ಜಾತಿ ದೌರ್ಜನ್ಯ | ಬೈಕ್‌ ಡಿಕ್ಕಿಯಾಗಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ; ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ

Date:

ದಲಿತ ಯುವಕನ ಬೈಕ್ ಮತ್ತೊಂದು ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾದ ಕಾರಣಕ್ಕೆ, ದಲಿತ ಯುವಕನ ಮೇಲೆ ಹಲ್ಲೆ ನಡೆಸಿ, ಆತನನ್ನು ಒತ್ತೆಯಾಳಾಗಿ ಇಟ್ಟುಕೊಂಡು ದೌರ್ಜನ್ಯ ಎಸಗಿರುವ ಅಮಾನವೀಯ, ಜಾತಿ ದೌರ್ಜನ್ಯದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಹಂಡಿಯಾ ಗ್ರಾಮದಲ್ಲಿ ಘಟನೆ ನಡೆದಿದೆ. ಸಂತ್ರಸ್ತ ದಲಿತ ಯುವಕ ಸಂಗಮ್ ಲಾಲ್ ಗೌತಮ್‌ನನ್ನು ಪೊಲೀಸರು ರಕ್ಷಿಸಿದ್ದಾರೆ.

ದಲಿತ ಯುವಕ ಚಲಾಯಿಸುತ್ತಿದ್ದ ಬೈಕ್ ಮತ್ತು ಪ್ರಬಲ ಜಾತಿಗೆ ಸೇರಿದ ರಿಷಭ್ ಪಾಂಡೆಯ ಬೈಕ್‌ ನಡುವೆ ಡಿಕ್ಕಿಯಾಗಿದೆ. ಆದರೆ, ತಮ್ಮ ಬೈಕ್‌ಗೆ ದಲಿತ ಯುವಕನ ಬೈಕ್‌ ಡಿಕ್ಕಿಯಾಗಿದ್ದಕ್ಕೆ ಕುಪಿತಗೊಂಡ ಗುಂಪು ಆತನ ಮೇಲೆ ನಡೆಸಿದೆ. ಜಾತಿ ನಿಂದನೆ ಮಾಡಿ, ಒತ್ತೆಯಾಳಾಗಿ ಇರಿಸಿಕೊಂಡು ದೌರ್ಜನ್ಯ ಎಸಗಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಯಾಗ್‌ರಾಜ್ ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಂಗ್ಲೀಕ್, “ತಪ್ಪು ದಿಕ್ಕಿನಲ್ಲಿ ಚಲಿಸುತ್ತಿದ್ದ ರಿಷಭ್ ಪಾಂಡೆ ಎಂಬಾತನ ದ್ವಿಚಕ್ರ ವಾಹನ ಮತ್ತು ದಲಿತ ಯುವಕ ಸಂಗಮ್ ಲಾಲ್ ಬೈಕ್‌ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಸಂತ್ರಸ್ತ ಸಂಗಮ್‌ ಲಾಲ್‌ಗೆ ಗಾಯಗಳಾಗಿವೆ. ಅದರೂ, ಆತನ ಜಾತಿಯ ಬಗ್ಗೆ ತಿಳಿದ ಪಾಂಡೆ ಮತ್ತು ಇತರ 10 ಮಂದಿ ಸಂಗಮ್‌ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ತಿಳಿಸಿದ್ದಾರೆ.

ಈ ವರದಿ ಓದಿದ್ದೀರಾ?: ಮಹಾಡ್ ಸತ್ಯಾಗ್ರಹ | ಚವದಾರ್ ನೀರು ಮುಟ್ಟಿ, ಮನುಸ್ಮೃತಿ ಸುಟ್ಟ ಮೊದಲ ದಲಿತ ಬಂಡಾಯ

“ಜಾತಿ ನಿಂದನೆ ಮಾಡಿ, ಆತನನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಪಾಂಡೆಯ ಗುಂಪು, ತನ್ನ ಬೈಕ್‌ಗೆ ಆಗಿದ್ದ ಹಾನಿಗಾಗಿ 20,000 ರೂ. ಕೊಡುವಂತೆ ಸಂಗಮ್‌ ಬಳಿ ಬೇಡಿಕೆ ಇಟ್ಟಿದ್ದಾರೆ. ಬಳಿಕ, ತನ್ನ ತಂದೆಯನ್ನು ಸಂಪರ್ಕಿಸಿರುವ ಸಂಗಮ್, ಪೊಲೀಸ್‌ ತುರ್ತು ಸೇವೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದು, ಸಂಗಮ್‌ನನ್ನು ರಕ್ಷಿಸಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ” ಎಂದು ವಿವರಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಮತ್ತು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...