ಮತ್ತೆ ಪ್ರಶ್ನೆಗಳು ಮುಂದುವರಿಯಲಿದೆ : ರಾಹುಲ್ ಗಾಂಧಿ ಶಿಕ್ಷೆಗೆ ಸುಪ್ರೀಂ ತಡೆ ಬಳಿಕ ಕಾಂಗ್ರೆಸ್ ಟ್ವೀಟ್

Date:

ರಾಹುಲ್ ಗಾಂಧಿಯವರಿಗೆ ಮೋದಿ ಉಪನಾಮ ಪ್ರಕರಣದಲ್ಲಿ ನೀಡಲಾಗಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ ಬಳಿಕ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಮತ್ತೆ ಪ್ರಶ್ನೆಗಳು ಮುಂದುವರಿಯಲಿದೆ’ ಎಂದು ಹೇಳಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕೋಲಾರದಲ್ಲಿ ಮಾಡಿದ ಭಾಷಣಕ್ಕೆ ಸಂಬಂಧಿಸಿದಂತೆ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿ ಸಂಸದ ಸ್ಥಾನದಿಂದಲೂ ಅನರ್ಹಗೊಂಡಿದ್ದರು.

ಮಾನಹಾನಿ ಪ್ರಕರಣದಲ್ಲಿ ವಿಧಿಸಲಾಗಿದ್ದ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ಶುಕ್ರವಾರ ತಡೆ ನೀಡಿದೆ. ಇದರಿಂದ ಅವರು ಸಂಸದ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಹೀಗಾಗಿ ರಾಹುಲ್ ಗಾಂಧಿ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಇದ್ದ ಆತಂಕ ಕೂಡ ನಿವಾರಣೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೋದಿ ಉಪನಾಮ ಪ್ರಕರಣ : ರಾಹುಲ್ ಗಾಂಧಿ ಶಿಕ್ಷೆಗೆ ತಡೆ ನೀಡಿದ ಸುಪ್ರೀಂ

ಈ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಹುಲ್ ಗಾಂಧಿ ಈ ಹಿಂದೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಜೊತೆಗಿರುವ ಫೋಟೋವನ್ನು ಅದಾನಿ ಹಗರಣದ ಸಂದರ್ಭದ ಚರ್ಚೆಯ ವೇಳೆ ಪ್ರದರ್ಶಿಸಿದ್ದರು. ಈ ಫೋಟೋವನ್ನು ಟ್ವೀಟ್ ಮಾಡಿದ್ದು, ‘ಬರುತ್ತಿದ್ದೇನೆ, ಪ್ರಶ್ನೆಗಳು ಮುಂದುವರಿಯಲಿದೆ’ ಎಂದು ತಿಳಿಸಿದೆ.

‘ಇದು ದ್ವೇಷದ ವಿರುದ್ಧ ಪ್ರೀತಿಯ ಗೆಲುವು, ಸತ್ಯಮೇವ ಜಯತೇ- ಜೈ ಹಿಂದ್’ ಎಂದು ಕಾಂಗ್ರೆಸ್ ಐಟಿ ಸೆಲ್ ಇನ್ನೊಂದು ಟ್ವೀಟ್‌ನಲ್ಲಿ ಬರೆದುಕೊಂಡಿದೆ.

ಸುಪ್ರೀಂ ಆದೇಶದ ಬಳಿಕ ಸೋಷಿಯಲ್ ಮೀಡಿಯಾಗಳಲ್ಲಿ ರಾಹುಲ್ ಗಾಂಧಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...