ಕಾವೇರಿ ಆರತಿ | ರೈತರಿಂದ ಭಾರಿ ವಿರೋಧ, ಆದರೂ ಅದ್ದೂರಿ ಸಮಾರಂಭ ಮಾಡಿದ ಡಿ ಕೆ ಶಿವಕುಮಾರ್

Date:

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್‌ಎಸ್‌) ಬೃಂದಾವನ ಉದ್ಯಾನದ ಆವರಣದಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕವಾಗಿ ಕಾವೇರಿ ಆರತಿ ಆರಂಭವಾಗಿದೆ. ಶುಕ್ರವಾರದಿಂದ ಆರಂಭಗೊಂಡ ‘ಕಾವೇರಿ ಆರತಿ’ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ರೈತ ಸಂಘ, ವಿವಿಧ ಕನ್ನಡ ಪರ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಶುಕ್ರವಾರ ಸಂಜೆ ಚಾಲನೆ ನೀಡಿದರು. 10 ಸಾವಿರಕ್ಕೂ ಹೆಚ್ಚು ನೆರೆದಿದ್ದ ಭಕ್ತರ ಸಮ್ಮುಖದಲ್ಲಿ ಮೊದಲಿಗೆ ದಕ್ಷಿಣ ಭಾರತ ಶೈಲಿಯಲ್ಲಿ ಸ್ಥಳೀಯ ಪುರೋಹಿತರ ತಂಡ ಆರತಿ ಬೆಳಗಿತು. ಆನಂತರ ವಾರಣಾಸಿಯಿಂದ ಬಂದಿದ್ದ 13 ಜನ ಪುರೋಹಿತರ ತಂಡ ಆರತಿ ಬೆಳಗಿತು. ನಾಡಿನ ಜೀವನದಿ, ನಮ್ಮೆಲ್ಲರ ತಾಯಿ ಕಾವೇರಿಗೆ ಭಕ್ತಿ, ಶ್ರದ್ಧೆ ಹಾಗೂ ಸಂಭ್ರಮದಿಂದ ಆರತಿ ಬೆಳಗುವ ಈ ದಿವ್ಯ ಕ್ಷಣವು ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ನಡೆಯುವ ಗಂಗಾ ಆರತಿಯನ್ನೇ ಮೀರಿಸುವಂತೆ ಭಾವಿಸಿತು.

ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾವೇರಿ ಆರತಿಯನ್ನು ಬರೀ ಧಾರ್ಮಿಕ ಕಾರ್ಯಕ್ರಮವಾಗಿ ರೂಪಿಸಿಲ್ಲ. ನಮ್ಮೆಲ್ಲರನ್ನು ಕಾಪಾಡುವ ಕಾವೇರಿ ತಾಯಿಗೆ ಗೌರವ ಸಲ್ಲಿಸುವ, ಪ್ರಾರ್ಥನೆ ಸಲ್ಲಿಸುವ ಕಾರ್ಯಕ್ರಮವಾಗಿ ರೂಪಿಸಿದ್ದೇವೆ. ಇದನ್ನು ಯಾವುದೇ ತೊಂದರೆ ಬಂದರೂ ನಿಲ್ಲಿಸಲು ಸಾಧ್ಯವಿಲ್ಲ. ಹೆತ್ತತಾಯಿಗೆ ಗೌರವ ನೀಡುತ್ತಿರುವಂತೆ ತುತ್ತು ನೀಡುವ ತಾಯಿಗೆ ಶುಭ ಲಗ್ನ, ಶುಭ ಗಳಿಗೆಯಲ್ಲಿ ನಮನ ಸಲ್ಲಿಸುತ್ತಿದ್ದೇವೆ. ದೇಹದಲ್ಲಿ ರಕ್ತ ಹರಿದರೆ ಶಕ್ತಿ, ಈ ರಕ್ತಕ್ಕೆ ಶಕ್ತಿ ನೀಡುವುದು ಕಾವೇರಿ ತಾಯಿ ನೀರು. ಈ ತಾಯಿಗೆ ಪೂಜೆ ಮಾಡುವುದೇ ಮನಸ್ಸಿಗೆ ನೆಮ್ಮದಿ, ಕಣ್ಣಿಗೆ ಹಬ್ಬ. ಕನ್ನಡಿಗರ ಭಾಗ್ಯ ದೇವತೆ, ರೈತರ ಜೀವದಾತೆ ಕಾವೇರಿ ಮಾತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

