ಇಂದ್ರಾಣಿ ಮುಖರ್ಜಿ ವೆಬ್ ಸರಣಿ: ಸಿಬಿಐಗೆ ಪ್ರದರ್ಶನ ಏರ್ಪಡಿಸಿ; ನೆಟ್‌ಫ್ಲಿಕ್ಸ್‌ಗೆ ಬಾಂಬೆ ಹೈಕೋರ್ಟ್‌ ಸೂಚನೆ

Date:

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ ವೆಬ್‌ ಸರಣಿ ‘ದಿ ಇಂದ್ರಾಣಿ ಮುಖರ್ಜಿ ಸ್ಟೋರಿ: ಬರೀಡ್ ಟ್ರುತ್(The Indrani Mukerjea Story: The Buried Truth)ನ ಬಿಡುಗಡೆಗೂ ಮುನ್ನ ಸಿಬಿಐಗೆ ಪ್ರದರ್ಶನ ಏರ್ಪಡಿಸುವಂತೆ ನೆಟ್‌ಫ್ಲಿಕ್ಸ್‌ಗೆ ಬಾಂಬೆ ಹೈಕೋರ್ಟ್ ಆದೇಶಿಸಿದೆ.

ಶೀನಾ ಬೋರಾ ಪ್ರಕರಣದ ವಿಚಾರಣೆ ಇನ್ನೂ ಮುಕ್ತಾಯಗೊಳ್ಳದ ಹಿನ್ನೆಲೆಯಲ್ಲಿ ವೆಬ್ ಸರಣಿ ಬಿಡುಗಡೆಗೆ ತಡೆ ನೀಡುವಂತೆ ಸಿಬಿಐ ಮನವಿ ಸಲ್ಲಿಸಿತ್ತು.

ವೆಬ್‌ಸೀರೀಸ್‌ಗೆ ತಡೆಯಾಜ್ಞೆ ಕೋರಿರುವ ಸಿಬಿಐ ತನ್ನ ವಾದ ಮಂಡಿಸುವುದಕ್ಕೂ ಮೊದಲು ಸರಣಿಯನ್ನು ವೀಕ್ಷಿಸುವುದು ಸೂಕ್ತ ಎಂದು ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠ ಸಲಹೆ ನೀಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಹಾಗೆ ಮಾಡುವುದು ಪ್ರದರ್ಶನ ಪೂರ್ವ ಸೆನ್ಸಾರ್‌ಗೆ ಕಾರಣವಾಗಬಹುದು’ ಎಂದು ನೆಟ್‌ಫ್ಲಿಕ್ಸ್‌ ಆರಂಭದಲ್ಲಿ ಕಳವಳ ವ್ಯಕ್ತಪಡಿಸಿತಾದರೂ ಅಂತಿಮವಾಗಿ ಪೀಠದ ಸಲಹೆಗೆ ಒಪ್ಪಿತು. ಅದರಂತೆ ಅರ್ಜಿಯ ವಿಚಾರಣೆ ನಡೆಯಲಿರುವ ಫೆಬ್ರವರಿ 29ರವರೆಗೆ ಸರಣಿ ಪ್ರಸಾರ ಮಾಡುವುದಿಲ್ಲ ಎಂದು ನೆಟ್‌ಫ್ಲಿಕ್ಸ್‌ ನ್ಯಾಯಾಲಯಕ್ಕೆ ಭರವಸೆ ನೀಡಿತು.

ವೆಬ್‌ ಸರಣಿಗೆ ತಡೆ ನೀಡುವಂತೆ ಕೋರಿದ್ದ ತನ್ನ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಫೆಬ್ರವರಿ 21ರಂದು ಸಿಬಿಐ ಹೈಕೋರ್ಟ್‌ ಮೆಟ್ಟಿಲೇರಿತ್ತು. ಸರಣಿಯಲ್ಲಿ ಆರೋಪಿಗಳು ಮತ್ತು ಕೆಲ ಸಾಕ್ಷಿಗಳನ್ನು ಸಂದರ್ಶಿಸಲಾಗಿದ್ದು, ತಾನು ಟ್ರೇಲರ್‌ ಮಾತ್ರ ನೋಡಿರುವುದರಿಂದ ಹಾಗೆ ಸಂದರ್ಶನ ನೀಡಿದವರ ನಿಖರ ಸಂಖ್ಯೆ ಒದಗಿಸುವಂತೆ ಸಿಬಿಐ ಪರ ಹಾಜರಿದ್ದ ವಕೀಲರ ಶ್ರೀರಾಮ್‌ ಶಿರ್ಸಾಟ್‌ ಕೋರಿದರು.

