ಭಾರತದಿಂದ 41 ರಾಜತಾಂತ್ರಿಕರನ್ನು ಹಿಂದಕ್ಕೆ ಕರೆಸಿಕೊಂಡ ಕೆನಡಾ

Date:

ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆಯ ವಿವಾದದ ನಂತರ ಕೆನಡಾ ಭಾರತದಿಂದ 41 ರಾಜತಾಂತ್ರಿಕರನ್ನು ಹಿಂಪಡೆದಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಹೇಳಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಲಾನಿ ಜೋಲಿ, ಕೆನಡಾವು ಪ್ರತೀಕಾರದ ಕ್ರಮಗಳನ್ನು ತೆಗೆದುಕೊಳ್ಳುವುದಿಲ್ಲ. ರಾಜತಾಂತ್ರಿಕರು ಹೊರಹೋಗದಿದ್ದಲ್ಲಿ ಶುಕ್ರವಾರದೊಳಗೆ ಅವರ ಅಧಿಕೃತ ಸ್ಥಾನಮಾನವನ್ನು ಏಕಪಕ್ಷೀಯವಾಗಿ ಹಿಂತೆಗೆದುಕೊಳ್ಳುವುದಾಗಿ ಭಾರತ ಬೆದರಿಕೆ ಹಾಕಿದೆ. ಈ ಕ್ರಮವು “ಅಸಮಂಜಸ ಮತ್ತು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಒಪ್ಪಂದವನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ” ಎಂದು ಹೇಳಿದ್ದಾರೆ.

ಭಾರತ ಕೈಗೊಂಡ ಪರಿಣಾಮಗಳ ಹಿನ್ನೆಲೆಯಲ್ಲಿ ನಮ್ಮ ರಾಜತಾಂತ್ರಿಕರ ಸುರಕ್ಷತೆಯ ದೃಷ್ಟಿಯಿಂದ ಭಾರತದಿಂದ ಸುರಕ್ಷಿತವಾಗಿ ನಿರ್ಗಮಿಸಲು ಅನುಕೂಲ ಮಾಡಿಕೊಟ್ಟಿದ್ದೇವೆ” ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತ ಗೆಲ್ಲಲು ಬೇಕಿದ್ದು 26, ಕೊಹ್ಲಿ ಶತಕಕ್ಕೂ ಬೇಕಿತ್ತು 26: ಸತ್ಯ ಬಿಚ್ಚಿಟ್ಟ ಕೆ ಎಲ್ ರಾಹುಲ್

“ನಾವು ರಾಜತಾಂತ್ರಿಕ ವಿನಾಯಿತಿಯ ಸಂಪ್ರದಾಯವನ್ನು ಮುರಿಯಲು ಅನುಮತಿಸಿದರೆ, ಭೂಗ್ರಹದಲ್ಲಿ ಎಲ್ಲಿಯೂ ಯಾವುದೇ ರಾಜತಾಂತ್ರಿಕರು ಸುರಕ್ಷಿತವಾಗಿರುವುದಿಲ್ಲ. ಆದ್ದರಿಂದ ಈ ಕಾರಣಕ್ಕಾಗಿ, ನಾವು ಪ್ರತೀಕಾರ ಕ್ರಮ ತೆಗೆದುಕೊಳ್ಳುವುದಿಲ್ಲ” ಎಂದು ಅವರು ಹೇಳಿದರು.

ಭಾರತದಲ್ಲಿ ಒಟ್ಟು 41 ರಾಜತಾಂತ್ರಿಕರೊಂದಿಗೆ 42 ಸಿಬ್ಬಂದಿ ಕೂಡ ಸೇವೆ ಸಲ್ಲಿಸುತ್ತಿದ್ದರು.

ಕೆನಡಾವು ಅಕ್ಟೋಬರ್ 10 ರೊಳಗೆ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಬೇಕು. ಇಲ್ಲದಿದ್ದರೆ ಭಾರತವು ರಾಜತಾಂತ್ರಿಕ ವಿನಾಯಿತಿಯನ್ನು ರದ್ದುಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಲಾಗಿತ್ತು ಹಾಗಾಗಿ ಕೆನಡಾ ಒಟ್ಟು 41 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಂಡಿದೆ.

ಜೂನ್‌ನಲ್ಲಿ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್‌ನ ಹತ್ಯೆ ನಂತರ ಭಾರತ ಹಾಗೂ ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಸಂಭವಿಸಿದೆ. ನಿಜ್ಜರ್ ಹತ್ಯೆಯಲ್ಲಿ ಭಾರತದ ಗೂಢಚಾರಿಗಳ ಪಾತ್ರವಿದೆ ಎಂದು ಕೆನಡಾ ಆರೋಪಿಸಿದ ನಂತರ ಬಿಕ್ಕಟ್ಟು ಉಲ್ಬಣಗೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...