Kaveri arati

“ಕೊಡಗಿನಲ್ಲಿ ಹುಟ್ಟಿದ ಈ ನದಿ ಕನ್ನಂಬಾಡಿಯಲ್ಲಿ ನೆಲೆ ನಿಂತಿದ್ದಾಳೆ. ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆಯಾಗಿದೆ. ಕಾವೇರಿ ಆರತಿ ಕಾರ್ಯಕ್ರಮ ಎಷ್ಟು ದೊಡ್ಡ ಮಟ್ಟದ ಕಾರ್ಯಕ್ರಮವಾಗಿ ಬೆಳೆಯುತ್ತದೆ ಎಂಬುದನ್ನು ನಾನು ಈಗ ಹೇಳಲು ಹೋಗುವುದಿಲ್ಲ. ನಾವು ಯಾರೂ ಸಹ ಶಾಶ್ವತರಲ್ಲ.‌ ಆದರೆ ನಾವು ಮಾಡುವ ಕೆಲಸಗಳು ಶಾಶ್ವತ. ಕೃಷ್ಣರಾಜ ಒಡೆಯರ್ ಅವರನ್ನು, ವಿಶ್ವೇಶ್ವರಯ್ಯ ಅವರನ್ನು ಸದಾ ನೆನಪಿನಲ್ಲಿಟ್ಟುಕೊಂಡಿದ್ದೇವೆ. ಏಕೆಂದರೆ ನಾವು ಬದುಕುವುದೇ ಸ್ವಲ್ಪಕಾಲ ಆದರೆ ಕೆಲಸಗಳು ಸದಾಕಾಲ ಉಲಿಯಬೇಕು. ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆ ವಿಫಲವಾಗಲು ಸಾಧ್ಯವಿಲ್ಲ. ಅದೇ ರೀತಿ ನಮ್ಮನ್ನು ಕಾವೇರಿ ತಾಯಿ ಎಂದೂ ಕೈ ಬಿಡುವುದಿಲ್ಲ. 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ತುಂಬಿ ಇತಿಹಾಸ ನಿರ್ಮಾಣವಾಗಿದೆ” ಎಂದರು.

“ಕಾವೇರಿ ಆರತಿಯನ್ನು ಹತ್ತು ಸಾವಿರ ಜನರು ಕುಳಿತು ವೀಕ್ಷಣೆ ಮಾಡುವಂತಹ ಸ್ಟೇಡಿಯಂ ಮಾದರಿ ಮಂಟಪ ನಿರ್ಮಾಣ ಮಾಡಿ ವಾರಕ್ಕೆ ಮೂರು ದಿನ ಆರತಿ ನಡೆಸುವುದು ನಮ್ಮ ಆಲೋಚನೆಯಾಗಿತ್ತು. ಕಾರಣಾಂತರಗಳಿಂದ ಇದು ಸಾಧ್ಯವಾಗಿಲ್ಲ. ಸಚಿವರಾದ ಚೆಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ವಾರಣಾಸಿ, ಹರಿದ್ವಾರಗಳಲ್ಲಿ ನಡೆಯುವ ಗಂಗಾ ಆರತಿಯನ್ನು ಅಧ್ಯಯನ ಮಾಡಲು ತಂಡವನ್ನು ಕಳುಹಿಸಲಾಗಿತ್ತು. ಇವರು ವರದಿ ನೀಡಿದ್ದಾರೆ. ಆದಷ್ಟು ಬೇಗ ಇದು ನೆರವೇರುವಂತೆ ಆಗಲಿ” ಎಂದು ಹೇಳಿದರು.

Kaveri arati

ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಅಣೆಕಟ್ಟೆ ಬಳಿ ಶುಕ್ರವಾರದಿಂದ ಆರಂಭಗೊಂಡ ‘ಕಾವೇರಿ ಆರತಿ’ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ, ರೈತ ಸಂಘ, ವಿವಿಧ ಕನ್ನಡ ಪರ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕಪ್ಪುಪಟ್ಟಿ ಧರಿಸಿ ಅಣೆಕಟ್ಟೆಯ ಸೌತ್ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

ಶುಕ್ರವಾರ ಮಧ್ಯಾಹ್ನ ಮಂಡ್ಯ ನಗರದ ಸರ್‌ಎಂ.ವಿ. ಪ್ರತಿಮೆಯಿಂದ ಕೆಆರ್‌ಎಸ್ ಕಡೆಗೆ ಬಸ್‌ಗಳಲ್ಲಿ ಪ್ರತಿಭಟನಾಕಾರರು ಬಂದರು. ನಂತರ ಕೆ ಆರ್ ಎಸ್ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿ, ಪ್ರತಿಭಟನೆಯ ರೂಪುರೇಷೆ ಕುರಿತು ಚರ್ಚಿಸಿದರು. ಅಲ್ಲಿಂದ ಡ್ಯಾಂನ ಸೌತ್‌ ಗೇಟ್ ಬಳಿ ಧಾವಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

“ಕೆಆರ್‌ಎಸ್‌ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಯೋಜನೆಗಳನ್ನು ಮಾಡಬಾರದು ಎಂದು ಹೈಕೋರ್ಟ್ ಮಧ್ಯಂತರ ತಡೆ ಆದೇಶ ನೀಡಿದ್ದರೂ ರಾಜ್ಯ ಸರಕಾರ ಕಾವೇರಿ ಆರತಿಯನ್ನು ಮಾಡುವ ಮೂಲಕ ಜನರಲ್ಲಿ ಮೌಡ್ಯವನ್ನು ಬಿತ್ತುವ ಕೆಲಸ ಮಾಡುತ್ತಿದೆ” ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...