಲವು ತೋರಬೇಕುʼ ಎಂದು ತಿಳಿಸಿದರು.

ಇದನ್ನೂ ಓದಿ : ಶಾಸಕ ಪ್ರಭು ಚವ್ಹಾಣ ವಾಟ್ಸ್‌ಆ್ಯಪ್‌ಗೆ ಅಶ್ಲೀಲ ಫೋಟೊ, ವಿಡಿಯೊ ಕಳುಹಿಸಿ ಹಣದ ಬೇಡಿಕೆ : ದೂರು ದಾಖಲು

ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಗೌರಮ್ಮ ನಿರೂಪಿಸಿದರು. ಶಬನಮ್ ಸ್ವಾಗತಿಸಿದರು ಹಾಗೂ ಪ್ರದೀಪ ವಂದನಾರ್ಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...