ಚಿಕ್ಕಮಗಳೂರು l ದಯಾಮರಣ ಕೋರಿ ಏಕಾಂಗಿ ಪ್ರತಿಭಟಿಸಿದ ರೈತ 

Date:

ರಸ್ತೆ ಅಗಲೀಕರಣದಿಂದ ಮನೆ ಹಾಗೂ ಜಮೀನು ಕಳೆದುಕೊಳ್ಳುವ ಆತಂಕದಲ್ಲಿ ರೈತರೊಬ್ಬರು ದಯಾಮರಣ ನೀಡುವಂತೆ ಹಗ್ಗ, ಕತ್ತಿ, ವಿಷದ ಬಾಟಲಿಯನ್ನು ಇಟ್ಟುಕೊಂಡು ಏಕಾಂಗಿಯಾಗಿ ಪ್ರತಿಭಟನೆಗೆ ಕುಳಿತಿರುವ ಘಟನೆಯೊಂದು, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ತಹಶೀಲ್ದಾರ್ ಕಚೇರಿಯ ಮುಂದೆ ಮಂಗಳವಾರ ನಡೆದಿದೆ.

Screenshot 2025 03 20 19 31 03 57 7352322957d4404136654ef4adb64504
ರೈತ ಐ ಎಂ ಶ್ರೀನಿವಾಸ್ ಕತ್ತಿ, ಹಗ್ಗ , ವಿಷದ ಬಾಟಲಿ ಇಟ್ಟು ಏಕಾಂಗಿ ಪ್ರತಿಭಟನೆ

ಕನ್ನಾಪುರ ಮಾರ್ಗವಾಗಿ ಹಾದು ಹೋಗಿರುವ ವಿರಾಜಪೇಟೆ, ಬೈಂದೂರು ರಾಜ್ಯ ಹೆದ್ದಾರಿಯನ್ನು 50 ಅಡಿ ಅಗಲೀಕರಣ ಮಾಡುವುದಾಗಿ ನೋಟಿಸನ್ನು ಅಧಿಕಾರಿಗಳು ನೀಡಿದ್ದಾರೆ. ಹಾಗೆಯೇ, ರಸ್ತೆ ಅಗಲೀಕರಣ ಮಾಡಲು ಜಾಗವನ್ನು ಗುರುತು ಪಡಿಸಿದ್ದಾರೆ. ರಸ್ತೆ ಅಗಲೀಕರಣದಿಂದಾಗಿ ನಮ್ಮ ಮನೆ, ಜಮೀನು ಕಳೆದುಕೊಳ್ಳಬೇಕಾಗುತ್ತದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಏನೂ ಪ್ರಯೋಜನವಿಲ್ಲ, ಗಂಟೆಗಟ್ಟಲೆ ಬೆಳಗ್ಗೆಯಿಂದ ರಾತ್ರಿಯವರೆಗೂ ಅಧಿಕಾರಿಗಳ ಕಚೇರಿ ಮುಂದೆ ಕೂರಿಸಿಕೊಂಡು ನಂತರ ಮನೆಗೆ ಹೋಗಿ ಎಂದು ಅಧಿಕಾರಿಗಳು ಹೇಳುತ್ತಾರೆ, ಎಂದು ದಯಾಮರಣ ಕೋರಿದ ರೈತ ಐ ಎಂ ಶ್ರೀನಿವಾಸ್ ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

Screenshot 2025 03 20 20 50 53 69 a49c29324e15581d7b6335d31382dfc2
ರೈತ ದಯಾಮರಣ ಕೋರಿರುವ ಪತ್ರ

