ಚಿಕ್ಕಮಗಳೂರು | ಯಶ್ವಂತ್ ಕಂಚಿವರ ಮೇಲೆ ದೂರು ಸತ್ಯಕ್ಕೆ ದೂರ; ಅಖಿಲ ಕರ್ನಾಟಕ ಯುವಜನ ವಿದ್ಯಾರ್ಥಿ ಒಕ್ಕೂಟ

Date:

ಅಖಿಲ ಕರ್ನಾಟಕ ಯುವಜನ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಯಶ್ವಂತ್ ಕಂಚಿವರ ಮೇಲೆ ನೀಡಿರುವ ಸುಳ್ಳು ದೂರನ್ನು ಮುಕ್ತಾಯಗೊಳಿಸಿ, ಸುಳ್ಳು ದೂರು ನೀಡಿರುವ ಮೂರು ಜನ ವ್ಯಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಯುವಜನ ವಿದ್ಯಾರ್ಥಿ ಒಕ್ಕೂಟ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ದಲಿತ ಸಂಘಟನೆ ಹೆಸರನ್ನು ಉಪಯೋಗಿಸಿಕೊಂಡು ಅಖಿಲ ಕರ್ನಾಟಕ ಯುವಜನ ವಿದ್ಯಾರ್ಥಿ ಒಕ್ಕೂಟ ಸಂಘಟನೆಯ ರಾಜ್ಯಾಧ್ಯಕ್ಷರ ಮೇಲೆ ಸುಳ್ಳು ದೂರು ನೀಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಅಖಿಲ ಕರ್ನಾಟಕ ಯುವಜನ ವಿದ್ಯಾರ್ಥಿ ಒಕ್ಕೂಟ ಜಿಲ್ಲಾ ಅಧ್ಯಕ್ಷರಾದ ಹೇಮಂತ್ ಕುಮಾರ್ ಹೇಳಿದರು. 

ಕರ್ನಾಟಕ ರಾಜ್ಯ ಬ್ಲೂ ಆರ್ಮಿ ಶೂದ್ರ ಶ್ರೀನಿವಾಸ್, ರಾಘವೇಂದ್ರ, ಮತ್ತು ಗಿರೀಶ್ ಎಂಬ ಈ ಮೂವರು ವ್ಯಕ್ತಿಗಳಿಗೂ ದಲಿತ ಸರ್ಕಾರಿ ನೌಕರರಿಗೂ ಯಾವುದೇ ಸಂಬಂಧವಿಲ್ಲ, ಶೂದ್ರ ಶ್ರೀನಿವಾಸ್ ಎಂಬ ವ್ಯಕ್ತಿ ತನ್ನ ಸ್ವಾರ್ಥಕ್ಕಾಗಿ ಇನ್ನೊಂದು ಸಂಘಟನೆಯ ರಾಜ್ಯಾಧ್ಯಕ್ಷರನ್ನು ತೇಜೋವಧೆ ಮಾಡಲು ದಲಿತ ಸರ್ಕಾರಿ ನೌಕರರ ಪರ ಎತ್ತಿಕಟ್ಟಿ ತಮ್ಮ ಬೇಳೆ ಬೇಯಿಸಿಕೊಂಡಿದ್ದಾರೆ. ಈ ವ್ಯಕ್ತಿ ಮಾಡಿರುವ ಆರೋಪದಂತೆ ವಸತಿ ನಿಲಯಗಳಿಗೆ ರಾಜ್ಯಾಧ್ಯಕ್ಷರು ಭೇಟಿ ನೀಡಿದ್ದೇ ಆಗಿದ್ದಲ್ಲಿ ವಸತಿ ನಿಲಯದಲ್ಲಿರುವ ಅಧಿಕಾರಿಗಳು ದೂರು ದಾಖಲಿಸಬೇಕಾಗಿತ್ತು, ಆದರೆ ಯಾವುದೇ ದೂರು ನೀಡಿಲ್ಲ, ಸಂಬಂಧವಿಲ್ಲದ ವ್ಯಕ್ತಿ ಸುಳ್ಳು ಆರೋಪ ಮಾಡಿರುವುದು ಕಾನೂನಿಗೆ ವಿರೋಧವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನಗತ್ಯವಾಗಿ ನಮ್ಮ ರಾಜ್ಯಾಧ್ಯಕ್ಷರು ವಸತಿ ನಿಲಯಗಳಿಗೆ ಭೇಟಿ ನೀಡುವಷ್ಟು ಕಾಲಾವಕಾಶ ಅವರ ಬಳಿ ಇಲ್ಲ, ಕಾರಣ ರಾಜ್ಯದ್ಯಂತ ಯುವಜನ ವಿದ್ಯಾರ್ಥಿ ಒಕ್ಕೂಟದ ತಂಡ ಕಟ್ಟಿ ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವಲ್ಲೇ ಸಮಯ ಸಾಕಾಗುತ್ತಿಲ್ಲ ಅಂದಮೇಲೆ ವಸತಿ ನಿಲಯಗಳಿಗೆ ಭೇಟಿ ನೀಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು. ನಮ್ಮ ಸಂಘಟನೆಯು ದಿನೇ ದಿನೇ ಪ್ರಬುದ್ಧ ಮಾನಕ್ಕೆ ಬರುತ್ತಿರುವುದು ಮತ್ತು ನಮ್ಮ ಏಳಿಗೆಯನ್ನು ಸಹಿಸದೇ ಇರುವುದು ಮತ್ತು ನಿಜವಾದ ದಲಿತ ಯುವಪಡೆ ವಿದ್ಯಾರ್ಥಿ ಒಕ್ಕೂಟದ ಪರವಾಗಿ ಧ್ವನಿ ಎತ್ತುತ್ತಿರುವ ನಮ್ಮ ರಾಜ್ಯಾಧ್ಯಕ್ಷರಾದ ಯಶವಂತ್ ಕಂಚಿವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಉದ್ದೇಶದಿಂದ ಸುಳ್ಳು ದೂರನ್ನ ದಾಖಲಿಸಿದ್ದಾರೆ ಎಂದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕೇಂದ್ರ,ರಾಜ್ಯ ಅರಣ್ಯ ಕಾಯ್ದೆ: ರೈತ, ಕಾರ್ಮಿಕರಿಗೆ ಸಂಕಷ್ಟ; ಮಲೆನಾಡು ರೈತ, ಕಾರ್ಮಿಕ ಹಿತರಕ್ಷಣಾ ಸಮಿತಿ

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಸುನಿಲ್, ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್, ರಾಘವೇಂದ್ರ, ಚೇತನ್, ಪ್ರತಾಪ್, ಕಾರ್ತಿಕ್, ಮದನ್, ನಿತಿನ್, ಕಾರ್ತಿಕ್, ಸುಜಯ್, ಭರತ್, ಮದನ್, ದೀಕ್ಷಯ, ಪ್ರತಾಪ್, ಪ್ರದೀಪ್, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...