‘ಇಂದ್ರಾಣಿ ಮುಖರ್ಜಿ’ ವೆಬ್‌ ಸೀರೀಸ್ ವೀಕ್ಷಿಸಿದ ಬಾಂಬೆ ಹೈಕೋರ್ಟ್: ಸಿಬಿಐ ಅರ್ಜಿ ತಿರಸ್ಕೃತ

Date:

ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಕುರಿತ ವೆಬ್‌ ಸರಣಿ ‘ದಿ ಇಂದ್ರಾಣಿ ಮುಖರ್ಜಿ ಸ್ಟೋರಿ: ಬರೀಡ್ ಟ್ರೂತ್’ನ ಬಿಡುಗಡೆಗೆ ತಡೆ ನೀಡುವಂತೆ ಕೋರಿದ್ದ ಸಿಬಿಐ ಅರ್ಜಿಯನ್ನು ಬಾಂಬೆ ಹೈಕೋರ್ಟ್ ಗುರುವಾರ ತಿರಸ್ಕರಿಸಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ವೆಬ್‌ ಸರಣಿ ವೀಕ್ಷಿಸಿದ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠ ಶೀನಾ ಬೋರಾ ಕೊಲೆ ಪ್ರಕರಣದಲ್ಲಿ ನಡೆಯುತ್ತಿರುವ ವಿಚಾರಣೆಗೆ ಪ್ರತಿಕೂಲವಾಗುವಂತಹ ಯಾವುದೇ ಅಂಶಗಳು ಕಂಡುಬಂದಿಲ್ಲ ಎಂದು ನಿರ್ಣಯಿಸಿತು.

“ನ್ಯಾಯಾಲಯದ ವಿಚಾರಣೆಗೆ ಪ್ರತಿಕೂಲವಾಗುವಂಥದ್ದು ಏನೋ ಇದೆ ಎಂದು ನಮಗೆ ಅನ್ನಿಸುತ್ತಿಲ್ಲ. ನಾವು ಆರಂಭದಲ್ಲಿ ಪ್ರತಿಕೂಲವಾದ ಏನಾದರೂ ಇರಬಹುದು ಎಂದು ಭಾವಿಸಿದ್ದೆವು. ಆದ್ದರಿಂದ ಸರಣಿ ವೀಕ್ಷಿಸಿದೆವು. ಸಾರ್ವಜನಿಕ ಗ್ರಹಿಕೆ ಬಗ್ಗೆ ಏನೂ ನಾವು ಕಳವಳಗೊಳ್ಳುತ್ತಿಲ್ಲ. ಇಂದ್ರಾಣಿಯವರು ಕೂಡ ವೆಬ್‌ ಸೀರೀಸ್‌ನಲ್ಲಿ ಏನು ಹೇಳಿದ್ದಾರೋ ಅದೆಲ್ಲವೂ ಸಾರ್ವಜನಿಕವಾಗಿ ಲಭ್ಯ ಇರುವಂಥದ್ದೇ” ಎಂಬ ಅಂಶವನ್ನು ಸಿಬಿಐ ಅರ್ಜಿ ತಿರಸ್ಕೃರಿಸುವ ವೇಳೆ ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾಮಾಣಿಕವಾಗಿ ಹೇಳುವುದಾದರೆ, ಪ್ರಾಸಿಕ್ಯೂಷನ್ ಗೆ ಪ್ರತಿಕೂಲವಾದ ಯಾವುದೂ ನಮಗೆ ಕಂಡುಬಂದಿಲ್ಲ. ಸಿಬಿಐಗೆ ನಿಜವಾದ ಆತಂಕವಿದೆ ಎಂದು ನಾವು ಭಾವಿಸಿ ಸರಣಿ ವೀಕ್ಷಿಸಲು ಅನುವು ಮಾಡಿಕೊಟ್ಟೆವು. ಆ ದಿನ ಬೇರೆ ಪಕ್ಷಕಾರರು ವಾದಿಸಲು ಕೂಡ ನಾವು ಅವಕಾಶ ನೀಡಲಿಲ್ಲ. ಆರೋಪಿಗಳು ತಪ್ಪಿತಸ್ಥರು ಎಂದು ನೀವು ಊಹಿಸಲಾಗದು” ಎಂದು ನ್ಯಾಯಪೀಠ ಇದೇ ವೇಳೆ ಹೇಳಿತು.

