ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

Date:

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು, ಆಸ್ಪತ್ರೆಯ ಕೆಲ ಪುರುಷ ಸಿಬ್ಬಂದಿಗಳ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಅತ್ಯಂತ ದುಃಖಕರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ಬ್ರಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಿಲೋಫರ್‌ ಅವರನ್ನು ಸೋಮವಾರ ಸಚಿವ ಈಶ್ವರ ಖಂಡ್ರೆ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ಈ ಘಟನೆಯನ್ನು ಸಂಪೂರ್ಣ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಅವರಿಗೆ ಸಚಿವರು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳಾ ಸಿಬ್ಬಂದಿಗಳ ಸುರಕ್ಷತೆ ಹಾಗೂ ಗೌರವದ ವಿಚಾರದಲ್ಲಿ ಯಾವುದೇ ನಿರ್ಲಕ್ಷ ಸಹಿಸಲಾಗದು. ಬ್ರಿಮ್ಸ್‌ನ ಎಲ್ಲಾ ಸಿಬ್ಬಂದಿಗಳಿಗೆ ಸಕಾಲಕ್ಕೆ ಸಂಬಳ ಪಾವತಿಸುವಂತೆ ನಿರ್ದೇಶಕಿ ಶಾಂತಲಾ ಕೌಜಲಗಿ ಅವರಿಗೆ ಖಡಕ್ ಸೂಚನೆ ನೀಡಿದರು.‌

ಇದನ್ನೂ ಓದಿ : ಕರ್ನಾಟಕದಲ್ಲೊಂದು ‘ಮಿನಿ ಇರಾನ್‌’- ಖೊಮೈನಿ ಜೊತೆ ಅಲಿಪುರಕ್ಕಿರುವ ನಂಟೇನು?

ಈ ಸಂದರ್ಭದಲ್ಲಿ ಬ್ರಿಮ್ಸ್ ನಿರ್ದೇಶಕಿ ಡಾ.ಶಾಂತಲಾ ಕೌಜಲಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ, ಬ್ರಿಮ್ಸ್‌ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...

ಜಿ ರಾಮ್‌ ಜಿ ಅಲ್ಲಿ ʼರಾಮʼನ ಹೆಸರಿದ್ದರೆ ಆರ್‌ಎಸ್‌ಎಸ್‌ ಕಚೇರಿ ಕಸ ಗುಡಿಸುತ್ತೇನೆ: ವಿ.ಎಸ್‌ ಉಗ್ರಪ್ಪ

“ಗಾಂಧಿ ಮತ್ತು ನೆಹರೂ ವಿಚಾರಗಳ ಮೇಲೆ ನೇರವಾಗಿ ದಾಳಿ ನಡೆಯುತ್ತಿದೆ. ಮನರೇಗಾದಲ್ಲಿದ್ದ...