ದಯಾಮರಣ ಅರ್ಜಿ ಸಲ್ಲಿಸಿ 60 ದಿನ ಕಳೆದರೂ ಯಾವುದೇ ವಿಚಾರಣೆ ನಡೆಯದ ಕಾರಣ ಮತ್ತು ಅಧಿಕಾರಿಗಳ ಕಚೇರಿಗೆ ಪ್ರತಿದಿನ ಅಲೆದು ಸಾಕಾಗಿ ಕೊನೆಗೆ ನ್ಯಾಯ ಕೊಡಿ ಇಲ್ಲ ಸಾಯಲು ಬಿಡಿ, ಎಂದು ಮೂಡಿಗೆರೆ ತಹಶೀಲ್ದಾರ್ ಕಚೇರಿ ಮುಂದೆ ರೈತರಾದ ಐ ಎಂ ಶ್ರೀನಿವಾಸ್ ಎಂಬ ವ್ಯಕ್ತಿ ವಿಷದ ಬಾಟಲಿ, ಹಗ್ಗ, ಕತ್ತಿ ಇಟ್ಟುಕೊಂಡು ಪ್ರತಿಭಟಿಸಿದ್ದಾರೆ. ಸುಮಾರು 30 ವರ್ಷದಿಂದ ನ್ಯಾಯಾಲಯದ ಆದೇಶವನ್ನು ತಾಲ್ಲೂಕು ಕಛೇರಿಯಲ್ಲಿ ಇಲ್ಲಿತನಕ ವಿಚಾರಣೆ ಮಾಡದೇ ಇರುವುದರಿಂದ, ಲೋಕೋಪಯೋಗಿ ಇಲಾಖೆಯವರು ನಿಮಗೆ ಪ್ರಶ್ನೆ ಮಾಡುವ ಅಧಿಕಾರ ಇಲ್ಲವೆಂದು ಹೇಳುತ್ತಾರೆ. ನನ್ನ ಮನವಿಗೆ ಅಧಿಕಾರಿಗಳಿಂದ ಯಾವುದೇ ಸ್ಪಂದನೆ ಸಿಗದ ಕಾರಣ  ಸಾಯಲು ಮುಂದಾಗಿದ್ದೇನೆಂದು ಐ ಎಂ ಶ್ರೀನಿವಾಸ್ ತಿಳಿಸಿದರು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Screenshot 2025 03 20 19 35 57 76 7352322957d4404136654ef4adb64504
ಅಧಿಕಾರಿಗಳಿಗೆ ಸಲ್ಲಿಸಿರುವ ಅರ್ಜಿ

ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾಧಿಕಾರಿಯಾದ ಮೀನಾ ನಾಗರಾಜ್ ಅವರಿಗೆ ಮನವಿ ಮಾಡಿ ಏಕಾಂಗಿ ಪ್ರತಿಭಟನೆಗೆ ಕುಳಿತಿದ್ದೆ. ಇದನ್ನೂ ಗಮನಿಸಿದ ಮೂಡಿಗೆರೆ ತಾಲೂಕಿನ ಪೊಲೀಸರು ಹಗ್ಗ, ಕತ್ತಿ, ವಿಷದ ಬಾಟಲಿಯನ್ನೂ ವಶಕ್ಕೆ ಪಡೆದಿದ್ದಾರೆ ಎಂದು ರೈತರಾದ ಐ ಎಂ ಶ್ರೀನಿವಾಸ್ ಈದಿನ.ಕಾಮ್ ಗೆ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪರೀಕ್ಷೆಯಲ್ಲಿ ಅನುತ್ತೀರ್ಣ ಭಯದಿಂದ ವಿದ್ಯಾರ್ಥಿನಿ ಅತ್ಮಹತ್ಯೆ 

ನ್ಯಾಯ ದೊರೆತ್ತಿಲ್ಲವೆಂದರೆ ನ್ಯಾಯಕ್ಕಾಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗಾಂಧಿಜೀಗೆ ಮನವಿ ಸಲ್ಲಿಸಿ. ಹಾಗೆಯೇ,  ಅಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತೇನೆಂದು ಐ ಎಂ ಶ್ರೀನಿವಾಸ್ (ರೈತ) ತಿಳಿಸಿದರು. ಆದಷ್ಟು ಬೇಗ ರೈತರಾದ ಐ ಎಂ ಶ್ರೀನಿವಾಸ್ ಅವರಿಗೆ ನ್ಯಾಯ ಸಿಗಲಿ ಎಂದು ಆಶಿಸೋಣ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...