ಹೃದಯ ಬಡಿತವನ್ನು ನಿಲ್ಲಿಸಲು ಸಾಧ್ಯವಿಲ್ಲ: 26 ವಾರ ಪ್ರಾಯದ ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದ ಸುಪ್ರೀಂ

Date:

ತನ್ನ 26 ವಾರದ ಗರ್ಭವನ್ನು ತೆಗೆದುಹಾಕಲು ಅನುಮತಿ ಕೋರಿ ವಿವಾಹಿತ ಮಹಿಳೆಯೊಬ್ಬರು ಮಾಡಿದ ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

“ಅರ್ಜಿದಾರರು ಗರ್ಭ ಧರಿಸಿ 26 ವಾರಗಳು ಮತ್ತು 5 ದಿನಗಳಾಗಿವೆ. ತಾಯಿ ಮತ್ತು ಗರ್ಭದಲ್ಲಿರುವ ಭ್ರೂಣಕ್ಕೆ ಯಾವುದೇ ಅಪಾಯವಿಲ್ಲದೇ ಇರುವುದರಿಂದ ಈ ಹಂತದಲ್ಲಿ ಗರ್ಭ ತೆಗೆಯಲು ಅನುಮತಿ ನೀಡುವುದು  ಗರ್ಭಾವಸ್ಥೆ ಕಾಯ್ದೆಯ ಕೃತಕ ಗರ್ಭಾಪಾತ  ಸೆಕ್ಷನ್ 3 ಮತ್ತು 5 ರ ಉಲ್ಲಂಘನೆಯಾಗುತ್ತದೆ. ನಾವು ಹೃದಯ ಬಡಿತವನ್ನು ನಿಲ್ಲಿಸಲು ಸಾಧ್ಯವಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹೇಳಿದರು.

ಗರ್ಭಧಾರಣೆಯು 24 ವಾರಗಳಿಗಿಂತ ಹೆಚ್ಚಿದ್ದರೆ, ವೈದ್ಯಕೀಯ ಗರ್ಭಪಾತವನ್ನು ಅನುಮತಿಸಲಾಗುವುದಿಲ್ಲ. ಮಹಿಳೆಯ ಗರ್ಭಾವಸ್ಥೆಯು 26 ವಾರಗಳು ಮತ್ತು ಐದು ದಿನಗಳು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ಇದು ವೈದ್ಯಕೀಯ ಗರ್ಭಪಾತದ(ಎಂಟಿಪಿ) ಅನುಮತಿಸುವ ಮಿತಿಯೊಳಗೆ ಬರುವುದಿಲ್ಲ. ಆದ್ದರಿಂದ ಗರ್ಭಪಾತಕ್ಕೆ ಅನುಮತಿಸಲಾಗುವುದಿಲ್ಲ ಎಂದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಭ್ರೂಣದಲ್ಲಿ ಯಾವುದೇ ವೈಪರೀತ್ಯಗಳಿಲ್ಲ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ.

ಗರ್ಭಿಣಿಯಾದ ನಂತರ ಮಹಿಳೆ ಮಾನಸಿಕ ಸಮಸ್ಯೆಗಳಿಂದ ಬಳಲುತ್ತಿದ್ದಾಳೆ. ಆದರೆ ಇದಕ್ಕಾಗಿ ಸೇವಿಸುತ್ತಿರುವ ಔಷಧಿ ಮಗುವಿನ ಆರೋಗ್ಯದ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಿಲ್ಲ. ಇತರ ಪರ್ಯಾಯ ಔಷಧಗಳನ್ನು ನೀಡುವಂತೆ ಮಹಿಳೆಗೆ ಸಲಹೆ ನೀಡಲಾಗಿದೆ.

ನ್ಯಾಯಮೂರ್ತಿ ಹಿಮಾ ಕೊಹ್ಲಿ ಮತ್ತು ನ್ಯಾಯಮೂರ್ತಿ ಬಿವಿ ನಾಗರತ್ನ ಅವರ ದ್ವಿಸದಸ್ಯ ಪೀಠವು ಈ ಹಿಂದೆ ಈ ಪ್ರಕರಣದಲ್ಲಿ ಭಿನ್ನ ತೀರ್ಪು ನೀಡಿತ್ತು. ನಂತರ,  ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠವು ಈ ವಿಚಾರಣೆಯನ್ನು ಕೈಗೆತ್ತಿಕೊಂಡಿತು.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...