ಮೂಢನಂಬಿಕೆ | ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿ ಸಾವಿಗೆ ಕಾರಣರಾದ ಹೆತ್ತವರು!

Date:

ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಐದು ವರ್ಷದ ಬಾಲಕನಿಗೆ ಗಂಗಾ ಸ್ನಾನ ಮಾಡಿಸಿದರೆ ಅತ ಗುಣಮುಖನಾಗುತ್ತಾನೆ ಎಂದು ಮೌಢ್ಯದ ಹಿಂದೆ ಬಿದ್ದ ಪೋಷಕರು, ನೀರಿಗಿಳಿಸಿ ಸಾವಿಗೆ ಕಾರಣರಾದ ಘಟನೆ  ಹೆತ್ತವರು ಉತ್ತರಾಖಂಡದಲ್ಲಿ ನಡೆದಿದೆ.

ದಿಲ್ಲಿ ಮೂಲದ ಕುಟುಂಬವೊಂದು ಏಳರ ಹರೆಯದ ಬಾಲಕನನ್ನು ಥರಗಟ್ಟುವ ಚಳಿಯಲ್ಲಿಯೇ ಗಂಗಾ ನದಿಯಲ್ಲಿ ಸ್ನಾನ ಮಾಡಿಸಿದ್ದರಿಂದ ಹೆತ್ತವರೇ ಆತನ ಸಾವಿಗೆ ಕಾರಣರಾದ ಘಟನೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆದಿದೆ.

ಕುಟುಂಬದ ಸದಸ್ಯರು ಬುಧವಾರ ಬೆಳಗ್ಗೆ 9 ಗಂಟೆಗೆ ಹರಿದ್ವಾರಕ್ಕೆ ಬಂದಿತ್ತು. ಕ್ಯಾಬ್ ಚಾಲಕ ನೀಡಿರುವ ಮಾಹಿತಿಯ ಪ್ರಕಾರ, ಬಾಲಕ ಮತ್ತು ಆತನ ಹೆತ್ತವರೊಂದಿಗೆ ಸಂಬಂಧಿಕಳೆಂದು ತಿಳಿಯಲಾದ ಮಹಿಳೆಯೂ ಕೂಡ ಓರ್ವರಿದ್ದರು. ಬಾಲಕ ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ. ದಿಲ್ಲಿಯ ವೈದ್ಯರು ಆತ ಬದುಕುಳಿಯುವ ಸಾಧ್ಯತೆಯಿಲ್ಲ ಎಂದಿದ್ದರು ಎಂದು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನ ಹೆತ್ತವರು ಏನೋ ಪ್ರಾರ್ಥನೆ ಮಾಡುತ್ತಾ ಬಾಲಕನನ್ನು ನೀರಿನಲ್ಲಿ ಮುಳುಗಿಸುತ್ತಿರುವುದನ್ನು ಹತ್ತಿರದಲ್ಲಿರುವವರು ನೋಡಿದ್ದರು. ಬಾಲಕ ತುಂಬಾ ಹೊತ್ತು ನೀರಿನಲ್ಲಿರುವ ಕುರಿತು ಪಕ್ಕದಲ್ಲಿದ್ದವರು ಹೇಳಿದರೂ ಹೆತ್ತವರು ಕೇಳಿಸಿಕೊಂಡಿರಲಿಲ್ಲ. ನಂತರ ಸ್ಥಳೀಯರು ಬಲವಂತದಿಂದ ಬಾಲಕನನ್ನು ನೀರಿನಿಂದ ಹೊರತೆಗೆದಿದ್ದರು. ಹೆತ್ತವರ ಜೊತೆಗಿದ್ದ ಮಹಿಳೆ ಈ ಸಂದರ್ಭ ರಾದ್ಧಾಂತವೆಬ್ಬಿಸಿದ್ದಲ್ಲದೆ ಬಾಲಕನನ್ನು ನೀರಿನಿಂದ ಹೊರತಂದವರ ಮೇಲೆ ಹಲ್ಲೆಗೂ ಯತ್ನಿಸಿದ್ದಳು. ಬಾಲಕನನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ್ದಾರೆ.

ಮಹಿಳೆಯು ಮಗುವನ್ನು ನೀರಿನಲ್ಲಿ ಮುಳುಗಿಸುತ್ತಿರುವ ದೃಶ್ಯವು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ಬೆಳವಣಿಗೆಯ ಬಳಿಕ ಮಗು ಖಂಡಿತಾ ಜೀವಂತವಾಗಿ ಹೊರಬರುತ್ತಾನೆಂದು ಮೃತನ ಹೆತ್ತವರ ಜೊತೆಗಿದ್ದ ಮಹಿಳೆ ಹೇಳುತ್ತಿರುವುದು ಒಂದು ವೀಡಿಯೋದಲ್ಲಿ ದಾಖಲಾಗಿದೆ.

ಪೋಷಕರ ಜೊತೆಗಿದ್ದ ಮಹಿಳೆಯನ್ನು ಸುಧಾ ಎಂದು ಗುರುತಿಸಲಾಗಿದ್ದು, ಮೃತಪಟ್ಟ ಬಾಲಕ ರವಿಯ ಚಿಕ್ಕಮ್ಮ ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ? ಮಧ್ಯ ಪ್ರದೇಶ | ಅಂಬೇಡ್ಕರ್ – ಪಟೇಲ್ ಪ್ರತಿಮೆ ವಿವಾದ: ದಲಿತರು-ಪಾಟೀದಾರ್ ಸಮುದಾಯಗಳ ನಡುವೆ ಘರ್ಷಣೆ

“ಘಟನೆಯ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಗಂಗಾ ನದಿಯು ಬಾಲಕನನ್ನು ಗುಣಪಡಿಸುತ್ತದೆ ಎಂದು ಆತನ ಹೆತ್ತವರು ನಂಬಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪೋಷಕರ ಸಹಿತ ಚಿಕ್ಕಮ್ಮನನ್ನೂ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದೇವೆ. ಬಾಲಕನಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನೂ ಕೂಡ ಸಂಪರ್ಕ ನಡೆಸಲಾಗಿದ್ದು, ಮಾಹಿತಿ ಕಲೆ ಹಾಕುತ್ತಿದ್ದೇವೆ” ಎಂದು ಹರಿದ್ವಾರ ನಗರ ಪೊಲೀಸ್ ಮುಖ್ಯಸ್ಥ ಸ್ವತಂತ್ರ ಕುಮಾರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...