ಚಿಕ್ಕಮಗಳೂರು l ಹಣ ದುರುಪಯೋಗ ಮತ್ತು ಕರ್ತವ್ಯ ಲೋಪ ಆರೋಪ: ಗ್ರಾ ಪಂ ಪಿಡಿಒ ಅಮಾನತು

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಪುರ ಗ್ರಾಮ ಪಂಚಾಯಿತಿ ಪಿಡಿಒ ಆಗಿ ಕರ್ತವ್ಯ ನಿರ್ವಹಿಸಿದ್ದ ಬಿ. ಎಸ್ ಶುಭಲಕ್ಷ್ಮಿ ಅವರನ್ನು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಎಸ್‌ ಕೀರ್ತನಾ ಅಮಾನತುಗೊಳಿಸಿದ್ದಾರೆ.

ಕುಂಕಾನಾಡು ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶುಭಲಕ್ಷ್ಮಿ ಅವರು, ಪುರ ಗ್ರಾ.ಪಂ. ವರ್ಗ-1ರ ಖಾತೆಯಲ್ಲಿನ ಹಣವನ್ನು ಕಾನೂನು ಬಾಹಿರವಾಗಿ ವ್ಯಯಮಾಡಿದ್ದಾರೆ ಎಂದು ಕುಂಕನಾಡು ಆರ್.ಮಂಜುನಾಥ್ ಎಂಬುವರು ನೀಡಿದ ದೂರಿನ ಅನ್ವಯ ತನಿಖೆ ನಡೆಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಖಾಸಗಿ ಬಸ್ ಪಲ್ಟಿ: 25ಕ್ಕಿಂತ ಹೆಚ್ಚು ಜನರಿಗೆ ಗಾಯ; ಇಬ್ಬರಿಗೆ ಗಂಭೀರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023-24ನೇ ಸಾಲಿನಲ್ಲಿ ವರ್ಗ-1ರಲ್ಲಿ ನೀರು, ಗಂಟಿಗಳಿಗೆ ನಿಯಮ ಬಾಹಿರವಾಗಿ ಚೆಕ್ ಮೂಲಕ ₹4.62 ಲಕ್ಷ ಹಣ ಪಾವತಿಸಿದ್ದಲ್ಲದೇ, ಚುನಾವಣಾ ವೆಚ್ಚದ ಹಣವನ್ನು ಪಾವತಿಸಿ ಹಣಸಂದ ರಶೀದಿಗೆ ಸಹಿ ಪಡೆದಿರಲಿಲ್ಲ. ಖರೀದಿ ಪುಸ್ತಕ, ಸಾಮಗ್ರಿಗಳ ದಾಸ್ತಾನು ಮತ್ತು ವಿತರಣಾ ವಹಿಯನ್ನು ಸಮರ್ಪಕವಾಗಿ ನಿರ್ವಹಿಸದೇ, ಕರ್ತವ್ಯ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಕ್ರಮ ಜರುಗಿಸಲು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯಿತಿ ಸಿಇಒಗೆ ವರದಿ ಸಲ್ಲಿಸಿದ್ದರು. ತನಿಖಾ ನಡೆದ ಬಳಿಕ ಸೇವೆಯಿಂದ ಅಮಾನತು ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...