ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

Date:

ತಮಿಳುನಾಡು ಬಿಎಸ್‌ಪಿ ರಾಜ್ಯಾಧ್ಯಕ್ಷ ಕೆ ಆರ್ಮ್‌ಸ್ಟ್ರಾಂಗ್ ಹತ್ಯೆಗೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಬಂಧಿತರನ್ನು ಎನ್ ವಿಜಯಕುಮಾರ್ (21), ವಿ ಮುಕಿಲನ್ (32) ಮತ್ತು ಎನ್ ವಿಘ್ನೇಶ್ (27) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾನುವಾರ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 5 ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಮೂವರ ಬಂಧನದ ಬಳಿಕ ಬಿಎಸ್‌ಪಿ ಮುಖ್ಯಸ್ಥರ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆಯು 20ಕ್ಕೆ ಏರಿಕೆಯಾಗಿದೆ. ಈಗಾಗಲೇ ಜುಲೈ 14ರಂದು ಪ್ರಕರಣದ ಆರೋಪಿ ಕೆ ತಿರುವೆಂಗಡಂ ಅನ್ನು ಪೊಲೀಸರು ಗುಂಡಿಕ್ಕಿ ಕೊಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರುವೆಂಗಡಂ ಬಂಧನದ ಬಳಿಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲು ತನಿಖೆಯ ಭಾಗವಾಗಿ ನಗರದ ಒಂದು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಆತ ಪೊಲೀಸ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ?  ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ ಆರೋಪಿ ಎನ್‌ಕೌಂಟರ್‌ಗೆ ಬಲಿ

ಆತ್ಮರಕ್ಷಣೆಗಾಗಿ ಪೊಲೀಸರು ಆತನ ಮೇಲೆ ಗುಂಡು ಹಾರಿಸಿದ್ದು ಆತ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಜುಲೈ 5ರಂದು, ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್ ಅವರನ್ನು ತಂಡವೊಂದು ಕೊಚ್ಚಿ ಕೊಲೆ ಮಾಡಿದ್ದು ಈ ಹತ್ಯೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಎಐಎಡಿಎಂಕೆ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿವೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ, ಬಿಎಸ್‌ಪಿ ನಾಯಕಿ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...