ಬಿಜೆಪಿಯವರು ಇನ್ನಾದರೂ ಭಾವನಾತ್ಮಕ ಆಟ ನಿಲ್ಲಿಸಬೇಕು: ಮಧು ಬಂಗಾರಪ್ಪ

Date:

  • ‘ಕೃಷ್ಣ.. ರಾಮ.. ಆಯ್ತು, ಈಗ ಬಿಜೆಪಿಗೆ `ಭಾರತ್’ ನಾಮಕರಣ ವಿಷಯ ಸಿಕ್ಕಿದೆ’
  • ನಿಜವಾದ ಭಾರತೀಯರನ್ನೇ ಪ್ರಧಾನಿ ನರೇಂದ್ರ ಮೋದಿ ಮರೆತಿದ್ದಾರೆ: ಕಿಡಿ

ಕೃಷ್ಣ.. ರಾಮ.. ಆಯ್ತು, ಈಗ ಬಿಜೆಪಿಗೆ `ಭಾರತ್’ ನಾಮಕರಣ ವಿಷಯ ಸಿಕ್ಕಿದೆ. ‌ಭಾರತದ ಜನರೇ ಮುಂಬರುವ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಕೇಂದ್ರ ಸರ್ಕಾರ ಇಂಡಿಯಾ ಬದಲು ಭಾರತ್ ಎಂದು ಮರು ನಾಮಕರಣ ಮಾಡಲಾಗುತ್ತಿದೆ ಎಂಬ ವಿಚಾರಕ್ಕೆ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿ, “ಮೋದಿ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲೇ ಇದ್ದಾರೆ.‌ ನಿಜವಾದ ಭಾರತೀಯರನ್ನು ಮರೆತಿದ್ದಾರೆ” ಎಂದು ಕಿಡಿಕಾರಿದರು.

“ಬಿಜೆಪಿಯವರು ಇನ್ನಾದರೂ ಭಾವನಾತ್ಮಕ ಆಟವನ್ನು ನಿಲ್ಲಿಸಬೇಕು. ಇಷ್ಟು ದಿನ ಸುಖವಾಗಿಯೆ ಇದ್ದೇವೆ. ಏನು ತೊಂದರೆ ಅಗಿಲ್ಲ. ಅಧಿಕಾರ ಇದೆ ಎಂದ ಮಾತ್ರಕ್ಕೆ ಹೆಸರು ಬದಲಾವಣೆ ಮಾಡುವುದನ್ನು ಜನರು ಒಪ್ಪಲ್ಲ. ಇದನ್ನು ಮೀರಿ ಮುಂದುವರಿದರೆ ದೇಶದ ಜನರು ಉತ್ತರ ಕೊಡುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಚಂದ್ರಯಾನದ ಮೇಲೆ ಇಂಡಿಯಾ ಅಂತಾನೇ ಹೋಗಿದ್ದು. ಇಂಡಿಯಾ ಎಂದು ಕ್ರಿಕೆಟ್, ಒಲಿಂಪಿಕ್ಸ್ ನಲ್ಲಿ ಹಾಕಿ ಓಡಾಡಿದ್ದಾರೆ. ಈಗ ಭಾರತ್‌ ಎಂಬುದು ಏಕೆ ಇವರ ತಲೆಯಲ್ಲಿ ಬಂದಿದೆ. ಇದು ಜನರಿಗೆ ಅರ್ಥವಾಗದ ಸಂಗತಿಯಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ ಹತ್ತಿರ ಬರುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿಎಂ

“ಬೇಸಿಗೆಯಲ್ಲಿ ಕುಡಿಯುವ ನೀರಿನ ಬಳಕೆ ಹಾಗೂ ತೋಟಗಳ ರಕ್ಷಣೆಗೆ ಆದ್ಯತೆ ನೀಡುವ ದೃಷ್ಟಿಯಿಂದ, ಭದ್ರಾ ಜಲಾಶಯದಿಂದ ಎಡದಂಡೆ ಕಾಲುವೆಗೆ ಹರಿಸುತ್ತಿರುವ ನೀರನ್ನು ಸೆಪ್ಟೆಂಬರ್ 6ರಿಂದಲೇ ನಿಲ್ಲಿಸಬೇಕು ಎಂದು ಐಸಿಸಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆದಷ್ಟು ಕೂಡಲೇ ಬಿಕ್ಕಟ್ಟು ಶಮನವಾಗಿದೆ” ಎಂದರು.

ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ನೂತನ ಪದ್ಧತಿ ಕುರಿತು ಪ್ರತಿಕ್ರಿಯಿಸಿದ ಸಚಿವರು, “ವಿದ್ಯಾರ್ಥಿಗಳು ಒಂದು ವಿಷಯದಲ್ಲಿ ಫೇಲ್ ಆದ್ರೆ ಅವರಿಗೆ ಅನ್ಯಾಯ ಆಗುತ್ತದೆ. ಎಲ್ಲ ವಿಷಯದಲ್ಲಿ ಉತ್ತಮ ಅಂಕ ಪಡೆದು ಒಂದು ವಿಷಯದಲ್ಲಿ ಕಾರಣಾಂತರಗಳಿಂದ ಕಡಿಮೆ ಅಂಕ ಪಡೆದರೆ ಅನ್ಯಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿದೆ” ಎಂದು ಹೊಸ ಪರೀಕ್ಷೆ ಪದ್ಧತಿಯನ್ನು ಸಮರ್ಥಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...