ಸಿಎಸ್‌ ಶಾಲಿನಿ ರಜನೀಶ್‌ಗೆ ಅವಹೇಳನ, ಬಿಜೆಪಿಯ ಎನ್ ರವಿಕುಮಾರ್ ವಿರುದ್ಧ ಎಫ್‌ಐಆರ್‌

Date:

“ಮುಖ್ಯ ಕಾರ್ಯದರ್ಶಿ ಶಾಲಿನಿ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್‌ ರವಿಕುಮಾರ್‌ ವಿರುದ್ಧ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೆ.ಪಿ.ನಗರದ ನಿವಾಸಿ, ನಂದಾದೀಪಾ ಮಹಿಳಾ ಸಂಘದ ಅಧ್ಯಕ್ಷೆ ನಗರ್ತನಾ ಅವರು ನೀಡಿದ ದೂರಿನ ಮೇರೆಗೆ ಎಫ್‌ಐಆ‌ರ್ ದಾಖಲಾಗಿದೆ. ಪ್ರಕರಣದ ಸಂಬಂಧ ಎನ್.ರವಿಕುಮಾರ್ ಅವರಿಗೆ ನೋಟಿಸ್‌ ಜಾರಿ ವಿಚಾರಣೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಪ್ರಧಾನ ಕಾರ್ಯದರ್ಶಿ ಎನ್.ಮನೋಹರ್ ಅವರೂ ಎನ್‌.ರವಿಕುಮಾ‌ರ್ ಅವರ ವಿರುದ್ಧ ಬುಧವಾರ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಸಭಾಪತಿಗಳನ್ನು ಭೇಟಿಯಾದ ಸಲೀಂ ಅಹ್ಮದ್‌ ನಿಯೋಗವು, ಎನ್‌ ರವಿಕುಮಾರ್‌ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ವಿಧಾನ ಪರಿಷತ್‌ನ ನಿಯಮಗಳು ಹಾಗೂ ನೈತಿಕ ಮಾರ್ಗಸೂಚಿಗಳ ಪ್ರಕಾರ ರವಿಕುಮಾರ್ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಹಾಗೂ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕು ಎಂದು ಸಭಾಪತಿಗಳನ್ನು ನಿಯೋಗ ಆಗ್ರಹಿಸಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...