ನೆಟ್‌ಫ್ಲಿಕ್ಸ್‌ ಪರವಾಗಿ ಹಾಜರಾದ ಹಿರಿಯ ವಕೀಲ ರವಿ ಕದಮ್, ಸರಣಿಯಲ್ಲಿ ಇಂದ್ರಾಣಿ ಅವರ ಮಗ ಮೈಖೆಲ್‌ ಮತ್ತು ಅವರ ಮಗಳು ವಿಧಿ ಮುಖರ್ಜಿ ಸೇರಿದಂತೆ ಐದು ಸಾಕ್ಷಿಗಳನ್ನು ಸಂದರ್ಶಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸರಣಿಗಾಗಿ ಸಂದರ್ಶಿಸಲಾದ ಐದು ಜನರಲ್ಲಿ, ಇಬ್ಬರು ಸಾಕ್ಷಿಗಳ ವಿಚಾರಣೆ ಮುಗಿದಿದೆ ಮತ್ತು ಮೂವರ ವಿಚಾರಣೆಯನ್ನು ಇನ್ನಷ್ಟೇ ನಡೆಸಬೇಕಿದೆ ಎಂದು ಅವರು ಹೇಳಿದರು. ಈ ಹಂತದಲ್ಲಿ ನ್ಯಾಯಾಲಯ ಪ್ರಕರಣವನ್ನು ಇನ್ನಷ್ಟು ಆಲಿಸುವ ಮೊದಲು ನೆಟ್‌ಫ್ಲಿಕ್ಸ್‌ ಸರಣಿಯನ್ನು ಸಿಬಿಐಗೆ ತೋರಿಸಬಹುದು ಎಂದು ಸೂಚಿಸಿತು. ಸರಣಿ ಇಂದಿನಿಂದ (ಫೆಬ್ರವರಿ 23) ಪ್ರದರ್ಶನಗೊಳ್ಳಬೇಕಿತ್ತು. ಇದರ ವಿರುದ್ಧ ಬಿಡುಗಡೆಗೆ ತಡೆ ನೀಡುವಂತೆ ಸಿಬಿಐ ಮನವಿ ಸಲ್ಲಿಸಿದೆ.

ಇದನ್ನು ಓದಿದ್ದೀರಾ? ಮಂಡ್ಯ | ನನಗೆ ಬೇರೆಡೆ ಟಿಕೆಟ್​ ಪಡೆಯುವುದು ಕಷ್ಟವಲ್ಲ: ಸುಮಲತಾ ಅಂಬರೀಶ್

ತನ್ನ ಮಗಳು ಶೀನಾ ಬೋರಾಳನ್ನು ಮಾಜಿ ಪತಿ ಸಂಜೀವ್ ಖನ್ನಾ, ಪ್ರಸ್ತುತ ಪತಿ ಪೀಟರ್ ಮುಖರ್ಜಿಯಾ ಮತ್ತು ಚಾಲಕ ಶ್ಯಾಮ್ವರ್ ರಾಯ್ ಅವರ ಸಹಾಯದಿಂದ ಇಂದ್ರಾಣಿ ಕೊಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದ್ರಾಣಿ ಅವರನ್ನು ಬಂಧಿಸಿತ್ತು. ಮೇ 2022ರಲ್ಲಿ, ಸುಪ್ರೀಂ ಕೋರ್ಟ್‌ ಆಕೆಗೆ ಜಾಮೀನು ನೀಡಿತ್ತು. ಈ ಕೊಲೆ ಪ್ರಕರಣವು ದೇಶಾದ್ಯಂತ ಭಾರೀ ಚರ್ಚೆಗೂ ಕಾರಣವಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...