ಬೀದರ್‌ | ಅನಧಿಕೃತ ಕೋಚಿಂಗ್‌ ಕೇಂದ್ರಗಳ ವಿರುದ್ಧ ಕ್ರಮಕ್ಕೆ ದಲಿತ ಸೇನೆ ಆಗ್ರಹ

Date:

ಔರಾದ ತಾಲೂಕಿನಾದ್ಯಂತ ನಿಯಮಬಾಹಿರವಾಗಿ ನಡೆಯುತ್ತಿರುವ ಕೋಚಿಂಗ್ ಕೇಂದ್ರಗಳು ಹಾಗೂ ಅನಧಿಕೃತ ವಸತಿ ಶಾಲೆಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ದಲಿತ ಸೇನೆ ಆಗ್ರಹಿಸಿದೆ.

ಈ ಕುರಿತು ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಔರಾದ್ ತಹಸೀಲ್ದಾರ್ ಮಲ್ಲಶೆಟ್ಟಿ ಚಿದ್ರೆ ಅವರಿಗೆ ಸಲ್ಲಿಸಿದರು.

“ಶಿಕ್ಷಣ ಇಲಾಖೆಯಿಂದ ಅನುಮತಿ ಪಡೆಯದೆ ತಾಲೂಕಿನಲ್ಲಿ ಅನಧಿಕೃತವಾಗಿ ಕೋಚಿಂಗ್‌ ಕೇಂದ್ರ ಹಾಗೂ ವಸತಿ ಶಾಲೆಗಳು ರಾಜಾರೋಷವಾಗಿ ನಡೆಯುತ್ತಿವೆ. ನವೋದಯ, ಕಿತ್ತೂರು ರಾಣಿ ಚೆನ್ನಮ್ಮ, ಮೊರಾರ್ಜಿ ದೇಸಾಯಿ, ಆದರ್ಶ ಸೇರಿದಂತೆ ಇತರೆ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಕೊಡಿಸಲಾಗುವುದೆಂದು ಭರವಸೆ ನೀಡಿ ಮುಗ್ಧ ಪಾಲಕರಿಂದ ಸಾವಿರಾರು ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಸತಿ ಶಾಲೆಗಳ ಹೆಸರಿನಲ್ಲಿ ಪೋಷಕರಿಂದ ದುಬಾರಿ ಹಣ ಪಡೆದು ಮಕ್ಕಳಿಗೆ, ವಿಶೇಷವಾಗಿ ಬಾಲಕಿಯರಿಗೆ ಸೂಕ್ತ ರಕ್ಷಣೆ ಇಲ್ಲದೆ ವಸತಿ ಶಾಲೆಗಳು ನಡೆಸಿ ಶಿಕ್ಷಣದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಇಲಾಖೆ ಅನುಮತಿ ಇಲ್ಲದೆ ಕೋಚಿಂಗ್‌ ಕೇಂದ್ರ ಹಾಗೂ ವಸತಿ ಶಾಲೆಗಳು ನಡೆಸುವ ಮಾಲೀಕರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಿ ಅಕ್ರಮಕ್ಕೆ ಕಡಿವಾಣ ಹಾಕಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್‌ಗೆ ಜಾಮೀನು

ಈ ಸಂದರ್ಭದಲ್ಲಿ ದಲಿತ ಸೇನೆ ತಾಲೂಕು ಅಧ್ಯಕ್ಷ ಸುನಿಲ್ ಮಿತ್ರಾ, ಜಿಲ್ಲಾ ಸಂಚಾಲಕ ರತ್ನದೀಪ ಕಸ್ತೂರೆ, ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಅನಿಲ್ ಹೆಡೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಆತ್ಮಹತ್ಯೆ ಯತ್ನಿಸಿದ ಬ್ರಿಮ್ಸ್‌ ಲ್ಯಾಬ್‌ ಟೆಕ್ನಿಷಿಯನ್‌ ಆರೋಗ್ಯ ವಿಚಾರಿಸಿದ ಸಚಿವ ಖಂಡ್ರೆ

ಬ್ರಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಸೇವೆ ಸಲ್ಲಿಸುತ್ತಿರುವ ನಿಲೋಫರ್ ಅವರು,...

ಕಲಬುರಗಿ | ‘ಆರ್‌ಕೆ ಕೆಫೆ’ ಶಾರ್ಟ್ ಸರ್ಕ್ಯೂಟ್‌ಗೆ ಆಹುತಿ : ಯುವ ಉದ್ಯಮಿ ಕನಸಿಗೆ ಹೊಡೆತ

ಅಫಜಲಪುರ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಹೊಸದಾಗಿ ಆರಂಭಿಸಲಾಗಿದ್ದ ‘ಆರ್‌ಕೆ ಕೆಫೆ’ಯಲ್ಲಿ ವಿದ್ಯುತ್...