ವೆಬ್‌ ಸರಣಿಗೆ ತಡೆ ನೀಡುವಂತೆ ಕೋರಿದ್ದ ತನ್ನ ಅರ್ಜಿಯನ್ನು ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದ ಹಿನ್ನೆಲೆಯಲ್ಲಿ ಸಿಬಿಐ, ಹೈಕೋರ್ಟ್‌ ಮೆಟ್ಟಿಲೇರಿತ್ತು. ಸರಣಿಯಲ್ಲಿ ಆರೋಪಿಗಳು ಮತ್ತು ಕೆಲ ಸಾಕ್ಷಿಗಳನ್ನು ಸಂದರ್ಶಿಸಲಾಗಿದ್ದು, ತಾನು ಟ್ರೇಲರ್‌ ಮಾತ್ರ ನೋಡಿರುವುದರಿಂದ ಹಾಗೆ ಸಂದರ್ಶನ ನೀಡಿದವರ ನಿಖರ ಸಂಖ್ಯೆ ಒದಗಿಸುವಂತೆ ಸಿಬಿಐ ಪರ ಹಾಜರಿದ್ದ ವಕೀಲರು ವಾದಿಸಿದ್ದರು.

ಸರಣಿ ವೀಕ್ಷಿಸಿ ನಿರ್ಧಾರ ಕೈಗೊಳ್ಳಬಹುದಾದ್ದರಿಂದ ವಕೀಲರು ಮತ್ತು ಪ್ರಕರಣದ ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿಗಳಿಗೆ ಪ್ರದರ್ಶನ ಏರ್ಪಡಿಸುವಂತೆ ಫೆಬ್ರವರಿ 22ರಂದು ನೆಟ್‌ಫ್ಲಿಕ್ಸ್‌ಗೆ ಸೂಚಿಸಿತ್ತು. ಹೀಗಾಗಿ ತನ್ನ ವೇದಿಕೆಯಲ್ಲಿ ಸರಣಿ ಬಿಡುಗಡೆಯನ್ನು ನೆಟ್‌ಫ್ಲಿಕ್ಸ್‌ ಮುಂದೂಡಿತ್ತು.

ಸರಣಿಯನ್ನು ಇದೀಗ ವೀಕ್ಷಿಸಿರುವ ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ಡೇರೆ ಮತ್ತು ಮಂಜೂಷಾ ದೇಶಪಾಂಡೆ ಅವರಿರುವ ಪೀಠ, ವಿಚಾರಣೆಗೆ ಯಾವುದೇ ಪ್ರತಿಕೂಲ ಅಂಶಗಳು ಕಂಡುಬಂದಿಲ್ಲ ಎಂದು ತಿಳಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿತು.

ಇದನ್ನು ಓದಿದ್ದೀರಾ? ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಿಂದ ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ನೆಟ್‌ಫ್ಲಿಕ್ಸ್‌ ಪರವಾಗಿ ಹಿರಿಯ ವಕೀಲ ರವಿ ಕದಮ್ ವಾದ ಮಂಡಿಸಿದ್ದರು. ಸರಣಿಯ ನಿರ್ಮಾಪಕರನ್ನು ವಕೀಲ ಅಭಿನವ್ ಚಂದ್ರಚೂಡ್ ಪ್ರತಿನಿಧಿಸಿದ್ದರು. ಸಿಬಿಐ ಅರ್ಜಿ ತಿರಸ್ಕೃತವಾಗುತ್ತಿದ್ದಂತೆ ನೆಟ್‌ಫ್ಲಿಕ್ಸ್ ವೆಬ್‌ ಸೀರೀಸ್‌ ಅನ್ನು ಬಿಡುಗಡೆಗೊಳಿಸಿದೆ.

ಏನಿದು ಪ್ರಕರಣ?

ತನ್ನ ಮಗಳು ಶೀನಾ ಬೋರಾಳನ್ನು ಮಾಜಿ ಪತಿ ಸಂಜೀವ್ ಖನ್ನಾ, ಪ್ರಸ್ತುತ ಪತಿ ಪೀಟರ್ ಮುಖರ್ಜಿಯಾ ಮತ್ತು ಚಾಲಕ ಶ್ಯಾಮ್ವರ್ ರಾಯ್ ಅವರ ಸಹಾಯದಿಂದ ಇಂದ್ರಾಣಿ ಕೊಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದ್ರಾಣಿ ಅವರನ್ನು ಬಂಧಿಸಿತ್ತು. ಮೇ 2022ರಲ್ಲಿ, ಸುಪ್ರೀಂ ಕೋರ್ಟ್‌ ಆಕೆಗೆ ಜಾಮೀನು ನೀಡಿತ್ತು. ಈ ಕೊಲೆ ಪ್ರಕರಣವು ದೇಶಾದ್ಯಂತ ಭಾರೀ ಚರ್ಚೆಗೂ ಕಾರಣವಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...